ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ನೀವೂ ಸಾಧಕರನ್ನು ಶಿಫಾರಸು ಮಾಡಬಹುದು!
ಬೆಂಗಳೂರು, ಸೆ. 25: ಸರ್ಕಾರದ ಪ್ರಶಸ್ತಿಗಳ ಬಗ್ಗೆ ಯಾವಾಗಲೂ ಒಂದು ಆರೋಪ ಇದ್ದೆ ಇರುತ್ತದೆ. ಅದಕ್ಕೆ ರಾಜ್ಯೋತ್ಸವ ಪ್ರಶ್ತಸಿಯೂ ಹೊರತಾಗಿಲ್ಲ. ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆಯಲು ಶಿಫಾರಸು ಮಾಡಬೇಕು. ಅಂತಹ ಶಿಫಾರಸು ನಮಗಿಲ್ಲ ಎಂದು ಹಲವು ಸಾಧಕರು ತಮ್ಮ ಆತ್ಮೀಯರೊಂದಿಗೆ ಮಾತನಾಡಿಕೊಂಡಿದ್ದೂ ಇದೆ.
ಇದೀಗ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲು ಶಿಫಾರಸು ಮಾದರಿಯಲ್ಲಿ ಬದಲಾವಣೆ ತಂದಿದೆ. ಸಾಧಕರ ಆಯ್ಕೆಗೆ ನೇರವಾಗಿ ನಾಡಿನ ಜನರ ಶಿಫಾರಸು ಪರಿಗಣಿಸಲು ಸರ್ಕಾರ ತೀರ್ಮಾನ ಮಾಡಿದೆ. ಹೀಗಾಗಿ ನೀವೂ ಕೂಡ ನೇರವಾಗಿ ಸರ್ಕಾರಕ್ಕೆ ಶಿಫಾರಸು ಮಾಡಬಹುದಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಸ್ವತಃ ವಿವರಿಸಿದ್ದಾರೆ.
"ನವೆಂಬರ್ ಒಂದರಂದು 66ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ವರ್ಷ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆನ್‌ಲೈನ್ ಮೂಲಕ ಅವರ ಹೆಸರು ಶಿಫಾರಸು ಮಾಡಲು ಸಾರ್ವಜನಿಕರಿಗೇ ಅವಕಾಶ ಕಲ್ಪಿಸಲಾಗಿದೆ" ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಆನ್‌ಲೈನ್ ಮೂಲಕ ಹೇಗೆ ಅರ್ಹ ಸಾಧಕರ ಹೆಸರನ್ನು ಸಾರ್ವಜನಿಕರು ಶಿಫಾರಸು ಮಾಡಬಹುದು ಎಂಬುದನ್ನು ಅವರು ವಿವರಿಸಿದ್ದಾರೆ.

ಸಾಧಕರ ಶಿಫಾರಸು ಮಾಡಲು ಹೀಗೆ ಮಾಡಿ!
ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲು ಸಾಧಕರನ್ನು ಆನ್‌ಲೈನ್ ಮೂಲಕ ಶಿಫಾರಸು ಮಾಡಬಹುದಾಗಿದೆ. ಹೇಗೆ ಶಿಫಾರಸು ಮಾಡಬಹುದು ಎಂಬುದನ್ನು ಸಚಿವ ವಿ. ಸುನಿಲ್ ಕುಮಾರ್ ವಿವರಿಸಿದ್ದಾರೆ.
"ಸಾರ್ವಜನಿಕರು ಯಾರೇ ಆಗಲಿ ಅವರು ಸೇವಾ ಸಿಂಧು ಪೋರ್ಟಲ್ ಮೂಲಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಸಿದ್ಧಪಡಿಸಲಾಗಿರುವ ವಿಶೇಷ ನಮೂನೆಯ ಅರ್ಜಿಯಲ್ಲಿ ಮೂರು ಹೆಸರುಗಳನ್ನು ಶಿಫಾರಸು ಮಾಡಬಹುದಾಗಿದೆ. ಈ ಮೂವರು ಸಾಧಕರುಗಳ ಹೆಸರು, ಅವರು ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ, ಅವರ ಊರು, ವಿಳಾಸ, ಸಂಪರ್ಕ ಸಂಖ್ಯೆ ಇತ್ಯಾದಿ ವಿವರಗಳನ್ನು ಒದಗಿಸಲು ಈ ಅರ್ಜಿ ನಮೂನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ" ಎಂದು ಸಚಿವ ಸುನಿಲ್ ಕುಮಾರ್ ವಿವರಿಸಿದ್ದಾರೆ.

