Get Updates
Get notified of breaking news, exclusive insights, and must-see stories!

Industry: ಕರ್ನಾಟಕದ ಈ ಜಿಲ್ಲೆಗಳಲ್ಲಿ ಫಾರ್ಮಾ ಪಾರ್ಕ್, ಸೋಲಾರ್ ಪಾರ್ಕ್, ಡ್ರೋನ್ & ಆಗ್ರೋ ಪಾರ್ಕ್ ಸ್ಥಾಪನೆ: ಎಂಬಿ ಪಾಟೀಲ

ಬೆಂಗಳೂರು, ಫೆಬ್ರವರಿ 09: ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ 2025 (Invest Karnataka 2025) ಕ್ಷಣಗಣನೇ ಆರಂಭವಾಗಿದೆ. ಈ ಬಾರಿ 10 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಬರುವುದು ಖಾತ್ರಿಯಾಗಿದೆ. ಇದೇ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದ ಸಮಗ್ರ ಕೈಗಾರಿಕಾ ಬೆಳವಣಿಗೆಯನ್ನು ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಹೇಳಿದರು.

ಇನ್ವೆಸ್ಟ್ ಕರ್ನಾಟಕ ಕುರಿತು ಪೂರ್ವಭಾವಿಯಾಗಿ ಶನಿವಾರ ಸಚಿವರು ಸುದ್ದಿಗೋಷ್ಠಿ ನಡೆಸಿದರು. ಈ ಸಮಾವೇಶದಿಂದ ಭಾರೀ ಬಂಡವಾಳ ಹೂಡಿಕೆ ಆಗಲಿದೆ. ರಾಜ್ಯದ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲಾಗುವುದು. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ ಪಾರ್ಕ್, ವಿಜಯಪುರದಲ್ಲಿ ಸೋಲಾರ್ ಸೆಲ್ ಪಾರ್ಕ್ ಮತ್ತು ಕೃಷಿ ಉತ್ಪನ್ನಗಳನ್ನು ಆಧರಿಸಿದ ಆಗ್ರೋ ಪಾರ್ಕ್, ಚಿತ್ರದುರ್ಗದಲ್ಲಿ ಡ್ರೋನ್ ಪಾರ್ಕ್ ನಿರ್ಮಿಸಲಾಗುವುದು.

Comprehensive Industrial Development Solar Park Drone and Agro Park Farma Park in state soon

ಜಂಗಮನಕೋಟೆಯಲ್ಲಿ ಸರ್.ಎಂ. ವಿಶ್ವೇಶ್ವರಯ್ಯನವರ ಹೆಸರಿನಲ್ಲಿ ಡೀಪ್-ಟೆಕ್ ಪಾರ್ಕ್, ಡಾಬಸಪೇಟೆಗೆ ಸಮೀಪದ ಹನುಮಂತಪುರದಲ್ಲಿ ಮೆಗಾ ಲಾಜಿಸ್ಟಿಕ್ಸ್ ಪಾರ್ಕ್, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಧಾರವಾಡದಲ್ಲಿ ಇ.ವಿ ಕ್ಲಸ್ಟರ್ಸ್ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ 400ಕ್ಕೂ ಹೆಚ್ಚು ನವೋದ್ಯಮಗಳಿಗೆ ಪ್ರೋತ್ಸಾಹಿಸಲಾಗುವುದು. 200 ಎಕರೆ ವಿಸ್ತಾರದ ಸ್ಟಾರ್ಟಪ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದೆ. ಅಲ್ಲದೆ, ವಿಜಯಪುರದ ತಿಡಗುಂದಿಯಲ್ಲಿ 1,200 ಎಕರೆ ವಿಸ್ತೀರ್ಣದಲ್ಲಿ ಸೋಲಾರ್ ಸೆಲ್ ಮತ್ತು ಅಗ್ರೊ ಟೆಕ್ ಪಾರ್ಕ್ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.

