Get Updates
Get notified of breaking news, exclusive insights, and must-see stories!

ಕೆಪಿಎಸ್‌ಸಿಯಲ್ಲಿ ಮಹತ್ವದ ಬದಲಾವಣೆ: ಸದಸ್ಯರ ನೇಮಕಕ್ಕೆ ಸಮಿತಿ ರಚನೆ

ಬೆಂಗಳೂರು, ಮೇ 05: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ಯಲ್ಲಿ ಹಲವು ಬದಲಾವಣೆಗಳನ್ನು ತರಲು ಸರ್ಕಾರ ಮುಂದಾಗಿದೆ. ಆದ್ದರಿಂದ ಕೆಪಿಎಸ್‌ಸಿ ಸದಸ್ಯರನ್ನು ನೇಮಕ ಮಾಡಲು ಒಂದು ಸಮಿತಿಯನ್ನು ರಚಿಸುವ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ. ಆಯೋಗಕ್ಕೆ ರಾಜಕೀಯ ಹಿನ್ನಲೆ ಹೊಂದಿದವರನ್ನು ಬಿಟ್ಟು ಅರ್ಹರನ್ನು ನೇಮಕ ಮಾಡಬೇಕು ಎಂದು ಬಹಳ ಹಿಂದಿನಿಂದಲೂ ಒತ್ತಾಯಿಸಲಾಗುತ್ತಿತ್ತು.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಡಿ. ಚಂದ್ರಕಲ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-7) ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರನ್ನು ನೇಮಕ ಮಾಡಲು ಒಂದು ವ್ಯಾಪಕ ಆಧಾರಿತ ಹುಡುಕಾಟ ಸಮಿತಿಯನ್ನು ರಚಿಸುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

Committee To Recommend Name For KPSC Members Appointment

ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸುಧಾರಣಾ ಪದ್ಧತಿಯನ್ನು ಅಳವಡಿಸಿ ಮುಕ್ತ, ನಿಷ್ಪಕ್ಷಪಾತವಾದ ಮತ್ತು ಅರ್ಹತೆ ಆಧಾರಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆಯೋಗದಲ್ಲಿ ಜಾರಿಯಲ್ಲಿರುವ ವ್ಯವಸ್ತೆ ಮತ್ತು ಪ್ರಕ್ರಿಯೆಗಳನ್ನು ಪರಿಷ್ಕರಿಸುವ ಉದ್ದೇಶದಿಂದ ಸರ್ಕಾರವು ಪಿ. ಸಿ. ಹೋಟ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಸದರಿ ಸಮಿತಿಯು ದಿನಾಂಕ 20/08/2013ರಂದು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುತ್ತದೆ.

ಸದರಿ ವರದಿಯಲ್ಲಿ ಸಮಿತಿಯು ಸರ್ಕಾರಕ್ಕೆ ಕೆಲವು ಶಿಫಾರಸ್ಸುಗಳನ್ನು ಮಾಡಿದ್ದು, ಸಮಿತಿಯ ಶಿಫಾರಸ್ಸು ಉನ್ನತ ಸಾಂವಿಧಾನಿಕ ಹುದ್ದೆಗಳಾದ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ನಿಷ್ಠೆ, ನ್ಯಾಯಯುತ ಹಾಗೂ ಬೌದ್ಧಿಕ ಸಾಮರ್ಥ್ಯವಿರುವ ವ್ಯಕ್ತಿಗಳಿಂದ ತುಂಬಬೇಕಾಗಿರುವುದರಿಂದ ಸದಸ್ಯ ಸಂಚಾಲಕರನ್ನಾಗಿ ಆಡಳಿತಾರೂಢ ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಒಳಗೊಂಡ ಒಂದು ವ್ಯಾಪಕ ಆಧಾರಿತ ಹುಡುಕಾಟ ಸಮಿತಿಯನ್ನು ರಚಿಸಬೇಕು.

ಸರ್ಕಾರದ ಹಿಂದಿನ ಮುಖ್ಯ ಕಾರ್ಯದರ್ಶಿ/ ಭಾರತ ಸರ್ಕಾರದ ಹಿಂದಿನ ಕಾರ್ಯದರ್ಶಿ ಹಾಗೂ ಬೆಂಗಳೂರಿನ ಇಂಡಿಯನ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಿವೃತ್ತ ಅಥವಾ ಅಧಿಕಾರರೂಢ ನಿರ್ದೇಶಕರು ಮತ್ತು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ನಿವೃತ್ತ ಅಥವಾ ಅಧಿಕಾರರೂಢ ನಿರ್ದೇಶಕರು, ಕೇಂದ್ರ ವಿಶ್ವ ವಿದ್ಯಾಲಯದ ಉಪಕುಲಪತಿಗಳು ವ್ಯಾಪಕ ಆಧಾರಿತ ಹುಡುಕಾಟ ಸಮಿತಿಯ ಇತರ ಸದಸ್ಯರುಗಳಾಗಬಹುದು.

ವ್ಯಾಪಕ ಆಧಾರಿತ ಹುಡುಕಾಟ ಸಮಿತಿಯು ಅಭ್ಯರ್ಥಿಗಳ ಸ್ವಯಂ ವಿವರಗಳನ್ನು ಪರಿಶೀಲಿಸಿ ಅಗತ್ಯವಿದ್ದಲ್ಲಿ ವ್ಯಯಕ್ತಿಕ ಚರ್ಚೆ ಮೂಲಕ ಕರ್ನಾಟಕ ಲೋಕಸೇವಾ ಆಯೋಗದ ಒಂದು ಸದಸ್ಯ ಸ್ಥಾನಕ್ಕೆ, ಇಬ್ಬರು ಅಭ್ಯರ್ಥಿಗಳ ಕಿರುಪಟ್ಟಿಯನ್ನು ಸಿದ್ಧಪಡಿಸಬೇಕು. ಹುಡುಕಾಟ ಸಮಿತಿಯು ಸೂಚಿಸುವ ಇಬ್ಬರು ಅಭ್ಯರ್ಥಿಗಳ ಪಟ್ಟಿಯಲ್ಲಿ ಒಬ್ಬರ ಹೆಸರನ್ನು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರನ್ನಾಗಿ ಕರ್ನಾಟಕ ರಾಜ್ಯದ ರಾಜ್ಯಪಾಲರು ನೇಮಕಾತಿ ಮಾಡಲು ಮಾನ್ಯ ಮುಖ್ಯಮಂತ್ರಿಯವರು ನಾಮನಿರ್ದೇಶಿಸಲು ಇಚ್ಚಿಸಬಹುದು. ಸಾಮಾನ್ಯವಾಗಿ ಸರ್ಕಾರವು ಅನರ್ಹರೆಂದು ಪರಿಗಣಿಸದ ಹೊರತು ಹಿರಿಯರಾದ ಸದಸ್ಯರನ್ನು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಬಹುದು.

1998, 1999 ಮತ್ತು 2004ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿಗೆ ಸಂಬಂಧಿಸಿದಂತೆ ಖಲೀಲ್ ಅಹಮ್ಮದ್ ಕೆ. ಆರ್. ಮತ್ತು ಇತರರು ದಾಖಲಿಸಿರುವ ರಿಟ್ ಅರ್ಜಿ ಮತ್ತು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯವು ದಿನಾಂಕ 21-06-2016 ರಂದು ನೀಡಿರುವ ಆದೇಶ ಮತ್ತು ಶಶಿಪ್ರಸಾದ್ ಗಾಂಧಿ ಇವರು ದಾಖಲಿಸಿದ್ದ ರಿಟ್ ಅರ್ಜಿ ಮತ್ತು ಟಿ. ನರಸಿಂಹಮೂರ್ತಿ ಇವರು ದಾಖಲಿಸಿರುವ ರಿಟ್ ಅರ್ಜಿಯಲ್ಲಿ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯವು ದಿನಾಂಕ 27-07-2023 ರಂದು ನೀಡಿರುವ ಆದೇಶಗಳನ್ನು ಪರಿಶೀಲಿಸಿದೆ.

ದಿನಾಂಕ 14/03/2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪಿ. ಸಿ. ಹೋಟಾ ಸಮಿತಿಯ ಶಿಫಾರಸ್ಸಿನ ಅನ್ವಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ವ್ಯಾಪಕ ಆಧಾರಿತ ಹುಡುಕಾಟ ಸಮಿತಿಯನ್ನು ರಚಿಸಲು ಸಚಿವ ಸಂಪುಟವು ಅನುಮೋದಿಸಿರುತ್ತದೆ. ಅದರಂತೆ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗಾಗಿ ಸದಸ್ಯರ ಹೆಸರನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಉದ್ದೇಶಕ್ಕಾಗಿ, ಒಂದು ವ್ಯಾಪಕ ಆಧಾರಿತ ಹುಡುಕಾಟ ಸಮಿತಿ ರಚನೆ ಮಾಡಲು ಸರ್ಕಾರವು ನಿರ್ಧರಿಸಿ ಆದೇಶಿಸಿದೆ ಎಂದು ಹೇಳಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗಾಗಿ ಸಮಗ್ರತೆ, ನ್ಯಾಯಸಮ್ಮತತೆ ಮತ್ತು ಬೌದ್ಧಿಕ ಸಾಮರ್ಥ್ಯದ ದಾಖಲೆ ಹೊಂದಿರುವ ವ್ಯಕ್ತಿಗಳ ಹೆಸರನ್ನು ಸರ್ಕಾರಕ್ಕೆ ಸೂಚಿಸುವ ಉದ್ದೇಶಕ್ಕಾಗಿ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸದಸ್ಯರನ್ನು ಒಳಗೊಂಡಿರುವ ವ್ಯಾಪಕ ಆಧಾರಿತ ಹುಡುಕಾಟ ಸಮಿತಿಯನ್ನು ಸರ್ಕಾರವು ರಚಿಸಿದೆ.

