ಸಚಿವ ಚೆಲುವರಾಯಸ್ವಾಮಿ ವಿರುದ್ದ ಪತ್ರದ ಮೂಲಕ ರಾಜ್ಯಪಾಲರಿಗೆ ದೂರು: ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು, ಆಗಸ್ಟ್ 08: ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ಮಂಗಳವಾರ ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಬಳಿ ಮಾಧ್ಯಮಗಳ ಕುರಿತು ಮಾತನಾಡಿದ ಅವರು, ಪತ್ರ ಅಸಲಿ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಉತ್ತರಿಸಿ, ಈ ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ. ಪೊಲೀಸರು ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆ ಎಂದು ಹೇಳಿದರು.

Complaint To Governor Against Chaluvarayaswamy: CM Siddaramaiah Reaction

ಇನ್ನೂ ಬಿಬಿಎಂಪಿ ಗುತ್ತಿಗೆದಾರರು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕೆಲಸ ನಿಲ್ಲಿಸಿ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲಸ ನಿಲ್ಲಿಸಿಲ್ಲ. ತನಿಖೆಯಾಗಬೇಕೆಂದು ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ. ಬಿಬಿಎಂಪಿ, ಬಿಡಿಎ ನಲ್ಲಿ ಕೆಲಸಗಳಾಗಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡಿಸಲಾಗುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.

ಉಡುಪಿ ವೀಡಿಯೋ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು ನಿನ್ನೆ ಆದೇಶವಾಗಿದೆ. ಡಿವೈಎಸ್ಪಿ ಮಟ್ಟದ ಅಧಿಕಾರಿಗೆ ತನಿಖೆ ಮಾಡಲು ಸೂಚಿಸಲಾಗಿತ್ತು. ಆದರೆ ಇನ್ನೂ ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಸಿಐಡಿ ಗೆ ವಹಿಸಲಾಗಿದೆ. ಶಾಸಕ ಯಶ್ ಪಾಲ್ ಸುವರ್ಣ ಅವರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ಮಾಡಿದ್ದಾರೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಿಐಡಿಗೆ ಕೊಟ್ಟರೂ ಬೇಡ ಎನ್ನುತ್ತಾರೆ. ಅವರ ಕಾಲದಲ್ಲಿ ಸಿಐಡಿಗೆ ಕೊಟ್ಟಿದ್ದ ಪ್ರಕರಣಗಳು ಮುಚ್ಚಿಹೋಗಿವೆಯೇ ಎಂದರು.

ಎಸ್.ನಿಜಲಿಂಗಪ್ಪ ದೇಶ ಕಂಡ ಮುತ್ಸದ್ದಿ ರಾಜಕಾರಣಿ

ಎಸ್. ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ. ರಾಜ್ಯದ ಮುಖ್ಯಮಂತ್ರಿಯಾಗಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ನೀರಾವರಿಗೆ ಹೆಚ್ಚು ಆದ್ಯತೆ ನೀಡಿ, ಏಕೀಕರಣದ ನಂತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಮಾಡುವ ಇಚ್ಛಾಶಕ್ತಿಯಿಂದ ಅನೇಕ ಯೋಜನೆಗಳನ್ನು ರೂಪಿಸಿದರು. ಅತ್ಯಂತ ಪ್ರಾಮಾಣಿಕ ರಾಜಕಾರಣಿಯಾಗಿದ್ದ ಅವರು ತಮ್ಮ ಜೀವನದುದ್ದಕ್ಕೂ ಅದನ್ನು ಕಾಪಾಡಿಕೊಂಡು ಬಂದವರು.

ಧೀಮಂತ ನಾಯಕರಾಗಿದ್ದ ಅವರ ಪುಣ್ಯತಿಥಿ ಆಚರಿಸಿ ಗೌರವ ಸಲ್ಲಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಅವರ ಬದುಕು ನಮಗೆ ಮಾರ್ಗದರ್ಶನ ನೀಡಲಿ ಎಂದರು. ನಿಜಲಿಂಗಪ್ಪನವರು ಈ ನಾಡಿಗೆ ಹಾಗೂ ದೇಶಕ್ಕೆ ಮಾಡಿದ ಸೇವೆಯನ್ನು ನಾವೆಲ್ಲರೂ ಸ್ಮರಿಸಬೇಕು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+