ಸಚಿವ ರಮಾನಾಥ ರೈ ವಿರುದ್ಧ ಬಿಜೆಪಿಯಿಂದ ಆಯೋಗಕ್ಕೆ ದೂರು
ಮಂಗಳೂರು, ಮಾರ್ಚ್ 31: ಅನುಮತಿ ಪಡೆಯದೇ ಸಾರ್ವಜನಿಕ ಸಭೆ ನಡೆಸಿ ಮತಯಾಚನೆ ಮಾಡಿದ್ದಾರೆಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ವಿರುದ್ಧ ಬಂಟ್ವಾಳದಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ತಾಲ್ಲೂಕಿನ ಪಲ್ಲಮಜಲು ಎಂಬಲ್ಲಿ ಸ್ಥಳೀಯ ಚುನಾವಣಾಧಿಕಾರಿಗಳ ಅನುಮತಿ ಪಡೆಯದೇ ಅನುಮತಿ ಪಡೆಯದೇ ಸಾರ್ವಜನಿಕ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪಲ್ಲಮಜಲು ಎಂಬಲ್ಲಿ ಈ ಸಭೆ ಆಯೋಜಿಸಲಾಗಿತ್ತು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಚುನಾವಣೆ ಅಧಿಕಾರಿಗಳಿಗೆ ಸಚಿವ ಬಿ ರಮಾನಾಥ್ ರೈ ವಿರುದ್ಧ ದೂರು ನೀಡಿದ್ದಾರೆ.
ಪಲ್ಲಮಜಲಿನಲ್ಲಿ ನಡೆದ ಈ ಸಭೆ ಹಾಗೂ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಅಧಿಕಾರಿ ಡಾ ಎಂ ಆರ್ ರವಿ ಅವರ ಸೂಚನೆಯಂತೆ ಪೊಲೀಸರು ವಿಡಿಯೋ ಚಿತ್ರೀಕರಣ ಮತ್ತಿತರ ದಾಖಲೆಗಳನ್ನು ಸಂಗ್ರಹಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ವಿರುದ್ದದ ದೂರು ಪ್ರಕರಣ ಬಂಟ್ವಾಳದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಲಿದೆ ಎಂದು ಹೇಳಲಾಗಿದೆ.












Click it and Unblock the Notifications