ಮಳೆ ಅನಾಹುತ ಮತ್ತು‌ ಪ್ರವಾಹದಿಂದ ಆದ ಜೀವಹಾನಿಗೆ ಪರಿಹಾರ: ಮಹತ್ವದ ಮಾಹಿತಿ ನೀಡಿದ ಸಿದ್ದರಾಮಯ್ಯ

ಉತ್ತರ ಕನ್ನಡ, ಜುಲೈ 22: ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ NDRF ಪ್ರಕಾರ ಪರಿಹಾರ ಒಗದಿಸುವ ಕುರಿತಂತೆ ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದು, ಮಳೆ ಅನಾಹುತ ಮತ್ತು‌ ಪ್ರವಾಹದಿಂದ ಆದ ಜೀವಹಾನಿಗೆ ನೀಡಲಾಗಿರುವ ಪರಿಹಾರದ ಕುರಿತು ಮಾಹಿತಿ ಪಡೆದ ಸಿಎಂ ಉಳಿದವರಿಗೆ ತುರ್ತಾಗಿ ಕೊಡಬೇಕು ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಭಾನುವಾರ ಶಿರೂರು ಗುಡ್ಡ ಕುಸಿತದ ಸ್ಥಳ ಪರಿಶೀಲನೆ ಬಳಿಕ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಿದರು.ಅಲ್ಲದೇ ಕೋಸ್ಟಲ್ ಲೈನ್ ನಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಅಗತ್ಯ ಇರುವ ಕಡೆ ವೈರ್ ಗಳ ದುರಸ್ತಿ ಮತ್ತು ಬದಲಾವಣೆಗೆ ಸೂಚಿಸಿದರು.

Compensation Should Be Given For Loss Of Life Due To Rain Disaster And Flood Siddaramaiah

ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.

ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಸಿದರು.

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ,ಶಾಸಕರಾದ ಸತೀಶ್ ಸೈಲ್, ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅತೀಕ್ , ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ , ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ, ಜಿ.ಪಂ. ಸಿಇಒ ಈಶ್ವರ ಕುಮಾರ್ ಕಾಂದು, ಎಸ್ಪಿ ನಾರಾಯಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+