ಈ ವರ್ಷ ಎಷ್ಟು ಜನರಿಗೆ ರಾಜ್ಯೋತ್ಸವ ಪ್ರಶಸ್ತಿ?
ನವೆಂಬರ್ 1 ರಂದು 66ನೇ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಅದಕ್ಕೆ ತಕ್ಕಂತೆ ವಾಡಿಕೆಯಂತೆ ಈ ವರ್ಷ 66 ಅರ್ಹ ಸಾಧಕರನ್ನು ಗುರುತಿಸಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲಾಗುತ್ತದೆ. ಈ 66 ಸಾಧಕರ ಹೆಸರುಗಳನ್ನು ಸಾರ್ವಜನಿಕರೇ ಶಿಫಾರಸು ಮಾಡಬಹುದಾಗಿದೆ. ಒಬ್ಬರು ಮೂವರು ಸಾಧಕರ ಹೆಸರು ಶಿಫಾಸರು ಮಾಡಿ ಆನ್‌ಲೈನ್ ಮೂಲಕ ಶಿಫಾರಸು ಮಾಡಬಹುದು. ಹೀಗಾಗಿ ಸಾಧಕರೂ ಕೂಡ ತಮ್ಮ ಸಾಧನೆಯ ವಿವರಗಳೊಂದಿಗೆ ಗಣ್ಯವ್ಯಕ್ತಿಗಳ ಮನೆಗೆ ಹೋಗುವುದು ಇದರಿಂದ ತಪ್ಪಲಿದೆ. ಜೊತೆಗೆ ಇಂತಹ ಅವಕಾಶ ಕಲ್ಪಿಸುವ ಮೂಲಕ ಸಾಧಕರಿಗೂ ಸರ್ಕಾರ ಗೌರವ ಕೊಟ್ಟಿದೆ ಎಂಬ ಅಭಿಪ್ರಾಯ ವ್ಯಕ್ತವವಾಗಿದೆ.

ಸಾರ್ವಜನಿಕರೇ ಸಾಧಕರ ಆಯ್ಕೆ ಮಾಡಲು ಅವಕಾಶ!
"ರಾಜ್ಯದ ಮೂಲೆ ಮೂಲೆಯಲ್ಲಿ ವಾಸ ಮಾಡುತ್ತಿರುವ ಹಾಗೂ ಎಲೆಮರೆ ಕಾಯಿಯಂತೆ ತಮ್ಮ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ, ಮಾಡುತ್ತಿರುವ ಸಾಧಕರನ್ನು ಗುರುತಿಸಬೇಕಾಗಿದೆ. ಅದಕ್ಕಾಗಿ ಸಾಧಕರ ಸುತ್ತ ಮುತ್ತಲೂ ಇರುವವರು ಗುರುತಿಸಿ ಅವರ ಸಾಧನೆಯನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ನಮಗೆ ತಲುಪಿಸಬೇಕು. ಅದನ್ನು ತಜ್ಞರ ಸಮಿತಿಗೆ ಕೊಡಲಾಗುತ್ತದೆ. ಸಮಿತಿ ಸದಸ್ಯರು ಪರಿಶೀಲನೆ ಮಾಡಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಎಂದು ಪರಿಗಣಿಸಿದರೆ ಖಂಡಿತ ಅವರಿಗೆ ಪ್ರಶಸ್ತಿ ಸಿಗುವಂತಾಗುತ್ತದೆ. ಅದರ ಜೊತೆಗೆ ಈ ಪ್ರತಿಷ್ಠಿತ ಪ್ರಶಸ್ತಿಗೆ ನೇರವಾಗಿ ಸಾರ್ವಜನಿಕರೇ ಸಾಧಕರನ್ನು ಆಯ್ಕೆ ಮಾಡಿದಂತಾಗುತ್ತದೆ. ಕ್ರೀಡೆ ಹೊರತುಪಡಿಸಿದರೆ ಉಳಿದ ಸಾಧಕರು ಕನಿಷ್ಠ 60 ವರ್ಷ ಮೇಲ್ಪಟ್ಟವರಾಗಿರಬೇಕು" ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಜೊತೆಗೆ ಶಿಫಾರಸು ಮಾಡಲು ಕೊನೆಯ ದಿನಾಂಕ ಎಲ್ಲಿಯವರೆಗಿದೆ ಎಂಬುದನ್ನೂ ಅವರು ಹೇಳಿದ್ದಾರೆ.
Recommended Video

ಸಾರ್ವಜನಿಕರಿಗೆ-ಸಾಧಕರಿಗೆ ಮೊದಲ ಬಾರಿ ಅವಕಾಶ!
"ಇಂತಹ ಪ್ರಯೋಗ ಇದೇ ಮೊದಲ ಬಾರಿಗೆ ಮಾಡಲಾಗುತ್ತಿದೆ. ಇದು ಅತ್ಯಂತ ಪಾರದರ್ಶಕ ಹಾಗೂ ಪ್ರಜಾಪ್ರಭುತ್ವ ಸಿದ್ಧಾಂತಗಳಿಗೆ ಅನುಗುಣವಾಗಿ ನಡೆಯುತ್ತಿರುವುದು ವಿಶೇಷವಾಗಿದೆ. ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕವೂ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶಿಸಬಹುದಾಗಿದೆ. ತಾವು ಪ್ರಶಸ್ತಿಗೆ ಶಿಫಾರಸು ಮಾಡುವ ವ್ಯಕ್ತಿಗಳ ಹೆಸರನ್ನು ಕಳುಹಿಸಲು ಅಕ್ಟೋಬರ್ 15 ನೇ ತಾರೀಖಿನವರೆಗೂ ಅವಕಾಶ ಕಲ್ಪಿಸಲಾಗಿದೆ" ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications