• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದೆಹಲಿಯಲ್ಲಿ ಸಿಕ್ಕ ಹಣ ಡಿಕೆಶಿಗೆ ಸೇರಿದ್ದು : ಹೆಚ್ಚುವರಿ ಸಾಲಿಟರ್ ಜನರಲ್

|

ಬೆಂಗಳೂರು, ಜೂನ್ 03 : ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲು ಮಾಡಿರುವ ದೂರು ಕಾನೂನು ಬದ್ಧವಾಗಿದೆ ಎಂದು ಹೆಚ್ಚುವರಿ ಸಾಲಿಟರ್ ಜನರಲ್ ಪ್ರಭುಲಿಂಗ ಕೆ.ನಾವಡಗಿ ಹೇಳಿದರು.

ಬೆಂಗಳೂರು ಮತ್ತು ನವದೆಹಲಿಯಲ್ಲಿ 2017ರಲ್ಲಿ ನಡೆದ ಐಟಿ ದಾಳಿ ಕುರಿತು ಸಚಿವ ಡಿ.ಕೆ.ಶಿವಕುಮಾರ್ ಮತ್ತು ಇತರರ ವಿರುದ್ಧ ಇಡಿ ದೂರು ದಾಖಲು ಮಾಡಿಕೊಂಡಿದೆ. ಪ್ರಕರಣದಿಂದ ನಮ್ಮನ್ನು ಕೈ ಬಿಡಬೇಕು ಎಂದು ಕೋರಿ ಡಿ.ಕೆ.ಶಿವಕುಮಾರ್ ಮತ್ತು ಇತರರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಸಚಿವ ಡಿ.ಕೆ.ಶಿವಕುಮಾರ್‌ಗೆ ಬಿಗ್ ರಿಲೀಫ್‌ ನೀಡಿದ ಹೈಕೋರ್ಟ್

ಸೋಮವಾರ ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು ನಡೆಸಿದರು. ಜಾರಿ ನಿರ್ದೇಶನಾಲಯದ ಪರವಾಗಿ ಹೆಚ್ಚುವರಿ ಸಾಲಿಟರ್ ಜನರಲ್ ಪ್ರಭುಲಿಂಗ ಕೆ.ನಾವಡಗಿ ವಾದ ಮಂಡನೆ ಮಾಡಿದರು.

ಡಿ.ಕೆ.ಶಿವಕುಮಾರ್ ವಿರುದ್ಧದ ಐಟಿ ತನಿಖೆಗೆ ಇದ್ದ ತಡೆ ತೆರವು

ಆರೋಪಿಗಳು ಆದಾಯ ತೆರಿಗೆ ಕಾಯ್ದೆ 1961 ರ ಕಲಂ 276 ಸಿ (1) ಮತ್ತು 277ರ ಪ್ರಕಾರ ದಂಡನೀಯ ಅಪರಾಧ ಎಸಗಿದ್ದಾರೆ. ಹವಾಲಾ ಮೂಲಕ ಬೆಂಗಳೂರಿನಿಂದ ನವದೆಹಲಿಯ ಸಫ್ದರ್ ಜಂಗ್ ಎನ್ಕ್ಲೇವ್‌ಗೆ ಹಣ ಸಾಗಣೆ ಮಾಡಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ದೆಹಲಿ ನಿವಾಸದಲ್ಲಿ ಸಿಕ್ಕ ಹಣ ಡಿ.ಕೆ.ಶಿವಕುಮಾರ್ ಅವರಿಗೆ ಸೇರಿದ್ದು, ಹಣ ಸಾಗಣೆಗೆ ಕೆ.ಜಿ.ಎಂದು ಕೋಡ್ ವರ್ಡ್ ಬಳಕೆ ಮಾಡಿದ್ದಾರೆ. ಜಾರಿ ನಿರ್ದೇಶನಾಲಯ ದಾಖಲು ಮಾಡಿರುವ ದೂರು ಕಾನೂನು ಬದ್ಧವಾಗಿದೆ ಎಂದು ವಾದ ಮಂಡಿಸಿದರು.

ಡಿಕೆ ಶಿವಕುಮಾರ್ ವಿರುದ್ಧ ಹೈಕೋರ್ಟ್ ಮೊರೆ ಹೋದ ಆದಾಯ ತೆರಿಗೆ ಇಲಾಖೆ

ದಾಳಿ ವೇಳೆ ಸಚಿವರಿಗೆ ಸೇರಿದ ನಿವಾಸಗಳಲ್ಲಿ ಸಿಕ್ಕಿದ 8.59 ಕೋಟಿಗೂ ಹೆಚ್ಚಿನ ಮೊತ್ತದ ಹಣಕ್ಕೆ ಲೆಕ್ಕ ನೀಡುವಲ್ಲಿ ಆರೋಪಿಗಳು ವಿಫಲರಾಗಿದ್ದಾರೆ. ಎಲ್ಲಾ ಆರೋಪಿಗಳು ಐಪಿಸಿ ಕಲಂ 120 ಬಿ ಅಡಿ ಒಳಸಂಚು ರೂಪಿಸಿದ್ದಾರೆ ಎಂದರು.

ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್, ಎನ್.ರಾಜೇಂದ್ರ ಮತ್ತು ಆಂಜನೇಯ ಹನುಮಂತಯ್ಯ ಅವರು ಪ್ರಕರಣದಿಂದ ನಮ್ಮನ್ನು ಕೈ ಬಿಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆಯನ್ನು ಜೂನ್ 4ಕ್ಕೆ ಮುಂದೂಡಲಾಗಿದೆ.

English summary
Additional Solicitor General of India Prabhuling K.Navadgi said that enforcement directorate complaint against Karnataka water resource minister D.K.Shiva Kumar according to law. The money sized in the house at New Delhi belongs to D.K.Shiva Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X