CM Siddaramaiah: ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಸಿದ್ದರಾಮಯ್ಯ
ಬೆಳಗಾವಿ, ಡಿಸೆಂಬರ್ 19: ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.
ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಗುರುವಾರ ನಿಯಮ 69 ಅಡಿ ವಕ್ಫ್ ಕುರಿತು ವಿರೋಧ ಪಕ್ಷದ ನಾಯಕರು ಪ್ರಸ್ತಾಪಿಸಿದ್ದ ವಿಚಾರಗಳಿಗೆ ಉತ್ತರಿಸಿ ಅವರು ಮಾತನಾಡಿ, ವಿರೋಧ ಪಕ್ಷಗಳ ಆರೋಪಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿವರವಾಗಿ ಉತ್ತರ ನೀಡಿದ್ದಾರೆ.
1954ರಲ್ಲಿ ವಕ್ಫ್ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಈ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಸಾಧ್ಯವಿಲ್ಲ. ರಾಜ್ಯದಲ್ಲಿ 2008 ರಿಂದ 2013ರ ವರೆಗೆ ಹಾಗೂ 2019 ರಿಂದ 2023ರವೆಗೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತದಲ್ಲಿತ್ತು. ಕೇಂದ್ರದಲ್ಲಿ 2014 ರಿಂದ ಬಿಜೆಪಿ ಅಧಿಕಾರದಲ್ಲಿದೆ. ಆಗ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಆಲೋಚಿಸದೆ, ಈಗ ವಿವಾದ ಮಾಡುತ್ತಿದ್ದಾರೆ. ಕೇಂದ್ರ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮುಸ್ಲಿಂ ಧಾರ್ಮಿಕ ಗುರುಗಳೊಂದಿಗೆ ಚರ್ಚಿಸಿ ಒತ್ತುವರಿಯಾದ ವಕ್ಫ್ ಆಸ್ತಿ ತೆರವು ಮಾಡಿ ರಕ್ಷಿಸುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರ ವಿರೋಧ ಪಕ್ಷದ ಎಲ್ಲಾ ಪ್ರಶ್ನೆ ಹಾಗೂ ವಿವಾದಗಳಿಗೆ ಸ್ಪಷ್ಟವಾಗಿ ಉತ್ತರಿಸಿದೆ. ಇದರಿಂದ ಜನರಲ್ಲಿ ಗೊಂದಲವು ದೂರವಾಗಿದೆ. ಇನಾಂ ರದ್ದತಿ ಹಾಗೂ ಭೂ ಸುಧಾರಣೆ ಕಾಯ್ದೆಯಡಿ ಮಂಜೂರಾದ ವಕ್ಫ್ ಜಮೀನುಗಳನ್ನು ಸರ್ಕಾರ ಮುಟ್ಟುವುದಿಲ್ಲ. ವಕ್ಫ್ ಜಾಗದಲ್ಲಿರುವ ಖಬರಸ್ಥಾನ, ದರ್ಗಾ, ಮಸೀದಿಗಳನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯವಾಗಿದೆ. ಒಟ್ಟಾರೆ 1.28 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 47,263 ಎಕರೆ ಇನಾಂ ರದ್ದತಿ ಹಾಗೂ 23,623 ಎಕರೆ ಭೂ ಸುಧಾರಣೆ ಕಾಯ್ದೆ, 3000 ಎಕರೆ ಸಾರ್ವಜನಿಕ ಉದ್ದೇಶಗಳಿಗಾಗಿ ಬಳಸಲಾಗಿದೆ.
