ರಾಣೆಬೆನ್ನೂರು ಶಾಸಕ ಆರ್.ಶಂಕರ್ ವಿರುದ್ಧ ಸ್ಫೀಕರ್‌ಗೆ ದೂರು
ಬೆಂಗಳೂರು, ಜುಲೈ 16 : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಆರ್. ಶಂಕರ್ ವಿರುದ್ಧ ಸ್ಪೀಕರ್‌ಗೆ ದೂರು ನೀಡಲಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಶಂಕರ್ ವಾಪಸ್ ಪಡೆದಿದ್ದಾರೆ.
ರಾಣೆಬೆನ್ನೂರು ಕ್ಷೇತ್ರದಿಂದ ಕೆಪಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆರ್. ಶಂಕರ್ ಗೆಲುವು ಸಾಧಿಸಿದ್ದರು. ಮೈತ್ರಿ ಸರ್ಕಾರ ರಚನೆಗೆ ಅವರು ಬೆಂಬಲ ನೀಡಿದ್ದರು. ಎಚ್. ಡಿ. ಕುಮಾರಸ್ವಾಮಿ ಸಂಪುಟಕ್ಕೆ 2ನೇ ಬಾರಿ ಸೇರುವ ಮೊದಲು ಪಕ್ಷವನ್ನು ಕಾಂಗ್ರೆಸ್‌ನಲ್ಲಿ ವಿಲೀನಗೊಳಿಸಿದ್ದರು.
ಕೆಪಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸ್ಥಾಪಕ ಮಹೇಶ್ ಗೌಡ ಮಂಗಳವಾರ ಸ್ಪೀಕರ್ ರಮೇಶ್ ಕುಮಾರ್‌ಗೆ ಆರ್. ಶಂಕರ್ ವಿರುದ್ಧ ದೂರು ನೀಡಿದ್ದಾರೆ. ಪಕ್ಷದ ನಿಯಮವನ್ನು ಶಂಕರ್ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಮಹೇಶ್ ಗೌಡ, "ಪಕ್ಷದ ಗಮನಕ್ಕೆ ತರದೆ ಶಂಕರ್ ಕಾಂಗ್ರೆಸ್ ಜೊತೆ ಪಕ್ಷವನ್ನು ವಿಲೀನ ಮಾಡಿದ್ದಾರೆ. ವೀಲಿನ ಕುರಿತಂತೆ ಸ್ಪೀಕರ್‌ಗೆ ಪತ್ರ ಬರೆದಿರುವುದು ಸರಿಯಲ್ಲ. ಇದನ್ನು ಮಾನ್ಯ ಮಾಡಬಾರದು ಎಂದು ಸ್ಪೀಕರ್‌ಗೆ ಮನವಿ ಮಾಡಿದ್ದೇವೆ" ಎಂದರು.
"ಜಿಲ್ಲಾ, ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಿ ಆನಂತರ ಪಕ್ಷವನ್ನು ವಿಲೀನ ಮಾಡಬೇಕು. ಆದರೆ, ಆರ್. ಶಂಕರ್ ಯಾವುದೇ ರೀತಿ ಚರ್ಚೆ ನಡೆಸದೇ ವಿಲೀನ ಮಾಡಲು ಮುಂದಾಗಿರುವುದು ಸರಿಯಲ್ಲ. ವಿಲೀನದ ಬಗ್ಗೆ ಶಂಕರ್ ಕೊಟ್ಟಿರುವ ಪತ್ರವನ್ನು ಮಾನ್ಯ ಮಾಡಬಾರದು ಎಂದು ಸ್ಪೀಕರ್ ಅವರಿಗೆ ದೂರು ನೀಡಲಾಗಿದೆ" ಎಂದು ಮಹೇಶ್ ಗೌಡ ಹೇಳಿದರು.
"ಶಂಕರ್ ಸರ್ಕಾರ ರಚನೆಗೆ ಬಾಹ್ಯ ಬೆಂಬಲ ನೀಡಿದ್ದರೂ ಅದು ಅವರ ವೈಯುಕ್ತಿಕ ವಿಚಾರ. ವಿಲೀನ ಕುರಿತಂತೆ ಪಕ್ಷ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎನ್ನುವ ಬಗ್ಗೆ ಇನ್ನೂ ಚರ್ಚೆ ನಡೆದಿಲ್ಲ. ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications