COMEDK–UGET 2026 ಪ್ರವೇಶ ಪರೀಕ್ಷೆ ಮೇ 9ಕ್ಕೆ ನಿಗದಿ, ಫೆಬ್ರವರಿ 3ರಿಂದ ಅರ್ಜಿ ಸಲ್ಲಿಕೆ ಪ್ರಾರಂಭ
ಬೆಂಗಳೂರು: ಕಾಮೆಡ್‌ಕೆ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ಸ್ ಬಂದಿದೆ. ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಹಾಗೂ ದಂತ ಕಾಲೇಜುಗಳ ಒಕ್ಕೂಟ (COMEDK) 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶ ಪರೀಕ್ಷೆಯನ್ನು ಮೇ 9 (ಶನಿವಾರ) ರಂದು ನಡೆಸಲು ನಿರ್ಧರಿಸಲಾಗಿದೆ.
COMEDK-UGET ಎಂದು ಕರೆಯಲ್ಪಡುವ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ರಾಜ್ಯದಾದ್ಯಂತ 150ಕ್ಕೂ ಹೆಚ್ಚು ಖಾಸಗಿ ಅನುದಾನರಹಿತ ಕಾಲೇಜುಗಳಲ್ಲಿ ವಿವಿಧ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವುದಕ್ಕೆ ಅವಕಾಶ ಇರಲಿದೆ. ಇನ್ನು ಈ ಪರೀಕ್ಷೆಗೆ ದೇಶಾದ್ಯಂತದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದಕ್ಕೆ ಅವಕಾಶ ಇರಲಿದೆ. ಈ ಪರೀಕ್ಷೆಯು ದೇಶದ ಪ್ರಮುಖ 200 ನಗರಗಳಲ್ಲಿ 400 ಕೇಂದ್ರಗಳಲ್ಲಿ ನಡೆಯಲಿದೆ.

COMEDK ಅಂದಾಜಿನ ಪ್ರಕಾರ ಈ ವರ್ಷ ಅಂದಾಜು 1.4 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಿಂಡೋ ಫೆಬ್ರವರಿ 3 ರಂದು ಪ್ರಾರಂಭವಾಗಲಿದೆ. ವಿದ್ಯಾರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 16 ರವರೆಗೆ ಸಮಯವಿರಲಿದೆ. ಕರ್ನಾಟಕೇತರ ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕ್ರಿಯೆಯನ್ನು ವಿಳಂಬ ಮಾಡಿದೆ. ಆದರೆ ಕಾಮೆಡ್‌ಕೆ ಕೌನ್ಸೆಲಿಂಗ್ ವೇಳಾಪಟ್ಟಿಯಲ್ಲಿ ಹೆಚ್ಚಿನ ಬದಲಾವಣೆ ಮಾಡದೆ ಇರುವುದಕ್ಕೆ ನಿರ್ಧರಿಸಿದೆ ಎಂದು ಹೇಳಲಾಗಿದೆ. ಇನ್ನು COMEDK-UGET ಪರೀಕ್ಷೆಯ ಕುರಿತು ಹೆಚ್ಚಿನ ಮಾಹಿತಿಗಾಗಿ www.Comedk.org ಗೆ ಭೇಟಿ ನೀಡಬಹುದಾಗಿದೆ.
ಇನ್ನು ಕಾಮೆಡ್‌ಕೆ ಸಂಸ್ಥೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಪ್ರವೇಶ ಪ್ರಕ್ರಿಯೆಯಿಂದ ಪ್ರತ್ಯೇಕವಾಗಿ ತನ್ನ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಮುಂದುವರಿಸಲು ನಿರ್ಧರಿಸಿದೆ. KEA ಕಡೆಯಿಂದ ವಿಳಂಬವಾದರೂ, ಕರ್ನಾಟಕ ಹೊರಗಿನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಮೆಡ್‌ಕೆ ತನ್ನ ಕೌನ್ಸಲಿಂಗ್ ಪ್ರಕ್ರಿಯೆಯನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಲಿದೆ ಎಂದು ಹೇಳಲಾಗಿದೆ. ಪರೀಕ್ಷೆ, ಅರ್ಜಿ ಸಲ್ಲಿಕೆ ವಿಧಾನ, ಅರ್ಹತೆ, ವೇಳಾಪಟ್ಟಿ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು www.comedk.org ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಮೆಡ್‌ಕೆ ಎಂದರೇನು ?
ಕಾಮೆಡ್‌ಕೆ (COMEDK) ಎಂದರೆ ಕರ್ನಾಟಕದ ಖಾಸಗಿ ಎಂಜಿನಿಯರಿಂಗ್, ವೈದ್ಯಕೀಯ ಮತ್ತು ದಂತ ಕಾಲೇಜುಗಳ ಒಕ್ಕೂಟವಾಗಿದೆ. ಇದು ಪ್ರತಿವರ್ಷ ಪ್ರವೇಶ ಪರೀಕ್ಷೆ ನಡೆಸಿ ಖಾಸಗಿ ಅನುದಾನರಹಿತ ಕಾಲೇಜುಗಳಲ್ಲಿ ಪ್ರವೇಶ ಕಲ್ಪಿಸುತ್ತದೆ. ಕರ್ನಾಟಕದ ಹೊರಗಿನ ವಿದ್ಯಾರ್ಥಿಗಳಿಗೆ ಇದು ಅತ್ಯಂತ ಮುಖ್ಯವಾದ ಪ್ರವೇಶ ಮಾರ್ಗವಾಗಿದ್ದು, ಪಾರದರ್ಶಕ ಹಾಗೂ ಸುವ್ಯವಸ್ಥಿತ ಪ್ರವೇಶ ಪ್ರಕ್ರಿಯೆಗಾಗಿ ಪ್ರಸಿದ್ಧಿ ಗಳಿಸಿದೆ.












Click it and Unblock the Notifications