6 ರಾಷ್ಟ್ರೀಯ ಹೆದ್ದಾರಿ ಯೋಜನೆ ಪೂರ್ಣಗೊಳಿಸಲು ಸಿಎಂ ಸೂಚನೆ
ಬೆಂಗಳೂರು, ಜುಲೈ 08 : ಬೆಂಗಳೂರು-ಮೈಸೂರು ಸೇರಿದಂತೆ ಕರ್ನಾಟಕದ 6 ರಾಷ್ಟ್ರೀಯ ಹೆದ್ದಾರಿಗಳ ಕೆಲಸವನ್ನು ಈ ವರ್ಷದಲ್ಲಿ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎನ್‌ಎಚ್‌ಎಐ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಮತ್ತು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳು 6 ರಾಷ್ಟ್ರೀಯ ಹೆದ್ದಾರಿಗಳ ಕೆಲಸವನ್ನು ಈ ವರ್ಷ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ವರ್ಷ ಕರ್ನಾಟಕದಲ್ಲಿ 4 ಸಾವಿರ ಕಿ.ಮೀ. ಹೆದ್ದಾರಿಯನ್ನು ಅಭಿವೃದ್ಧಿಪಡಿಸುತ್ತಿದೆ. ಬೆಂಗಳೂರು-ಮೈಸೂರು, ಕುಂದಾಪುರ-ಗೋವಾ ಗಡಿಯ 4 ಪಥದ ಮಾರ್ಗವನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.

37,000 ಕೋಟಿ ರೂ.ಗಳ ಯೋಜನೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿದೆ. ಈ ಯೋಜನೆಯನ್ನು ಪೂರ್ಣಗೊಳಿಸಿ, ಯೋಜನೆಗೆ ಅಗತ್ಯವಿರುವ ಭೂ ಸ್ವಾಧೀನ ಕಾರ್ಯವೂ ತಕ್ಷಣ ಪೂರ್ಣಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಯಾವ ಯಾವ ರಸ್ತೆಗಳು?
* ಬೆಂಗಳೂರು-ಮೈಸೂರು 117 ಕಿ.ಮೀ. (ಎನ್.ಎಚ್. 275)
* ಕುಂದಾಪುರ-ಗೋವಾ ಗಡಿ (170 ಕಿ.ಮೀ.)
* ತುಮಕೂರು-ಶಿವಮೊಗ್ಗ 4 ಪಥ (205 ಕಿ.ಮೀ.) (ಎನ್.ಎಚ್.206)
* ಬಳ್ಳಾರಿ-ಹಿರಿಯೂರು (160 ಕಿ.ಮೀ) (ಎನ್.ಎಚ್.150)
* ಬೆಂಗಳೂರು-ಹಾಸನ (180 ಕಿ.ಮೀ)












Click it and Unblock the Notifications