Property: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಸ್ತಿಗಳಿಗೆ ಇ-ಸ್ವತ್ತು: ಮಹತ್ವದ ಮಾಹಿತಿ ಇಲ್ಲಿದೆ

ಬೆಂಗಳೂರು, ಮಾರ್ಚ್‌ 26: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಿಗೆ ಇ-ಸ್ವತ್ತು ನೀಡುವ ಸಂಬಂಧದಲ್ಲಿ ಸರ್ಕಾರ ಮಸೂದೆ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಇ-ಸ್ವತ್ತು ಪದ್ಧತಿಯಲ್ಲಿಸುಧಾರಣೆ ತರಲು ಹಾಗೂ ಅವಶ್ಯವಿದ್ದಲ್ಲಿ ಸೂಕ್ತ ನೀತಿ ನಿಯಮಗಳನ್ನು ರೂಪಿಸುವ ಸಲುವಾಗಿ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸರ್ಕಾರ ಈ ವರ್ಷದ ಜನಸ್ನೇಹಿ ಆಯವ್ಯಯವನ್ನು ಮಂಡಿಸಿದ ನಂತರ ನೂತನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೆ ತರುವ ಸಂಬಂಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಚಿವರು ಈ ಅಂಶವನ್ನು ಪ್ರಕಟಿಸಿದರು.

Committee Formed To Improve E-Swathu For Properties Priyank Kharge

ಉದ್ದೇಶಿತ ಸಮಿತಿಯಲ್ಲಿ ಅಧಿಕಾರಿಗಳು ಮಾತ್ರವಲ್ಲದೆ ಸಂಬಂಧಿಸಿದ ಕ್ಷೇತ್ರದಲ್ಲಿ ಪರಿಣಿತರಾದ ಅಧಿಕಾರೇತರ ಸದಸ್ಯರೂ ಇರುತ್ತಾರೆ, ಸಮಿತಿಯ ಕಾರ್ಯವ್ಯಾಪ್ತಿ, ಕಾಲಾವಧಿ ಮುಂತಾದ ನಿಯಮಗಳನ್ನು ರೂಪಿಸಿ ಸಮಿತಿಯನ್ನು ರಚಿಸಲಾಗುವುದು ಎಂದೂ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರು ಸಭೆಯಲ್ಲಿ ತಿಳಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂಪಿಸಲಾದ ಬಡಾವಣೆಗಳಲ್ಲಿ ಹಾಗೂ ಗ್ರಾಮಠಾಣ ಹೊರತು ಪಡಿಸಿದಂತೆ ನಿರ್ಮಿಸಿದ ಕಟ್ಟಡಗಳನ್ನು ಸಕ್ರಮ ಗೊಳಿಸುವ ಸಲುವಾಗಿ ಇ-ಸ್ವತ್ತುಖಾತ ಒದಗಿಸಲು ಅವಕಾಶ ಮಾಡಿಕೊಡುವ ಮಸೂದೆಗೆ ವಿಧಾನಮಂಡಲದ ಉಭಯ ಸದನಗಳೂ ಈಚೆಗೆ ಒಪ್ಪಿಗೆ ನೀಡಿವೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂತಹ ಸುಮಾರು 96 ಲಕ್ಷ ಸ್ವತ್ತುಗಳು ಇದೆ ಎಂದು ಅಂದಾಜು ಮಾಡಲಾಗಿದೆ.

ತೊಗರಿ, ಹೆಸರು, ಉದ್ದು, ಸೋಯಾಬೀನ್‌ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆದಿದ್ದ ಕಲಬುರಗಿ ಜಿಲ್ಲೆಯ 2,04,073 ರೈತರು ಬೆಳೆ ವಿಮೆ ಯೋಜನೆಯಡಿ ವಿಮೆ ಪರಿಹಾರ ಕೋರಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೋಂದಾವಣೆ ಮಾಡಿಕೊಂಡಿದ್ದು 575.194 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Committee Formed To Improve E-Swathu For Properties Priyank Kharge

ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಹಾಗೂ ಬೆಳೆಹಾನಿ ಸೇರಿದಂತೆ 2,36,933 ರೈತರಿಗೆ ಒಟ್ಟು ರೂ. 667.73 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ, ರಾಜ್ಯ ಸರ್ಕಾರದಿಂದ ಜಿಲ್ಲೆಯ ರೈತರಿಗೆ ಇಷ್ಟು ದೊಡ್ಡ ಮೊತ್ತದ ಬೆಳೆ ವಿಮೆ ಪರಿಹಾರ ನೀಡುವ ಮೂಲಕ ದಾಖಲೆ ಸೃಷ್ಟಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ 4.36 ಲಕ್ಷ ರೈತರು ತೊಗರಿ, ಹೆಸರು, ಉದ್ದು, ಸೋಯಾಬೀನ್‌ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ, ಈ ಪೈಕಿ ಸ್ಥಳೀಯ ಪ್ರಕೃತಿ ವಿಕೋಪದಡಿ ದೂರುಗಳನ್ನು ಸಲ್ಲಿಸಿದ 2,01,847 ರೈತರಿಗೆ ಮಧ್ಯಂತರ ಪರಿಹಾರವಾಗಿ ರೂ. 76.34 ಕೋಟಿ ಪರಿಹಾರ ಈಗಾಗಲೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ರೈತವಾರು ಮಾಹಿತಿಯನ್ನು ಸಂರಕ್ಷಣಾ ಪೋರ್ಟನಲ್ಲಿ ದಾಖಲಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೀಯೇ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. 

ಜಿಲ್ಲೆಯ ರೈತರು ಬೆಳೆಯುತ್ತಿರುವ ತೊಗರಿಗೆ ಕ್ವಿಂಟಾಲ್‌ ಒಂದಕ್ಕೆ 7550 ರೂ. ಬೆಂಬಲ ಬಲೆ ನಿಗದಿ ಮಾಡಿದ್ದು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್‌ಗೆ 450 ರೂ. ಪ್ರೋತ್ಸಾಹಧನವನ್ನು ನಿಗದಿ ಮಾಡಿದೆ. ಜಿಲ್ಲೆಯ 9189 ರೈತರಿಗೆ 108.30 ಕೋಟಿ ರೂ ಸಹಾಯಧನವನ್ನು ವಿತರಿಸಲಾಗಿದೆ ಎಂದೂ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+