ಸುಮಾರು 17,969 ಎಕರೆ ವಕ್ಫ್ ಜಮೀನನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿದ್ದಾರೆ. ಇವುಗಳನ್ನು ರಕ್ಷಿಸಲು ಸುಪ್ರಿಂ ಕೋರ್ಟ್ ಆದೇಶವಿದೆ. ಒಮ್ಮೆ ವಕ್ಫ್ ಆಸ್ತಿ ಎಂದು ನಮೂದಾದರೆ ಅದು ಯಾವಾಗಲೂ ವಕ್ಫ್ ಆಸ್ತಿಯಾಗಿಯೇ ಇರುವುದು. ಸರ್ಕಾರದ ಉತ್ತರ ವಿರೋಧ ಪಕ್ಷಗಳು ಸಮಾದಾನ ತರದಿದ್ದರೆ, ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ಸಿದ್ದವಿದೆ. ಇದರಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಎಲ್ಲ ರೈತರ ಹಿತಕಾಯಲು ಸರ್ಕಾರ ಬದ್ಧವಾಗಿದೆ: ಕೃಷ್ಣ ಭೈರೇಗೌಡ
ರಾಜ್ಯದಲ್ಲಿ ವಕ್ಫ್ ಆಸ್ತಿ ವಿಚಾರಗಳಲ್ಲಿ ಸುಳ್ಳು ಕಥೆಗಳನ್ನು ಸೃಷ್ಟಿಸಿ, ಸಾರ್ವಜನಿಕರು ಹಾಗೂ ರೈತರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ನಡೆದಿದ್ದು, ಆದರೆ ಎಲ್ಲ ರೈತರ ಹಿತ ಕಾಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಯಾವುದೇ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಸ್ಪಷ್ಟಪಡಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲಿ ಬುಧವಾರ ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದ ಗೊಂದಲಗಳಿಗೆ ಸರ್ಕಾರದ ಪರವಾಗಿ ಉತ್ತರ ನೀಡಿದರು.
ವಕ್ಫ್ ಆಸ್ತಿಗಳ ವಿಚಾರದಲ್ಲಿ ಜನರ ಮನಸ್ಸಿನಲ್ಲಿ ಗೊಂದಲ ಸೃಷ್ಟಿಸಿರುವುದರಿಂದ, ಸಾಮರಸ್ಯದಿಂದ ಬಾಳಲು ಸತ್ಯ ಯಾವುದು ಸುಳ್ಳು ಯಾವುದು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕಿದೆ.
ವಕ್ಫ್ ಕಾಯ್ದೆ 1913 ರಲ್ಲಿ ಬ್ರಿಟೀಷರು ಮಾಡಿದ್ದು, ನಂತರದಲ್ಲಿ ಮೈಸೂರು ಮಹಾರಾಜರ ಕಾಲದಲ್ಲಿಯೂ ಮಾಡಲಾಗಿತ್ತು. ಸ್ವಾತಂತ್ರö್ಯ ಪೂರ್ವದಲ್ಲಿಯೇ ವಕ್ಫ್ ಕಾಯ್ದೆಯನ್ನು ಮಾಡಲಾಗಿದೆ. ಸರ್ಕಾರದಲ್ಲಿ ಲಭ್ಯವಿರುವ ದಾಖಲೆಗಳಂತೆ ರಾಜ್ಯದಲ್ಲಿ 1.12 ಲಕ್ಷ ಎಕರೆ ವಕ್ಫ್ ಗೆ ಸೇರಿದ್ದು, ಆದರೆ 20,524 ಎಕರೆ ಮಾತ್ರ ವಕ್ಫ್ ಗೆ ಸಿಕ್ಕಿದೆ. ಇನ್ನೂ ಸುಮಾರು 90 ಸಾವಿರ ಎಕರೆಯಷ್ಟು ಪ್ರದೇಶ ವಕ್ಫ್ಗೆ ದೊರೆತಿಲ್ಲ. ಕಾರಣ ಆಗ ಪಹಣಿಯಲ್ಲಿ ವಕ್ಫ್ ಹೆಸರಿನಲ್ಲಿ ನಮೂದಾಗದೇ ಇದ್ದುದರಿಂದ ದಾನ ಕೊಟ್ಟವರ ಹೆಸರಿನವರಲ್ಲಿ ಅಥವಾ ಅವರ ಕುಟುಂಬದವರ ಹೆಸರಿನಲ್ಲಿಯೇ ಮುಂದುವರೆದಿದೆ.
ಇನಾಮ್ ರಿಗ್ರಾಂಟ್‌ನಲ್ಲಿ, ಇನಾಮ್ ರಿಫಾರ್ಮ್ಸ್ ನಂತರವು ಸುಮಾರು 73 ಸಾವಿರ ಎಕರೆ ಬಹುತೇಕ ರೈತರ ವಶದಲ್ಲಿಯೇ ಇದೆ. ಆದಾಗ್ಯೂ ಈ ಎಲ್ಲ ರೈತರ ಹಿತಕಾಯಲು ಸರ್ಕಾರ ಬದ್ಧವಾಗಿದೆ. ಯಾವುದೇ ರೈತರಿಗೆ ಅನ್ಯಾಯವಾಗಲು ಸರ್ಕಾರ ಅವಕಾಶ ನೀಡುವುದಿಲ್ಲ. ರೈತರಿಗೆ ನೀಡಿರುವ ಎಲ್ಲ ನೋಟಿಸ್‌ಗಳನ್ನು ಈಗಾಗಲೆ ಸರ್ಕಾರ ಹಿಂಪಡೆದಿದ್ದು, ಇನ್ನೂ ಉಳಿದಿದ್ದರೆ, ಅವುಗಳನ್ನು ಕೂಡ ಹಿಂಪಡೆಯಲಾಗುವುದು ಎಂದು ಸ್ಪಷ್ಟನೆ ನೀಡಿದ ಸಚಿವ ಕೃಷ್ಣ ಭೈರೇಗೌಡ ಅವರು, ಒತ್ತುವಾರಿಯಾಗಿರುವ 19987 ಎಕರೆ ವಕ್ಫ್ ಭೂಮಿಯನ್ನು, ಅದೂ ಕೂಡ ಸರ್ಕಾರ ಈಗಾಗಲೆ ನೀಡಿರುವ ಖಬರಸ್ತಾನ್, ದರ್ಗಾ ಮಸೀದಿಗಳಿಗೆ ನೀಡಿರುವ ಭೂಮಿಯನ್ನು ಕೆಲವು ಖಾಸಗಿಯವರು ಒತ್ತುವರಿ ಮಾಡಿದ್ದಾರೆ, ಈ ಭೂಮಿಯನ್ನು ಮಾತ್ರ ವಕ್ಫ್ಗೆ ಹಸ್ತಾಂತರಿಸಲು ವಕ್ಫ್ ಮಂಡಳಿ ಕೇಳಿಕೊಂಡಿದೆ ಎಂದರು.
ರೈತರಿಗೆ ನೋಟಿಸ್ ನೀಡುವ ಪ್ರಕ್ರಿಯೆ ಈ ಹಿಂದಿನಿಂದಲೂ ನಡೆದುಬಂದಿರುವ ಪ್ರಕ್ರಿಯೆಯಾಗಿದ್ದು, ಈ ಹಿಂದಿನ ಸರ್ಕಾರದ ಕಾಲದಲ್ಲಿ 4500 ಆಸ್ತಿಗಳನ್ನು ವಕ್ಫ್ಗೆ ಖಾತೆ ಬದಲಾವಣೆ ಮಾಡಲಾಗಿದೆ. ಆದರೆ ನಮ್ಮ ಸರ್ಕಾರ ಬಂದ ಬಳಿಕ ಕೇವಲ 600 ಆಸ್ತಿಗಳನ್ನು ಮಾತ್ರ ವಕ್ಫ್ಗೆ ಖಾತೆ ಬದಲಾವಣೆ ಮಾಡಲಾಗಿದೆ. ವಕ್ಫ್ ಕಾಯ್ದೆ ಕೇಂದ್ರ ಸರ್ಕಾರ ಮಾಡಿದ್ದು, ರಾಜ್ಯ ಸರ್ಕಾರ ಮಾಡಿಲ್ಲ, ಆದಾಗ್ಯೂ ರೈತರಲ್ಲಿ ಸುಳ್ಳು ಸುದ್ದಿ ಹರಡಿ ರೈತರನ್ನು ಎತ್ತಿಕಟ್ಟುವ ಕಾರ್ಯ ಆಗುತ್ತಿದೆ ಎಂದು ಆರೋಪಿಸಿದರು.
-
ಯೋಗೇಶ್ ಗೌಡ ಕೇಸ್ ತೀರ್ಪು ಪ್ರಕಟ: ವಿನಯ್ ಕುಲಕರ್ಣಿ ಅಪರಾಧಿ ಎಂದ ಕೋರ್ಟ್: 17 ಮಂದಿ ಸಿಬಿಐ ವಶಕ್ಕೆ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications