ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ: ಮಾ.12ರಿಂದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 26: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಮಾರ್ಚ್ ಮಧ್ಯಭಾಗದಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.
ರಾಜ್ಯದಲ್ಲಿ ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28 ರಿಂದ http://kea.kar.nic.in ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ.

ಉಪನ್ಯಾಸಕ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ ಕೊಟ್ಟ ರಾಜ್ಯ ಸರ್ಕಾರದ ಹೊಸ ಆದೇಶ!ಉಪನ್ಯಾಸಕ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ ಕೊಟ್ಟ ರಾಜ್ಯ ಸರ್ಕಾರದ ಹೊಸ ಆದೇಶ!

ಇನ್ನು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗದಿಪಡಿಸಿದ್ದು, ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ. ಈ ಪರೀಕ್ಷೆಯು ಮಾರ್ಚ್ 12ರಿಂದ 16ರವರೆಗೆ ನಡೆಯಲಿದೆ. ಶನಿವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇತ್ತೀಚಿನ 2 ಭಾವಚಿತ್ರ, ಪ್ರವೇಶಪತ್ರ, ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ತರಬೇಕು ಎಂದಿದ್ದಾರೆ.

Competitive Examination for the post of Assistant Professor: Admission opens from 28th

ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿತ ವಸ್ತುಗಳಿಗೆ ಅವಕಾಶವಿಲ್ಲ:
ರಾಜ್ಯದಲ್ಲಿ ಮಾರ್ಚ್ 12ರಿಂದ ಆರಂಭವಾಗಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂಟೂತ್, ಕೈ ಗಡಿಯಾರದಂತಹ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಇದರ ಜೊತೆಗೆ ಆಹಾರ ಪದಾರ್ಥಗಳು ಹಾಗೂ ಸ್ಟೇಷನರಿ ವಸ್ತುಗಳಾದ ಪೆನ್ಸಿಲ್, ಕಾಗದ, ಎರೇಸರ್, ಇಂಚುಪಟ್ಟಿ, ಜಾಮಿಟ್ರಿ ಪೆಟ್ಟಿಗೆ, ಕ್ಯಾಲ್ಕುಲೇಟರ್, ಲಾಗ್ ಟೇಬಲ್ ಮತ್ತು ವೈಯಕ್ತಿಕ ವಸ್ತುಗಳನ್ನು ವ್ಯಾಲೆಟ್, ಅಲಂಕಾರಿಕ ಕನ್ನಡಕ, ಬೆಲ್ಟ್, ಟೋಪಿ, ಕ್ಯಾಮರಾ, ಆಭರಣಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ನಿಗದಿತ ವಸ್ತ್ರ ಸಂಹಿತೆ ಕಡ್ಡಾಯ:
ಪರೀಕ್ಷೆ ಬರೆಯಲಿರುವ ಪುರುಷ ಅಭ್ಯರ್ಥಿಗಳಿಗೆ ಕೊವಿಡ್-19 ಮಾರ್ಗದರ್ಶಿ ಸೂತ್ರಗಳ ಹಿನ್ನೆಲೆ ಅರೆ-ಪಾರದರ್ಶಕ ಸರ್ಜಿಕಲ್ ಮಾಸ್ಕ್ ಧರಿಸಿರಬೇಕು. ಎನ್-95 ಮತ್ತು ಇತರ ಬಗೆಯ ಮಾಸ್ಕ್ ನಿಷಿದ್ಧವಾಗಿದೆ. ಅರೆದೋಳಿನ ಅಂಗಿ ಮತ್ತು ಸಾದಾ ಪ್ಯಾಂಟ್ ಹಾಗೂ ಚಪ್ಪಲಿಗಳನ್ನು ಕಡ್ಡಾಯಗೊಳಿಸಲಾಗಿದೆ. ಹಾಗೆ, ಮಹಿಳಾ ಅಭ್ಯರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಅರೆದೋಳಿನ ಉಡುಪುಗಳನ್ನು ಸೂಚಿಸಲಾಗಿದೆ.
ಪುರುಷರಾಗಲಿ, ಮಹಿಳೆಯರಾಗಲಿ ತುಂಬುದೋಳಿನ ಉಡುಪು, ಶೂ, ಆಭರಣಗಳಾದ ಪದಕ, ಮೂಗುಬೊಟ್ಟು, ಕಿವಿಯೋಲೆ, ನೆಕ್ಲೇಸ್, ಬ್ರೇಸ್ಲೆಟ್ ಮತ್ತು ಆಲಂಕಾರಿಕ ಉಡುಪುಗಳನ್ನು ಧರಿಸಿಕೊಂಡು ಬರುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ಬ್ರ್ಯಾಂಡ್ ನ ಹೆಸರಿಲ್ಲದ ಸಾದಾ ಬಾಟಲಿಯಲ್ಲಿ ಕುಡಿಯುವ ನೀರನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಬರಲು ಅವಕಾಶ ಕೊಡಲಾಗಿದೆ ಎಂದು ಪ್ರಾಧಿಕಾರವು ಮಾಹಿತಿ ನೀಡಿದೆ.

English summary
Competitive Examination for the post of Assistant Professor: Admission opens from 28th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X