ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; ಮೋದಿ ಸಭೆ ಬಳಿಕ ಹಲವು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್

|
Google Oneindia Kannada News

ಬೆಂಗಳೂರು, ಮೇ 19; ಪ್ರಧಾನಿ ನರೇಂದ್ರ ಮೋದಿ ಸಭೆ ಬಳಿಕ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಈಗಾಗಲೇ ಮೇ 24ರ ತನಕ ಲಾಕ್‌ಡೌನ್ ಜಾರಿಯಲ್ಲಿದೆ.

ಕೋವಿಡ್ ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಭೆ ನಡೆಸಿದ್ದರು. ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಇದರಲ್ಲಿ ಪಾಲ್ಗೊಂಡಿದ್ದರು.

ಕಲಬುರಗಿ ಜಿಲ್ಲೆಯಲ್ಲಿ ಮೇ 20ರಿಂದ ಸಂಪೂರ್ಣ ಲಾಕ್‌ಡೌನ್ಕಲಬುರಗಿ ಜಿಲ್ಲೆಯಲ್ಲಿ ಮೇ 20ರಿಂದ ಸಂಪೂರ್ಣ ಲಾಕ್‌ಡೌನ್

ಈ ಸಭೆಯಲ್ಲಿ ನರೇಂದ್ರ ಮೋದಿ ನೀಡಿದ ಸೂಚನೆಗಳ ಅನ್ವಯ ಜಿಲ್ಲಾಧಿಕಾರಿಗಳು ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಈಗ ಜಾರಿಯಲ್ಲಿರುವ ಲಾಕ್‌ಡೌನ್‌ ವಿಸ್ತರಣೆ ಮಾಡುವ ಕುರಿತು ಚರ್ಚೆ ನಡೆದಿದೆ.

ಹಾಸನ ಜಿಲ್ಲೆಯಲ್ಲಿ ವಾರದಲ್ಲಿ 4 ದಿನ ಸಂಪೂರ್ಣ ಲಾಕ್‌ಡೌನ್ ಹಾಸನ ಜಿಲ್ಲೆಯಲ್ಲಿ ವಾರದಲ್ಲಿ 4 ದಿನ ಸಂಪೂರ್ಣ ಲಾಕ್‌ಡೌನ್

Strict Lockdown

ಇಂದು ಬೆಳಗ್ಗೆ 11.30ಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪತ್ರಿಕಾಗೋಷ್ಠಿಯನ್ನು ಕರೆದಿದ್ದಾರೆ. ಲಾಕ್‌ಡೌನ್ ವಿಸ್ತರಣೆ, ವಿಶೇಷ ಪ್ಯಾಕೇಜ್ ಘೋಷಣೆ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವ ನಿರೀಕ್ಷೆ ಇದೆ.

ಕೋವಿಡ್ ಸಂಖ್ಯೆ ಏರಿಕೆ; ಬಳ್ಳಾರಿಯಲ್ಲಿ ಮೇ 24ರ ತನಕ ಕಠಿಣ ಲಾಕ್‍ಡೌನ್ಕೋವಿಡ್ ಸಂಖ್ಯೆ ಏರಿಕೆ; ಬಳ್ಳಾರಿಯಲ್ಲಿ ಮೇ 24ರ ತನಕ ಕಠಿಣ ಲಾಕ್‍ಡೌನ್

ಯಾವ-ಯಾವ ಜಿಲ್ಲೆಗಳು; ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮೇ 19ರ ಬೆಳಗ್ಗೆ 10 ರಿಂದ ಮೇ 24ರ ಬೆಳಗ್ಗೆ 6ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ತುರ್ತು ಸೇವೆಗಳಿಗೆ ಮಾತ್ರ ವಿನಾಯಿತಿ ಇದ್ದು, ಜನರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಹಾಸನ ಜಿಲ್ಲೆಯಲ್ಲಿ ವಾರದ 4 ದಿನ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದ್ದು ಸೋಮವಾರ, ಬುಧವಾರ, ಶುಕ್ರವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅವಕಾಶ ಇರುತ್ತದೆ.

ಕಲಬುರಗಿ ಜಿಲ್ಲೆಯಲ್ಲಿ ಮೇ 20ರ ಬೆಳಗ್ಗೆ 6 ಗಂಟೆಯಿಂದ ಮೇ 23ರ ಬೆಳಗ್ಗೆ 6 ಗಂಟೆ ವರೆಗೆ ಅತ್ಯಗತ್ಯ ಸೇವೆಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ವಿ. ವಿ. ಜ್ಯೋತ್ಸ್ನಾ ಆದೇಶ ಹೊರಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು ಜಿಲ್ಲಾಯಾದ್ಯಂತ ಮೇ 17ರ ಬೆಳಗ್ಗೆ 6 ಗಂಟೆಯಿಂದ ಮೇ 21ರ ರಾತ್ರಿ 12 ಗಂಟೆ ತನಕ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ವಾರ ಗುರುವಾರದಿಂದ ಭಾನುವಾರದ ತನಕ ಸಂಪೂರ್ಣ ಲಾಕ್‌ಡೌನ್ ಮಾಡಲಾಗಿತ್ತು. ಈ ವಾರವೂ ಅದನ್ನು ಮುಂದುವರಿಸಿ ಪ್ರಕಟಣೆಯನ್ನು ಹೊರಡಿಸಲಾಗಿದೆ.

Recommended Video

ಬಡವರ ಕಷ್ಟಕ್ಕೆ ಸ್ಪಂದಿಸಿದ BSY!! | Oneindia Kannada

ಮೈಸೂರು ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ 40ರಷ್ಟಿದೆ. ಇದನ್ನು ಕಡಿಮೆ ಮಾಡಲು ಅಗತ್ಯ ವಸ್ತುಗಳ ಖರೀದಿಗೆ ಇರುವ ಸಮಯವನ್ನು ಕಡಿತಗೊಳಿಸಲು ಚಿಂತನೆ ನಡೆಸಲಾಗಿದೆ. ಆದರೆ ಈ ಕುರಿತು ಅಧಿಕೃತ ಆದೇಶ ಪ್ರಕಟವಾಗಿಲ್ಲ.

English summary
After meeting with prime minister Narendra Modi various districts of Karnataka announced complete lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X