• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕ ಲಾಕ್‌ಡೌನ್: ಅಂತರ್-ಜಿಲ್ಲಾ ಸಂಚಾರಕ್ಕೂ ಮುನ್ನ ಎಚ್ಚರ!

|

ಬೆಂಗಳೂರು, ಮೇ 07: ಕರ್ನಾಟಕದಲ್ಲಿ ಕೊರೊನಾವೈರಸ್ ಕಟ್ಟಿ ಹಾಕಲು 14 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆ. ಮೇ 10ರ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೂ ಲಾಕ್‌ಡೌನ್ ಜಾರಿಯಲ್ಲಿ ಇರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ.

ಶುಕ್ರವಾರ ಸಂಜೆ 7.30ರ ಸುಮಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸುವುದಾಗಿ ಹೇಳಿದರು. ಬೆಳಗ್ಗೆ 10 ಗಂಟೆವರೆಗೂ ತರಕಾರಿ, ಹಣ್ಣು ಖರೀದಿಗೆ ಅನುಮತಿ ನೀಡಲಾಗಿದೆ. ಅಂತರ್-ಜಿಲ್ಲೆ, ಅಂತರ್-ರಾಜ್ಯ ಹಾಗೂ ಅಂತರಾಷ್ಟ್ರೀಯ ಸಂಚಾರಕ್ಕೆ ಸಂಬಂಧಿಸಿದ ನಿಯಮಗಳು ಎಲ್ಲರೂ ಹುಬ್ಬೇರಿಸುವಂತೆ ಮಾಡುತ್ತವೆ.

ಕೊರೊನಾ 2ನೇ ಅಲೆ ಭೀತಿಯಲ್ಲೇ ಲಸಿಕೆಗೆ ಹೆಚ್ಚಿದ ಬೇಡಿಕೆ! ಕೊರೊನಾ 2ನೇ ಅಲೆ ಭೀತಿಯಲ್ಲೇ ಲಸಿಕೆಗೆ ಹೆಚ್ಚಿದ ಬೇಡಿಕೆ!

ರಾಜ್ಯದಲ್ಲಿ ಲಾಕ್‌ಡೌನ್ ಜಾರಿಗೊಳಿಸಿದ ಸಂದರ್ಭದಲ್ಲಿ ಅಂತರ್-ಜಿಲ್ಲಾ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದರೆ ಇದೇ ಅವಧಿಯಲ್ಲಿ ಅಂತರ್-ರಾಜ್ಯ ಸಂಚಾರಕ್ಕೆ ಹಾಗೂ ಅಂತಾರಾಷ್ಟ್ರೀಯ ಸಂಚಾರಕ್ಕೆ ಯಾವುದೇ ನಿರ್ಬಂಧಗಳಿಲ್ಲ.

ಉದಾಹರಣೆ: ಬೆಂಗಳೂರಿನಿಂದ ಮುಂಬೈಗೆ ವಿಮಾನದಲ್ಲಿ ಆರಾಮವಾಗಿ ಸಂಚರಿಸಬಹುದು. ಆದರೆ ಬೆಂಗಳೂರಿನಿಂದ ಮಂಗಳೂರಿಗೆ ಮಾತ್ರ ಸಂಚಾರ ಮಾಡುವಂತಿಲ್ಲ!. ಇಂಥದ್ದೇ ಸರ್ಕಾರದ ನಿಯಮಗಳು ಮತ್ತು ಅವುಗಳಲ್ಲಿನ ಲೋಪದೋಷಗಳನ್ನು ಈ ಸುದ್ದಿಯಲ್ಲಿ ಪಟ್ಟಿ ಮಾಡಲಾಗಿದೆ ಓದಿ.

ಕರ್ನಾಟಕದಲ್ಲಿ ಸಂಪೂರ್ಣ ಲಾಕ್‌ಡೌನ್, ಏನಿರುತ್ತೆ? ಏನಿರಲ್ಲ? ಕರ್ನಾಟಕದಲ್ಲಿ ಸಂಪೂರ್ಣ ಲಾಕ್‌ಡೌನ್, ಏನಿರುತ್ತೆ? ಏನಿರಲ್ಲ?

ರಾಜ್ಯದಲ್ಲಿ ಯಾವ ವಾಹನಗಳ ಸಂಚಾರಕ್ಕೆ ನಿರ್ಬಂಧ?

* ಕೆಎಸ್ಆರ್ ಟಿಸಿ

* ಬಿಎಂಟಿಸಿ

* ಮೆಟ್ರೋ ರೈಲು

* ಟ್ಯಾಕ್ಸಿ

* ಆಟೋರಿಕ್ಷಾ

* ಕ್ಯಾಬ್

ಜನರ ಚಟುವಟಿಕೆ ಮತ್ತು ಪ್ರಯಾಣಕ್ಕೆ ನಿರ್ಬಂಧ:

* ಮಾರ್ಗಸೂಚಿಯಡಿ ಉಲ್ಲೇಖಿಸಿ ವಾಹನಗಳ ಹೊರತಾಗಿ ಯಾವುದೇ ಸರ್ಕಾರಿ ಮತ್ತು ಖಾಸಗಿ ವಾಹನಗಳು ಮತ್ತು ಪ್ರಯಾಣಿಕರ ಸಂಚಾರಕ್ಕೆ ಅನುಮತಿಯಿಲ್ಲ

ಕರ್ನಾಟಕದಲ್ಲಿ ಲಾಕ್‌ಡೌನ್, ಜಿಲ್ಲೆಯಿಂದ ಜಿಲ್ಲೆಗೆ ಓಡಾಟ ನಿಷೇಧ: ಯಡಿಯೂರಪ್ಪ ಕರ್ನಾಟಕದಲ್ಲಿ ಲಾಕ್‌ಡೌನ್, ಜಿಲ್ಲೆಯಿಂದ ಜಿಲ್ಲೆಗೆ ಓಡಾಟ ನಿಷೇಧ: ಯಡಿಯೂರಪ್ಪ

* ಅಂತರ್-ರಾಜ್ಯ, ಅಂತಾರಾಷ್ಟ್ರೀಯ ಪ್ರಯಾಣಕ್ಕೆ ಯಾವುದೇ ನಿರ್ಬಂಧವಿಲ್ಲ

* ಕರ್ನಾಟಕದಲ್ಲೇ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಪ್ರಯಾಣಿಸಲು ಕಟ್ಟುನಿಟ್ಟಿನ ನಿರ್ಬಂಧ

* ರಾಜ್ಯದ ಒಂದು ಜಿಲ್ಲೆಯ ವ್ಯಾಪ್ತಿಯಲ್ಲಿ ಸಂಚಾರಕ್ಕೆ ಅನುಮತಿ ನೀಡಿದ ಸರ್ಕಾರ

* ಅಂತರ್ ರಾಜ್ಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಕ್ವಾಂರಂಟೈನ್ ನಿಯಮ ಇಲ್ಲ

* ಅಂತರ್-ಜಿಲ್ಲೆಗಳಿಗೆ ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೂ ಅನುಮತಿ ನೀಡಿದ ಸರ್ಕಾರ

   Karnataka Lockdownನ ಹೊಸ ನಿಯಮಾವಳಿಗಳೇನು | Oneindia Kannada
   English summary
   The Karnataka Government Not Allowed Inter-District Vehicle Movement During The 14-Day Complete Lockdown In The State.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X