"ನಿವೇಶನದ ಒಸಿ, ಸಿಸಿಗೆ ಕಮಿಶನ್ ನಿಗದಿ; ಯಾರೂ ಮನೆ ಕಟ್ಟಲು ಸಾಧ್ಯವಿಲ್ಲ"
ಬೆಂಗಳೂರು, ಅಕ್ಟೋಬರ್ 31: ನಿವೇಶನಗಳಿಗೆ, ಖಾತಾಗೆ ಸಂಬಂಧಿಸಿದಂತೆ ವಸೂಲಿ ಮಾಡಲಾಗುತ್ತಿದೆ. ಒಸಿ, ಸಿಸಿಗೆ ಕಮಿಶನ್ ನಿಗದಿಯಾಗಿದೆ. ಯಾರೂ ಮನೆ ಕಟ್ಟಲು ಸಾಧ್ಯವಿಲ್ಲ. ಅಭಿವೃದ್ಧಿ ಶುಲ್ಕವನ್ನು 4-5 ಲಕ್ಷ ರೂ. ಗೆ ಏರಿಸಲಾಗಿದೆ. ಕರ್ನಾಟಕವೆಂದರೆ ಕಲೆಕ್ಷನ್ ಸೆಂಟರ್ ಆಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರು ಹೇಳಿದರು.
ಇಂದು ಮಾಧ್ಯಮಗಳ ಜೊತೆಗೆ ಆರ್ ಅಶೋಕ್ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ವಯನಾಡಿನಲ್ಲಿದೆ. ಹಿಂದೆ ಆನೆಯಿಂದ ಸತ್ತಿದ್ದಕ್ಕೆ ಪರಿಹಾರ ಕೊಟ್ಟಿದ್ದರು. ಈಗ ವಯನಾಡಿನಲ್ಲಿ ಪ್ರವಾಸ ಮಾಡಿ ಎಂದು ಜಾಹೀರಾತು ನೀಡುತ್ತಿದ್ದಾರೆ. ಅಲ್ಲಿ ಕರ್ನಾಟಕದ ಯಾವುದೇ ಸ್ಥಳ ಇಲ್ಲ. ಜೋಗ, ಹಂಪಿ, ಕೊಡಗು, ಗೋಕರ್ಣದಲ್ಲಿರುವಂತಹ ಸ್ಥಳ ವಯನಾಡಿನಲ್ಲಿ ಇಲ್ಲ. ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರ ಫ್ಲೆಕ್ಸ್ ನೋಡಲು ಜನರು ಅಲ್ಲಿಗೆ ಪ್ರವಾಸ ಹೋಗಬೇಕಿದೆ. ಮೈಸೂರು ಅರಮನೆ ಬಗ್ಗೆ ಪ್ರಚಾರ ಮಾಡುವುದನ್ನು ಬಿಟ್ಟು ವಯನಾಡಿನ ರಾಹುಲ್ ಗಾಂಧಿ ಅರಮನೆ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ ಎಂದರು.

ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್‌ಬಾಗ್‌ನಲ್ಲಿ ನವೆಂಬರ್ 2 ರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬೆಂಗಳೂರಿನಲ್ಲಿ ಸುರಂಗ ರಸ್ತೆ ಯೋಜನೆಯ ಹೆಸರು ಕೇಳಿದರೆ ಜನರು ಭೀತಿಗೊಳ್ಳುತ್ತಿದ್ದಾರೆ. ಎಲ್ಲಿ ಯಾರ ಮನೆ ಹೋಗಲಿದೆ ಎಂದು ತಿಳಿಯುತ್ತಿಲ್ಲ. ಲಾಲ್‌ಬಾಗ್‌ನಲ್ಲಿ 6 ಎಕರೆ ಜಮೀನು ಕಬಳಿಕೆ ಮಾಡಿ ಯೋಜನೆ ಮಾಡಲಾಗುತ್ತದೆ. ಇದಕ್ಕೆ ಯಾವ ಇಲಾಖೆಯೂ ಅನುಮತಿ ನೀಡಿಲ್ಲ. ಬಿಹಾರ ಚುನಾವಣೆ ಬಂದಿರುವುದರಿಂದ ಹಣ ಮಾಡಲು ಈ ಯೋಜನೆ ಜಾರಿ ಮಾಡುತ್ತಿರಬಹುದು. ಲಾಲ್‌ಬಾಗ್ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಘೋಷಣೆಯಡಿ ಇದೇ ನವೆಂಬರ್ 2 ರ ಭಾನುವಾರ ಬೆಳಗ್ಗೆ 8 ಗಂಟೆಗೆ ಲಾಲ್‌ಬಾಗ್‌ನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಎಲ್ಲ ಶಾಸಕರು ಸಭೆ ಸೇರಿ ಚರ್ಚೆ ಮಾಡುತ್ತೇವೆ. ಈ ಬಗ್ಗೆ ಹೋರಾಟ ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ. ಬಿಜೆಪಿ ಅವಧಿಯಲ್ಲಿ ರಸ್ತೆ ದುರಸ್ತಿಗೆ 8,000 ಕೋಟಿ ರೂ. ನೀಡಲಾಗಿತ್ತು. ಈಗ ಕಾಂಗ್ರೆಸ್ ಸರ್ಕಾರ ಡಾಂಬರೀಕರಣ ಬಿಟ್ಟು ಹೊಸದಾಗಿ ರಸ್ತೆ ನಿರ್ಮಿಸಬೇಕಿದೆ. ಸಿಎಂ ಸಿದ್ದರಾಮಯ್ಯ ಒಮ್ಮೊಮ್ಮೆ ಒಂದೊಂದು ರೀತಿಯ ಅನುದಾನದ ಬಗ್ಗೆ ಹೇಳುತ್ತಿದ್ದಾರೆ. ಕಾಟಾಚಾರಕ್ಕೆ ಬ್ರ್ಯಾಂಡ್ ಬೆಂಗಳೂರಿನ ಘೋಷಣೆ ಮಾಡಲಾಗುತ್ತಿದೆ. ಡಿ.ಕೆ.ಶಿವಕುಮಾರ್ ಯಾವಾಗಲೂ ಬ್ರ್ಯಾಂಡ್ ಬಗ್ಗೆ ಹೇಳುತ್ತಾರೆ. ಅಧಿಕಾರಿಗಳಂತೂ ಇವರ ಮಾತನ್ನು ಕೇಳುತ್ತಿಲ್ಲ ಎಂದರು.
ಸಂಸದ ತೇಜಸ್ವಿ ಸೂರ್ಯ ಅವರನ್ನು ಅವಹೇಳನ ಮಾಡುವುದು ತಪ್ಪು. ಇದು ಒಂದು ಲೋಕಸಭಾ ಕ್ಷೇತ್ರಕ್ಕೆ ಮಾಡುವ ಅಪಮಾನ. ಸಿಎಂ ಹಾಗೂ ಡಿಸಿಎಂ ಗೌರವ ಕೊಟ್ಟು ಮಾತಾಡುವುದನ್ನು ಕಲಿಯಲಿ ಎಂದರು.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿರುವುದು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮವಾಗಿದೆ. ಅಪಪ್ರಚಾರ ಮಾಡಿರುವವರಿಗೆ ಶಿಕ್ಷೆಯಾಗಬೇಕು. ಅದಕ್ಕಾಗಿ ಸರ್ಕಾರ ಸೂಕ್ತ ಕ್ರಮ ವಹಿಸಬೇಕಿದೆ. ಡಿ.ಕೆ.ಶಿವಕುಮಾರ್ ಈ ಬಗ್ಗೆ ಮಾಧ್ಯಮಗಳ ಮುಂದೆ ಪ್ರಶ್ನೆ ಕೇಳುವ ಬದಲು, ಸಚಿವ ಸಂಪುಟದಲ್ಲೇ ಪ್ರಶ್ನೆ ಕೇಳಬೇಕಿತ್ತು. ಎಸ್‌ಐಟಿ ರಚಿಸುವುದನ್ನು ಅವರು ಮೊದಲೇ ತಡೆಯಬಹುದಿತ್ತು ಎಂದರು.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications