ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿನ ಅಕ್ರಮ ವಿದೇಶ ಪ್ರಜೆಗಳನ್ನು ಪತ್ತೆ ಮಾಡಿ ಗಡಿಪಾರು ಉನ್ನತ ಮಟ್ಟದ ಸಮಿತಿ ರಚನೆ!

|
Google Oneindia Kannada News

ಬೆಂಗಳೂರು, ಜು. 17: ರಾಜ್ಯದಲ್ಲಿ 2011ರಿಂದ ಈಚೆಗೆ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚಿ ಅವರನ್ನು ಅವರ ದೇಶಕ್ಕೆ ಗಡಿಪಾರು ಮಾಡುವ ಹಿನ್ನೆಲೆಯಲ್ಲಿ ಒಳಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಲಾಗಿದೆ.

ರಾಜ್ಯದಲ್ಲಿ ನಾಪತ್ತೆಯಾಗಿರುವ ಹಾಗೂ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲು ಈ ಸಮಿತಿ ಕೆಲಸ ಮಾಡಲಿದೆ. ಪತ್ತೆಯಾಗುವ ಅಕ್ರಮ ವಿದೇಶಿಗರು ಯಾವ ದೇಶದವರು? ಎಂಬುದನ್ನು ಪತ್ತೆ ಮಾಡಿ ಆ ದೇಶಕ್ಕೆ ಅವರನ್ನು ಗಡಿಪಾರು ಮಾಡಲು ಕ್ರಮವಹಿಸಲಾಗುವುದು. ಈ ಪತ್ತೆಮಾಡುವ ಕಾರ್ಯಕ್ಕೆ ವಿದೇಶಿ ನೋಂದಣಾಧಿಕಾರಿಗಳ ಸಹಾಯ ಪಡೆದುಕೊಳ್ಳಬೇಕಾಗುತ್ತದೆ. ಜೊತೆಗೆ ಈ ಬಗ್ಗೆ ಎಲ್ಲ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಂದೇಶ ರವಾನಿಸಲಾಗುವುದು ಎಂದು ಗೃಹ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಪ್ರತಿ ತಿಂಗಳು ಪತ್ತೆಯಾದ ಮತ್ತು ಗಡಿಪಾರು ಮಾಡಲಾಗಿರುವ ವಿದೇಶಿ ಪ್ರಜೆಗಳ ಕುರಿತು ಕೇಂದ್ರ ಗೃಹ ಇಲಾಖೆಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದೆ.

Constitution of a committee to administration to track foreign nationals illegally Overstaying in Karnataka

Recommended Video

Krunal Pandya ಮಾಡಿದ ಕೆಲಸಕ್ಕೆ ತಂಡ ಬಿಟ್ಟ Deepak Hooda | Oneindia Kannada

ಉನ್ನತ ಮಟ್ಟದ ಸಮಿತಿ ರಚನೆ: ಐವರು ಸದಸ್ಯರ ಸಮಿತಿಗೆ ಒಳಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷರಾಗಿರುತ್ತಾರೆ. ಪ್ರಾದೇಶಿಕ ವಿದೇಶಿ ನೊಂದಣಾಧಿಕಾರಿ, ರಾಜ್ಯ ಗುಪ್ತವಾರ್ತೆ ಪೊಲೀಸ್ ಅಧೀಕ್ಷಕರು, ಸಂಬಂಧಪಟ್ಟ ಜಿಲ್ಲಾ ಪೊಲೀಸ್ ಅಧೀಕ್ಷಕರು ಎನ್ಐಸಿ ಸಮಿತಿಯ ಸದಸ್ಯರಾಗಿರುತ್ತಾರೆ.

English summary
Constitution of a committee under the Chairmanship of Home secretaries of state government to administration to track foreign nationals illegally Overstaying in Karnataka since 2011.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X