* ವ್ಯಾಪಕ ಆಧಾರಿತ ಹುಡುಕಾಟ ಸಮಿತಿಯ ಸದಸ್ಯ-ಕಾರ್ಯದರ್ಶಿಯು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರು/ ಸದಸ್ಯರ ಸ್ನಾನ ತೆರವಾಗುವ 3 ತಿಂಗಳ ಪೂರ್ವದಲ್ಲಿಯೇ, ತೆರವಾಗುವ ಅಧಿಕಾರಿ/ ಅಧಿಕಾರೇತರ ಹುದ್ದೆಗಳ ಸಂಖ್ಯೆ, ಅರ್ಹತೆಯ ವಿವರ, ಸಂಬಳ ಮತ್ತು ಭತ್ಯೆಗಳು, ಅರ್ಜಿ ನಮೂನೆ ಮತ್ತು ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ಇತರೆ ಅಗತ್ಯ ಮಾಹಿತಿಯನ್ನೊಳಗೊಂಡಂತೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸತಕ್ಕದ್ದು.

* ಹುಡುಕಾಟ ಸಮಿತಿಯು ಸ್ವೀಕೃತವಾಗುವ ಅಭ್ಯರ್ಥಿಗಳ ಸ್ವಯಂ ವಿವರಗಳನ್ನು ಪರಿಶೀಲಿಸಿ, ಆಯೋಗದ ಅಗತ್ಯತೆಯನ್ನು ಗಮನದಲ್ಲಿರಿಸಿ ಅಗತ್ಯವಿದ್ದಲ್ಲಿ ವೈಯಕ್ತಿಕ ಚರ್ಚೆಗೆ ಆಹ್ವಾನಿಸಿ, ಒಟ್ಟಾರೆ ಮೌಲ್ಯಮಾಪನವನ್ನು ಮಾಡತಕ್ಕದ್ದು.

* ನಂತರ ವ್ಯಾಪಕ ಆಧಾರಿತ ಹುಡುಕಾಟ ಸಮಿತಿಯು ಕರ್ನಾಟಕ ಲೋಕಸೇವಾ ಆಯೋಗದ ಒಂದು ಅಧ್ಯಕ್ಷರು/ ಸದಸ್ಯರ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆಮಾಡಿ, ಆಯ್ಕೆಗೆ ಸೂಕ್ತ ಕಾರಣಗಳನ್ನು ನಮೂದಿಸಿ ಅಂತಿಮಗೊಳಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾನ್ಯ ಮುಖ್ಯಮಂತ್ರಿಯವರಿಗೆ ಸಲ್ಲಿಸತಕ್ಕದ್ದು.

* ಕರ್ನಾಟಕ ಸರ್ಕಾರ (ವ್ಯವಹಾರದ ನಿರ್ವಹಣೆ) ನಿಯಮಗಳು, 1977ರ ಷೆಡ್ಯೂಲ್-ರ ಕ್ರಮ ಸಂಖ್ಯೆ:25 ರನ್ವಯ ಸರ್ಕಾರವು ಕಿರುಪಟ್ಟಿಯಲ್ಲಿರುವ ಇಬ್ಬರು ಅಭ್ಯರ್ಥಿಗಳಲ್ಲಿ ಸದರಿ ಹುದ್ದೆಗೆ ಸೂಕ್ತವಾದ ಒಬ್ಬರ ಹೆಸರನ್ನು ಅಂತಿಮಗೊಳಿಸಿ ಮಾನ್ಯ ರಾಜ್ಯಪಾಲರಿಗೆ ನೇಮಕ ಮಾಡುವ ಸಲುವಾಗಿ ಸಲ್ಲಿಸತಕ್ಕದ್ದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+