Government employee; ಕಂಪ್ಯೂಟರ್ ಪರೀಕ್ಷೆ ನಿಯಮ ತಿದ್ದುಪಡಿ ಆದೇಶ
ಬೆಂಗಳೂರು, ಮಾರ್ಚ್ 11: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ನಿಯಮ ತಿದ್ದುಪಡಿ ಮಾಡಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. 31/12/2024ರ ತನಕ ಪರೀಕ್ಷೆ ಪಾಸು ಮಾಡಲು ದಿನಾಂಕ ವಿಸ್ತರಣೆ ಮಾಡಲಾಗಿದೆ.
ಮಾರ್ಚ್ 11ರ ಸೋಮವಾರ ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ವೀರಭದ್ರ, ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-1) ಅಧಿಸೂಚನೆ ಪ್ರಕಟಿಸಿದ್ದಾರೆ.

ಅಧಿಸೂಚನೆಯ ವಿವರಗಳು: ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012, ಇದನ್ನು ಮತ್ತಷ್ಟು ತಿದ್ದುಪಡಿ ಮಾಡುವುದಕ್ಕೆ ದಿನಾಂಕ 07/02/2024ರ ಅಧಿಸೂಚನೆ ಪ್ರಕಟಿಸಿರುವ ನಿಯಮಗಳ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಅದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿತ್ತು ಎಂದು ಹೇಳಿದೆ.
ದಿನಾಂಕ 07/02/2024ರ ಕರ್ನಾಟಕ ರಾಜ್ಯಪತ್ರದ ಭಾಗ IV-ಎ ರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14)ರ 3ನೇ ಪ್ರಕರಣದ (2)ನೇ ಉಪ ಪಕರಣದ (ಎ) ಖಂಡವನ್ನು ಪ್ರಕರಣ 8 ರೊಂದಿಗೆ ಓದಿಕೊಂಡು ಅಗತ್ಯಪಡಿಸಲಾದಂತೆ ಪ್ರಕಟಿಸಲಾಗಿರುವುದರಿಂದ ಸದರಿ ರಾಜ್ಯಪತ್ರವನ್ನು ದಿನಾಂಕ 07/02/2024ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.
ಸದರಿ ಕರಡು ನಿಯಮಗಳ ಬಗ್ಗೆ ಸ್ವೀಕೃತವಾಗಿರುವ ಆಕ್ಷೇಪಣೆ ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಶೀಲಿಸಿರುವುದರಿಂದ, ಈಗ, ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14) ರ 3ನೇ ಪ್ರಕರಣದ (1) ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ನಿಯಮಗಳನ್ನು ರಚಿಸುತ್ತದೆ ಎಂದು ತಿಳಿಸಿದೆ.
ನಿಯಮಗಳು
* ಶೀರ್ಷಿಕೆ ಮತ್ತು ಪ್ರಾರಂಭ. (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯತಕ್ಕದ್ದು. ಈ ನಿಯಮಗಳು ಅಧಿಕೃತ ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
* ನಿಯಮ 2ಕ್ಕೆ ತಿದ್ದುಪಡಿ. ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ ದಿನಾಂಕ 31/12/2023 ರೊಳಗೆ ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31/12/2024ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ 01/01/2024ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.
* ನಿಯಮ 3ಕ್ಕೆ ತಿದ್ದುಪಡಿ. ಸದರಿ ನಿಯಮಗಳ ನಿಯಮ 3ರಲ್ಲಿ. (ಎ) ಉಪ ನಿಯಮ (1)ರಲ್ಲಿ ದಿನಾಂಕ 31/12/2023ರೊಳಗೆ ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31/12/2024ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ 01/01/2024ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.
(ಬಿ) ಉಪ ನಿಯಮ (2)ರಲ್ಲಿ ದಿನಾಂಕ 31/12/2023ರೊಳಗೆ, ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31/12/2024ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ 01/01/2024ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಎಂದು ತಿಳಿಸಿದೆ.
ಈ ಅಧಿಸೂಚನೆಯ ಮೂಲಕ ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಳ್ಳುವುದು, ಉತ್ತೀರ್ಣರಾಗುವ ದಿನಾಂಕವನ್ನು 31/12/2024ರ ತನಕ ವಿಸ್ತರಣೆ ಮಾಡಿದೆ.
ರಾಜ್ಯ ಸರ್ಕಾರ ಆಡಳಿತ ಚುರುಕುಗೊಳಿಸಲು ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನ ಕಡ್ಡಾಯಗೊಳಿಸಿದೆ. ಆದ್ದರಿಂದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಂಡು, ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.
ಹೊಸದಾಗಿ ಸರ್ಕಾರಿ ಕೆಲಸಕ್ಕೆ ಸೇರಿದ ನೌಕರ/ ಸಿಬ್ಬಂದಿಗಳು ಸಹ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗದವರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ ಎಂದು ಆದೇಶದಲ್ಲಿ ತಿಳಲಾಗಿದೆ.
ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಳ್ಳುವುದಕ್ಕೆ ಮತ್ತು ಉತ್ತೀರ್ಣರಾಗುವುದಕ್ಕೆ ಇರುವ ಅವಧಿ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಇದಕ್ಕೆ ಸರ್ಕಾರ ಒಪ್ಪಿಗೆ ನೀಡಿತ್ತು. ಈಗ ಈ ಕುರಿತು ಅಧಿಸೂಚನೆ ಪ್ರಕಟಿಸಲಾಗಿದೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications