ಕುಮಾರಸ್ವಾಮಿ-ಸಿದ್ದರಾಮಯ್ಯ-ಡಿಕೆಶಿ ವಿರುದ್ಧ ಪ್ರಕರಣ ದಾಖಲು
Recommended Video
ಬೆಂಗಳೂರು, ಏಪ್ರಿಲ್ 17: ಆದಾಯ ತೆರಿಗೆ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಸಿದ್ದರಾಮಯ್ಯ,ಕುಮಾರಸ್ವಾಮಿ,ಡಿಕೆಶಿ, ಪರಮೇಶ್ವರ್ ಸೇರಿ ಹಲವು ಮುಖಂಡರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರು ಸ್ಪಷ್ಟಪಡಿಸಿದ್ದು, ಐಟಿ ಅಧಿಕಾರಿಗಳ ದೂರನ್ನು ಆಧರಿಸಿ ದೂರು ದಾಖಲಿಸಲಾಗಿದೆ, ಐಟಿ ಅಧಿಕಾರಿಗಳು ದೂರಿನಲ್ಲಿ ಉಲ್ಲೇಖಿಸಿರುವ ಅಷ್ಟೂ ನಾಯಕರ ಮೇಲೆ ದೂರು ದಾಖಲಿಸಿದ್ದೇವೆ ಎಂದು ಅವರು ಹೇಳಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಕ್ರಮವಾಗಿ ಗುಂಪುಗೂಡುವುದು, ನೀತಿ ಸಂಹಿತೆ ಉಲ್ಲಂಘನೆ, ಐಪಿಸಿ 504, 506ರಡಿ ದೂರು ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 9 ರಂದು ಐಟಿ ಅಧಿಕಾರಿಗಳು ದೋಸ್ತಿ ನಾಯಕರ ವಿರುದ್ಧ ಚುನಾವಣಾ ಆಯೋಗ ಮತ್ತು ಪೊಲೀಸ್ ಇಲಾಖೆಗೆ ದೂರು ನೀಡಿದ್ದರು. ದೂರಿನಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪವನ್ನು ದೋಸ್ತಿ ನಾಯಕರ ವಿರುದ್ಧ ಮಾಡಿದ್ದರು.
ಮಾರ್ಚ್ 28 ರಂದು ಜೆಡಿಎಸ್ ಸಚಿವ ಪುಟ್ಟರಾಜು, ಸಚಿವ ಎಚ್.ಡಿ.ರೇವಣ್ಣ ಆಪ್ತರು ಸೇರಿದಂತೆ ಇನ್ನೂ ಹಲವು ಜೆಡಿಎಸ್-ಕಾಂಗ್ರೆಸ್ ಮುಖಂಡರ ಆಪ್ತರ ಮನೆಗಳ ಮೇಲೆ ಐಟಿ ದಾಳಿ ನಡೆಸಲಾಗಿತ್ತು. ಇದು ರಾಜಕೀಯ ದುರುದ್ದೇಶಪೂರಿತ ದಾಳಿಯೆಂದು ಆರೋಪಿಸಿ ದೋಸ್ತಿ ನಾಯಕರು ಐಟಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು.
ಅಂದಿನ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್, ಪರಮೇಶ್ವರ್, ದಿನೇಶ್ ಗುಂಡೂರಾವ್, ರಾಮಲಿಂಗಾ ರೆಡ್ಡಿ, ಸೌಮ್ಯಾ ರೆಡ್ಡಿ, ಸಾ.ರಾ.ಮಹೇಶ್, ಜೆಡಿಎಸ್-ಕಾಂಗ್ರೆಸ್‌ನ ಹಲವು ಶಾಸಕರು ಅಂದಿನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.












Click it and Unblock the Notifications