100 ರೂ. ಲಂಚ ಪಡೆದವನಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ

ಬೆಂಗಳೂರು, ಅಕ್ಟೋಬರ್ 08 : ನಾಲ್ಕು ಸಾವಿರ ಲಂಚ ಪಡೆದು ಸಿಕ್ಕಿಬಿದ್ದ ಅಧಿಕಾರಿಯನ್ನು ಸೇವೆಯನ್ನು ವಜಾಗೊಳಿಸಲು ಮತ್ತು 100 ರೂ. ಲಂಚ ಪಡೆದು ಸಿಕ್ಕಿಬಿದ್ದ ಅರಣ್ಯ ರಕ್ಷಕನನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಈ ಕುರಿತು ಮಾಹಿತಿ ನೀಡಿದರು. ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಆರೋಪ ಸಾಬೀತಾದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

karnataka government

ಸಿ.ದೇವರಾಜಪ್ಪ ಎಂಬ ಗ್ರಾಮ ಪಂಚಾಯಿತಿ ಅಧಿಕಾರಿ 4 ಸಾವಿರ ರೂ. ಲಂಚ ಪಡೆದ ಆರೋಪ ಸಾಬೀತಾಗಿದೆ. ಆದ್ದರಿಂದ ಅವರನ್ನು ಸೇವೆಯಿಂದ ವಜಾಗೊಳಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು. [ಲಂಚ ಪಡೆಯುವಾಗ ಸಿಕ್ಕಿಬಿದ್ರು ವಿವಿ ಕುಲಸಚಿವ]

ಕಡ್ಡಾಯ ನಿವೃತ್ತಿ ಶಿಕ್ಷೆ : ಭವಾನಿ ಶಂಕರ್‌ ಎಂಬ ಅರಣ್ಯ ರಕ್ಷಕ 100 ರೂ. ಲಂಚ ಪಡೆದಿದ್ದ ಪ್ರಕರಣ ಸಾಬೀತಾಗಿದ್ದರಿಂದ ಅವರನ್ನು ಸೇವೆಯಿಂದ ವಜಾಗೊಳಿಸುವ ಪ್ರಸ್ತಾವನೆಯಿತ್ತು. ಆದರೆ, ಕಡ್ಡಾಯ ನಿವೃತ್ತಿಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. [ಲಂಚ ಪಡೆದು ಸಿಕ್ಕಿಬಿದ್ದ ಪೊಲೀಸ್ ಪೇದೆಗಳು]

ಸಂಪುಟ ಸಭೆಯ ಇತರ ತೀರ್ಮಾನಗಳು

ಅಧಿವೇಶನ ನಡೆಸುವುದು : ಅಕ್ಟೋಬರ್ ತಿಂಗಳಲ್ಲಿ ಸಾಲು-ಸಾಲು ರಜೆಗಳಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ ಅಂತ್ಯ ಅಥವಾ ನವೆಂಬರ್ ತಿಂಗಳಲ್ಲಿ ರಾಜ್ಯ ವಿಧಾನ ಮಂಡಲದ ಅಧಿವೇಶನ ಕರೆಯಲು ಸೂಕ್ತ ದಿನಾಂಕ ನಿರ್ಧರಿಸುವ ಪರಮಾಧಿಕಾರವನ್ನು ಮುಖ್ಯಮಂತ್ರಿಗಳಿಗೆ ವಹಿಸಲಾಗಿದೆ.

ವಿಮಾನ ನಿಲ್ದಾಣ ರಸ್ತೆ ಅಭಿವೃದ್ಧಿ : ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಮಾನಾಂತರ ರಸ್ತೆ ನಿರ್ಮಿಸಲು ಹಾಗೂ ಸಂಪರ್ಕ ರಸ್ತೆಯ ಅಭಿವೃದ್ಧಿ ಹಾಗೂ ವಿಸ್ತರಣೆಗೆ ಅಗತ್ಯವಿರುವ ಭೂ ಖರೀದಿಗೆ 21.8 ಕೋಟಿ ರೂ ಒಳಗೊಂಡಂತೆ ಒಟ್ಟಾರೆ ಕಾಮಗಾರಿಗಳಿಗೆ 31.5 ಕೋಟಿ ರೂ ಒದಗಿಸಲು ಒಪ್ಪಿಗೆ ನೀಡಲಾಗಿದೆ.

ಚಿತ್ರನಗರಿಗೆ ಜಮೀನು : ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದಲ್ಲಿನ ಲಭ್ಯವಿರುವ 114.15 ಎಕರೆ ಭೂಮಿಯಲ್ಲಿ 110.08 ಎಕರೆ ಜಮೀನನ್ನು ಚಿತ್ರನಗರಿ ನಿರ್ಮಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಗುತ್ತಿಗೆ ಆಧಾರದ ಮೇರೆಗೆ ಮಂಜೂರು ಮಾಡಲು ಒಪ್ಪಿಗೆ.

ಸಾಂಬಾರ ಉದ್ಯಾನ : ಹಾವೇರಿ ಜಿಲ್ಲೆಯ ಕುಳೇನೂರು ಗ್ರಾಮದಲ್ಲಿ ಸಾಂಬಾರ ಉದ್ಯಾನ ನಿರ್ಮಿಸಲು ಕೇಂದ್ರ ಸರ್ಕಾರಿ ಸ್ವಾಮ್ಯದ ಸಾಂಬಾರ ಮಂಡಳಿಗೆ 50 ಎಕರೆ ಜಮೀನು ಮಂಜೂರು ಮಾಡಲು ಒಪ್ಪಿಗೆ ಕೊಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+