ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೋಟೆಲ್ ಉದ್ಯಮಿಗಳ ಸಂಕಷ್ಟ; ಸಿಎಂಗೆ ಡಿ. ಕೆ. ಶಿವಕುಮಾರ್ ಪತ್ರ

|
Google Oneindia Kannada News

ಬೆಂಗಳೂರು, ಜುಲೈ 24 : ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹೋಟೆಲ್ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ವ್ಯಾಪಾರ ವಹಿವಾಟು ಸರಿಯಾಗಿ ಆರಂಭವಾಗಿಲ್ಲ, ಕಾರ್ಮಿಕರ ಕೊರತೆಯೂ ಕಾಡುತ್ತಿದೆ.

Recommended Video

ನಾವಿದ್ದೇವೆ ಯೋಚನೆ ಮಾಡಬೇಡಿ ಎಂದ ಶಿವಣ್ಣ

ಬೆಂಗಳೂರು ನಗರದಲ್ಲಿ ಹೋಟೆಲ್ ಉದ್ಯಮ ಪುನಃ ನಿಧಾನವಾಗಿ ಆರಂಭವಾಗಿತ್ತು. ಒಂದು ವಾರದ ಲಾಕ್ ಡೌನ್ ಘೋಷಣೆ ಮಾಡಿದ ಪುನಃ ಹೋಟೆಲ್‌ಗಳು ಬಾಗಿಲು ಮುಚ್ಚಿದವು. ಹೋಟೆಲ್ ಮಾಲೀಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.

ಲಾಕ್ ಡೌನ್; ಹೋಟೆಲ್ ಉದ್ಯಮದ ಸಂಕಷ್ಟ ತೆರೆದಿಟ್ಟ ಸತೀಶ್ ಶೆಟ್ಟಿಲಾಕ್ ಡೌನ್; ಹೋಟೆಲ್ ಉದ್ಯಮದ ಸಂಕಷ್ಟ ತೆರೆದಿಟ್ಟ ಸತೀಶ್ ಶೆಟ್ಟಿ

ಹೋಟೆಲ್ ಮಾಲೀಕರ ಸಂಕಷ್ಟದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ಸಂಕಷ್ಟಕ್ಕೆ ಸಿಲುಕಿರುವ ಹೋಟೆಲ್ ಉದ್ಯಮಕ್ಕೆ ನೆರವು ನೀಡುವ ಬಗ್ಗೆ 4 ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ.

ಹೋಟೆಲ್, ರೆಸ್ಟೋರೆಂಟ್ ತೆರೆಯಲು ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಹೋಟೆಲ್, ರೆಸ್ಟೋರೆಂಟ್ ತೆರೆಯಲು ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ

ಲಾಕ್ ಡೌನ್ ಮತ್ತು ಗ್ರಾಹಕರ ಪ್ರಮಾಣ ಕುಸಿತವಾಗಿರುವುದರಿಂದ ಹೋಟೆಲ್ ಉದ್ಯಮ ತತ್ತರಿಸಿದೆ. ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ಮಂದಿಯ ಬದುಕು ಅನಿಶ್ಚಿತತೆಯಲ್ಲಿದೆ. ಪರಿಸ್ಥಿತಿ ಹೀಗಿದ್ದರೂ ಸರ್ಕಾರ ಇದುವರೆಗೂ ಈ ವರ್ಗದವರಿಗೆ ಯಾವುದೇ ನೆರವು ನೀಡದಿರುವುದು ಬೇಸರದ ಸಂಗತಿ ಎಂದು ಡಿ. ಕೆ. ಶಿವಕುಮಾರ್ ಪತ್ರದಲ್ಲಿ ಹೇಳಿದ್ದಾರೆ.

ಮೈಸೂರಿನ ಪ್ರತಿಷ್ಠಿತ ಸದರನ್ ಸ್ಟಾರ್ ಹೋಟೆಲ್ ಬಂದ್ಮೈಸೂರಿನ ಪ್ರತಿಷ್ಠಿತ ಸದರನ್ ಸ್ಟಾರ್ ಹೋಟೆಲ್ ಬಂದ್

ಆಸ್ತಿ ತೆರಿಗೆಯನ್ನು ಮನ್ನಾ ಮಾಡಿ

ಆಸ್ತಿ ತೆರಿಗೆಯನ್ನು ಮನ್ನಾ ಮಾಡಿ

ವಾಣಿಜ್ಯ ಕಟ್ಟಡಗಳಲ್ಲಿ ಇರುವ ಹೋಟೆಲ್‌ಗಳಿಗೆ 2020-21ರ ಆಸ್ತಿ ತೆರಿಗೆಯನ್ನು ಕನಿಷ್ಠ ಒಂದು ವರ್ಷ ಮನ್ನಾ ಮಾಡಬೇಕು ಎಂದು ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಬೆಸ್ಕಾಂ ಶುಲ್ಕ ವಜಾ ಮಾಡಿ

ಬೆಸ್ಕಾಂ ಶುಲ್ಕ ವಜಾ ಮಾಡಿ

ಎಲ್ಲಾ ಹೋಟೆಲ್‌ಗಳಿಗೆ ಬೆಸ್ಕಾಂ ನಿಗದಿತ ಶುಲ್ಕವನ್ನು ಒಂದು ವರ್ಷ ಕಾಲ ವಜಾ ಮಾಡಬೇಕು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಪತ್ರದಲ್ಲಿ ಡಿ. ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಒಂದು ವರ್ಷ ವಿನಾಯಿತಿ ನೀಡಿ

ಒಂದು ವರ್ಷ ವಿನಾಯಿತಿ ನೀಡಿ

2020-21ನೇ ಸಾಲಿನ ಸನ್ನದು ಶುಲ್ಕದಲ್ಲಿ ಕನಿಷ್ಠ ಒಂದು ವರ್ಷದ ವಿನಾಯಿತಿ ನೀಡಬೇಕು. ಉಳಿದ ಶುಲ್ಕವನ್ನು ಕಟ್ಟಲು ಆರು ತಿಂಗಳ ಅವಕಾಶ ನೀಡಬೇಕು. ಈಗಾಗಲೇ ಕಟ್ಟಿರುವ ತೆರಿಗೆ/ನಿಗದಿ ಶುಲ್ಕ/ ಸನ್ನದಿ ಶುಲ್ಕವನ್ನು ಮುಂದಿನ ವರ್ಷದ ತೆರಿಗೆ ಶುಲ್ಕದೊಂದಿಗೆ ಹೊಂದಾಣಿಕೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

ಪ್ಯಾಕೇಜ್ ಘೋಷಣೆ ಮಾಡಬೇಕು

ಪ್ಯಾಕೇಜ್ ಘೋಷಣೆ ಮಾಡಬೇಕು

ಹೋಟೆಲ್ ಉದ್ಯಮ ನಂಬಿಕೊಂಡು ಲಕ್ಷಾಂತರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹೋಟೆಲ್ ಕಾರ್ಮಿಕರಿಗೆ ಸಹಾಯಧನ ನೀಡುವ ಒಂದು ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಡಿ. ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.

English summary
In a letter to chief minister B. S. Yediyurappa KPCC president D. K. Shivakumar urged to announce financial compensation for the people who working in the hotel industry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X