ಸಮಾವೇಶದಲ್ಲಿ ಭವಿಷ್ಯದ ತಯಾರಿಕಾ ವಲಯ, ಸಾರಿಗೆ ಮತ್ತು ಪರಿಸರ ಸ್ನೇಹಿ ಇಂಧನ ಉತ್ಪಾದನೆ ವಲಯಗಳಿಗೆ ವಿಶೇಷ ಗಮನ ಕೊಡಲಾಗುತ್ತಿದೆ. ಇದರ ಅಂಗವಾಗಿ 60ಕ್ಕೂ ಹೆಚ್ಚು ಸ್ಟಾರ್ಟಪ್ ಕಂಪನಿಗಳು ಅತ್ಯಾಧುನಿಕ ತಂತ್ರಜ್ಞಾನವನ್ನು ಮತ್ತು ಅವುಗಳನ್ನು ಆಧರಿಸಿ ರೂಪಿಸಿರುವ ಪರಿಹಾರೋಪಾಯಗಳನ್ನು ಪ್ರದರ್ಶಿಸಲಿವೆ. ಇವುಗಳಲ್ಲಿ ಕಾರ್ಬನ್ ನ್ಯಾನೋಟ್ಯೂಬ್, ಅಟಾನಮಸ್ ಸಿಸ್ಟಮ್ಸ್, ಮಾನವರಹಿತ ಏರಿಯಲ್ ವೆಹಿಕಲ್ಸ್ ಮತ್ತು ಸುಧಾರಿತ ರೋಬೋಟಿಕ್ಸ್ ಮುಂತಾದವು ಸೇರಿವೆ ಎಂದು ವಿವರಿಸಿದರು.

Comprehensive Industrial Development Solar Park Drone and Agro Park Farma Park in state soon

ಇನ್ವೆಸ್ಟ್ ಸಮಾವೇಶದಲ್ಲಿ 19 ರಾಷ್ಟ್ರಗಳು ಪಾಲ್ಗೊಳ್ಳುತ್ತಿವೆ, 10 ರಾಷ್ಟ್ರಗಳೊಂದಿಗೆ ಸುಸ್ಥಿರ ಆರ್ಥಿಕ ಬೆಳವಣಿಗೆಗೆ, ಹೂಡಿಕೆಗೆ ಇರುವ ಅವಕಾಶಗಳು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಕರ್ನಾಟಕದ ಸ್ಥಾನಮಾನ, ರಾಜ್ಯದಲ್ಲಿ ಮರುಬಳಕೆ ಇಂಧನ ಕ್ಷೇತ್ರದ ಭವಿಷ್ಯ, ಆರೋಗ್ಯ ಸೇವೆ ಮುಂತಾದ ನಿರ್ಣಾಯಕ ಕ್ಷೇತ್ರಗಳನ್ನು ಕುರಿತು ಚರ್ಚೆಗಳಾಗಳಿವೆ. ಪ್ರಮುಖ ಒಪ್ಪಂಗಳು ನಡೆಯಲಿವೆ.

ಸಾಧಕ ಕಂಪನಿಗಳಿಗೆ ಪುರಸ್ಕಾರ

ರಾಜ್ಯದ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ನಿರ್ಣಾಯಕ ಕೊಡುಗೆ ನೀಡುತ್ತಿರುವ 14 ಉದ್ಯಮಗಳನ್ನು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಗುರುತಿಸಿ, ಪುರಸ್ಕರಿಸಲಾಗುತ್ತಿದೆ. ಇವುಗಳಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣೆ, ಆಟೋ/ಇ.ವಿ., ಜೈವಿಕ ತಂತ್ರಜ್ಞಾನ ಮತ್ತು ಜೀವವಿಜ್ಞಾನ ವಲಯಗಳ ಸಾಧಕ ಉದ್ಯಮಗಳು ಇರಲಿವೆ. ಈ ಕಾರ್ಯಕ್ರಮ ಫೆ.12ರ ಸಂಜೆ ನಡೆಯಲಿದೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+