ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌ಎಸ್‌ಸಿ ಪರೀಕ್ಷೆ ಕನ್ನಡದಲ್ಲೂ ನಡೆಸಿ; ಕೇಂದ್ರ ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

|
Google Oneindia Kannada News

ಬೆಂಗಳೂರು, ಅ.07: ಕೇಂದ್ರ ಸರ್ಕಾರದ ಇಲಾಖಾ ಹುದ್ದೆಗಳಿಗೆ ಸಿಬ್ಬಂದಿ ಆಯ್ಕೆ ಸಮಿತಿಯು ನಡೆಸುವ ಸಿಜಿಎಲ್ ಪರೀಕ್ಷೆಗಳಲ್ಲಿ ಇಂಗ್ಲಿಷ್ ಮತ್ತು ಹಿಂದಿಯನ್ನು ಮಾತ್ರ ಪರಿಗಣನೆಗೆ ತೆಗೆದುಕೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಭಾಷಾ ತಾರತಮ್ಯ, ತ್ರಿಭಾಷ ಸೂತ್ರಕ್ಕೆ ಕೇಂದ್ರ ಸರ್ಕಾರ ಸಮಾಧಿ ಕಟ್ಟುತ್ತಿದೆ ಎಂದು ಆರೋಪಿಸಿದ್ದಾರೆ.

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್: ಎಚ್‌ಡಿ ಕುಮಾರಸ್ವಾಮಿಜೆಡಿಎಸ್‌ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್: ಎಚ್‌ಡಿ ಕುಮಾರಸ್ವಾಮಿ

"ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ..?" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

"ಕೇಂದ್ರ ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Conduct SSC Exam in Kannada as well; HD Kumaraswamy demands

"ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೇ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು" ಎಂದು ಕಿಡಿಕಾರಿದ್ದಾರೆ.

"ಈ ವಿಷಯದಲ್ಲಿ ನಮ್ಮ 2 ಬೇಡಿಕೆಗಳಿವೆ. ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು. ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು" ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Conduct SSC Exam in Kannada as well; HD Kumaraswamy demands

"ಕನ್ನಡದಲ್ಲೇ ಪರೀಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ, ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು, ಗುರುವಾರವಷ್ಟೇ ತಮಿಳುನಾಡು ಸಂಸದೆ ಕನಿಮೋಳಿ ಕೂಡ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು. "ದೇಶದಲ್ಲಿನ ವಿವಿಧ ಇಲಾಖೆಯ ಹುದ್ದೆಗಳಿಗೆ ಸಿಬ್ಬಂದಿ ಆಯ್ಕೆಗಾಗಿ ನಡೆಸುವ ಸಿಜಿಎಲ್ ಪರೀಕ್ಷೆಗಳಲ್ಲಿ ಇಂಗ್ಲಿಷ್ ಮತ್ತು ಹಿಂದಿಯನ್ನು ಮಾತ್ರ ಬಳಸಲಾಗುವುದು ಎಂಬ ಕೇಂದ್ರ ಸರ್ಕಾರದ ಘೋಷಣೆಯನ್ನು ನಾನು ಬಲವಾಗಿ ವಿರೋಧಿಸುತ್ತೇನೆ. ಭಾರತೀಯ ಒಕ್ಕೂಟದ ಸಾರ್ವಭೌಮತ್ವವು ಅದರ ಬಹುತ್ವದಲ್ಲಿ ಬೇರೂರಿದೆ. ಇದಕ್ಕೆ ವ್ಯತಿರಿಕ್ತವಾಗಿ, ಎಲ್ಲದರ ಮೇಲೆ ಒಂದು ಅಥವಾ ಎರಡು ಭಾಷೆಯನ್ನು ಹೇರುವುದಕ್ಕೆ ಪ್ರಯತ್ನಿಸಲಾಗುತ್ತಿದೆ" ಎಂದು ಕನಿಮೋಳಿ ಆರೋಪಿಸಿದ್ದರು.

English summary
Conduct SSC Exam in Kannada as well; Former Chief Minister HD Kumaraswamy demands and he accused that The central government is going to destroying the Three-language formula. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X