Government Employees: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್: ಹಳೆ ಪಿಂಚಣಿ ಯೋಜನೆ ಬಗ್ಗೆ ಬಿಗ್ ಅಪ್‌ಡೇಟ್!
ಬೆಂಗಳೂರು, ನವೆಂಬರ್ 04: ರಾಜ್ಯ ಕಾಂಗ್ರೆಸ್ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ ಕುರಿತು ಬಿಗ್ ಅಪ್‌ಡೇಟ್ ಸಿಕ್ಕಿದೆ. ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರುವಲ್ಲಿ ಸರ್ಕಾರಕ್ಕೆ ಒತ್ತಡ ಹಾಕುತ್ತಲಿದ್ದು, ಹಳೆ ಪಿಂಚಣಿ ಯೋಜನೆ ಜಾರಿ ಮಾಡಿಸಿಕೊಡುವುದೇ ನನ್ನ ಕರ್ತವ್ಯ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ಸರ್ಕಾರಿ ನೌಕರರಿಗೆ ಮಾರಕವಾಗಿರುವ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಯನ್ನು ಮರು ಜಾರಿಗೊಳಿಸಲು ಈಗಾಗಲೇ ಸರ್ಕಾರದ ಮೇಲೆ ಒತ್ತಡವನ್ನು ಹಾಕಲಾಗಿದೆ. ಹೀಗಾಗಿ ತ್ವರಿತವಾಗಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಬದ್ಧವಾಗಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ತಿಳಿಸಿದರು. ಆರೋಗ್ಯ ಸಂಜೀವಿನಿ ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ನೊಂದಾಯಿತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಜಾಲದ ಮೂಲಕ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸುತ್ತದೆ. ಒಟ್ಟು 1034 ಚಿಕಿತ್ಸಾ ವಿಧಾನಗಳನ್ನು ಈ ಯೋಜಜೆ ಒಳಗೊಂಡಿದೆ ಎಂದು ಹೇಳಿದರು.

7ನೇ ವೇತನ ಆಯೋಗವನ್ನು ಜಾರಿ ಮಾಡಿಸಿದ್ದಂತೆ 8ನೇ ವೇತನ ಆಯೋಗವನ್ನು ಜಾರಿ ಮಾಡುವಾಗ ಕೇಂದ್ರ ಸರ್ಕಾರದ ವೇತನ ಮಾದರಿಯಲ್ಲಿ ಜಾರಿ ಮಾಡಿಕೊಡಲು ಸರ್ಕಾರದ ಗಮನವನ್ನು ಸೆಳೆದಿದ್ದೇನೆ. ಆರೋಗ್ಯ ಸಂಜೀವಿನಿ ಯೋಜನೆಯಲ್ಲಿ ನಗದು ರಹಿತವಾದ ಚಿಕಿತ್ಸೆಯಾಗಿದ್ದು ಇದರಲ್ಲಿ ನೌಕರನ ತಂದೆ, ತಾಯಿ, ಹೆಂಡತಿ ಮಕ್ಕಳು ಗೊತ್ತು ಪಡಿಸಿದ ಆಸ್ಫತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮಿಲಿಟರಿ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ ರಿಯಾಯಿತಿ ದರದಲ್ಲಿ ಗೃಹಪಯೋಗಿ ಹಾಗೂ ವಿದ್ಯುತ್ ಪರಿಕರಗಳನ್ನು ಖರೀದಿಸಲು ಕಲ್ಪಿಸಲಾಗುವುದು. ನಾನು ರಾಜ್ಯಾಧ್ಯಕ್ಷನಾಗಿ ಇಲ್ಲಿಯ ವರೆಗೆ ನೌಕರರಿಗೆ ಅನುಕೂಲ ವಾಗುವಂತಹ 25 ಆದೇಶಗಳು ಜಾರಿ ಮಾಡಿಸಿದ್ದೇನೆ ಎಂದು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ತಹಸೀಲ್ದಾರ್ ಎನ್.ಜೆ.ನಾಗರಾಜ್ ವಹಿಸಿ ಮಾತನಾಡಿ, ನೌಕರರ ಸಂಘದ ತಾಲೂಕು ಅಧ್ಯಕ್ಷ ಗಣೇಶ್ ಇವರು ಅಧ್ಯಕ್ಷರಾಗಿ ಉತ್ತಮವಾದ ಸೇವೆಯನ್ನು ಸಲ್ಲಿಸುತ್ತಿದ್ದು ರಾಜ್ಯಾಧ್ಯಕ್ಷರ ಒಡನಾಟದಲ್ಲಿ ತಾಲೂಕು ಸಂಘ ಉತ್ತಮವಾದ ಕೆಲಸಗಳನ್ನು ಮಾಡುತ್ತಿರುವ ಬಗ್ಗೆ ಪ್ರಶಂಶಿಸಿದರು. ಸರ್ಕಾರಿ ನೌಕರರು ತಮ್ಮಲ್ಲಿ ಅಡಗಿದ್ದ ಹಾಡುಗಾರಿಕೆ, ಏಕಪಾತ್ರ ಅಭಿನಯ, ಭಾವಗೀತೆ, ಜನಪದಗೀತೆ ಈಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ವೀರೇಶ್ ಒಡೇನಪುರ, ಕಾರ್ಯದರ್ಶಿ ಪಾಲಾಕ್ಷ, ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ, ಶಿಕ್ಷಣ ಇಲಾಖೆಯ ವಿವಿಧ ವೃಂದಗಳ ಅಧ್ಯಕ್ಷರುಗಳಾದ ಪಿ.ವಿ.ಸ್ವಾಮಿ, ಜಯಪ್ರಕಾಶ್, ಚಂದ್ರಪ್ಪ, ಹಿರಿಯ ಆರೋಗ್ಯ ನಿರೀಕ್ಷಕ ಲೋಕೇಶಪ್ಪ, ವಿವೇಕಾನಂದ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.












Click it and Unblock the Notifications