24 ನಾಗರಿಕ ನಿವೇಶನಗಳು ಕಾಂಗ್ರೆಸ್ ಕಚೇರಿಗಾಗಿ ಬಳಕೆ: ಪಕ್ಷದ ಪಿತ್ರಾರ್ಜಿತ ಆಸ್ತಿಯಲ್ಲ: ಪ್ರಹ್ಲಾದ್ ಜೋಶಿ ಗರಂ
ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯದಲ್ಲಿ 100 ಕಾಂಗ್ರೆಸ್ ಭವನಗಳನ್ನು ನಿರ್ಮಿಸುವ ಗುರಿ ಇಟ್ಟುಕೊಂಡಿದ್ದಾರೆ. ಇದರ ಬೆನ್ನಲ್ಲೆ ಸದ್ಯ ನಾಗರಿಕರಿಗೆ ಸಿಗಬೇಕಿದ್ದ ಎರಡು ಡಜನ್ ಸಿಎ ನಿವೇಶನಗಳನ್ನು ಕಾಂಗ್ರೆಸ್ ಪಕ್ಷದ ಕಚೇರಿಗಾಗಿ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ದೂರುಗಳು ಕೇಳಿ ಬಂದಿವೆ. ಈ ವಿಷಯ ವ್ಯಾಪಕವಾಗಿ ಚರ್ಚೆ ಆಗುತ್ತಿದ್ದು, ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಸರ್ಕಾರ ಸಾರ್ವಜನಿಕ ಆಸ್ತಿ ಲೂಟಿ ಹೊಡೆಯುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಸಚಿವರು ಎಕ್ಸ್ ಪೋಸ್ಟ್ ಮಾಡಿ ರಾಜ್ಯ ಕಾಂಗ್ರೆಸ್ ಹಾಗೂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದ ಜನರ ಸಾಮಾಜಿಕ ಸೌಲಭ್ಯಗಳಿಗೆ ಸಿಗಬೇಕಿದ್ದ ಆಸ್ತಿಗಳನ್ನು ಕಾಂಗ್ರೆಸ್ ಪಕ್ಷ ತನ್ನ ಪಿತ್ರಾರ್ಜಿತ ಆಸ್ತಿ ಎಂಬಂತೆ ಬಳಸಿಕೊಳ್ಳುತ್ತಿದೆ. ಬಡವರ ಹಿತ ಕಾಯುವ ಬದಲು ಕಾಂಗ್ರೆಸ್ ತನ್ನ 'ಪಕ್ಷದ ಹಿತ'ಕ್ಕೆ ಸಾರ್ವಜನಿಕ ಆಸ್ತಿ ಲೂಟಿ ಮಾಡುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು.

ನಾಗರಿಕರಿಗೆ ಮೂಲಸೌಕರ್ಯ ಒದಗಿಸಬೇಕಾದ ಸುಮಾರು 24ಕ್ಕೂ ಹೆಚ್ಚು ನಾಗರಿಕ ಸೌಲಭ್ಯ (CA) ನಿವೇಶನಗಳನ್ನು ಕಡಿಮೆ ಬೆಲೆಗೆ ತನ್ನ ಪಕ್ಷದ ಕಚೇರಿ ನಿರ್ಮಾಣಕ್ಕೆ ಹಂಚಿಕೆ ಮಾಡಿಕೊಂಡಿರುವುದು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಪರಮಾವಧಿ. ಈ ನಿವೇಷನಗಳು ಸಾರ್ವಜನಿಕ ಉದ್ಯಾನವನ, ಗ್ರಂಥಾಲಯ ಅಥವಾ ಆಸ್ಪತ್ರೆಗಳಿಗೆ ಬಳಕೆಯಾಗಬೇಕಿತ್ತು. ಈ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಗಳು ನಾಗರಿಕೆ ಸೌಲಭ್ಯಕ್ಕೆ ಮಾತ್ರವೇ ಬಳಕೆ ಆಗಬೇಕಿತ್ತ. ಅವೀಗ ಕಾಂಗ್ರೆಸ್ ಭವನಗಳಿಗೆ ಮೀಸಲಿಟ್ಟಿರುವುದು ರಾಜ್ಯದ ಜನತೆಗೆ ಮಾಡಿದ ದ್ರೋಹವಲ್ಲವೇ? ಎಂದು ಅವರು ಪ್ರಶ್ನಿಸಿದರು.
ಕಾಂಗ್ರೆಸ್ ಬಲವರ್ಧನೆಗೆ ಸಾರ್ವಜನಿಕ ಆಸ್ತಿ ಬೇಕೆ?
ಒಂದೆಡೆ ಬಡವರಿಗೆ ನಿವೇಶನ ನೀಡಲು ಜಾಗವಿಲ್ಲ ಎನ್ನುವ ಈ ಸರ್ಕಾರ, ಇನ್ನೊಂದೆಡೆ ತನ್ನ ಪಕ್ಷದ ಬಲವರ್ಧನೆಗೆ ಸಾರ್ವಜನಿಕ ಆಸ್ತಿಯನ್ನು ಕಬಳಿಸುತ್ತಿದೆ. ಲೂಟಿ ಹೊಡೆಯುವುದೇ ಕಾಂಗ್ರೆಸ್‌ನ ಮೂಲ ಸಿದ್ಧಾಂತ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ಅಕ್ರಮ ಹಂಚಿಕೆಯನ್ನು ಕೂಡಲೇ ಹಿಂಪಡೆಯಬೇಕು, ಇಲ್ಲದಿದ್ದರೆ ಬಿಜೆಪಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಕಾಂಗ್ರೆಸ್‌ಗೆ 24 ನಿವೇಶನ ಹಂಚಿಕೆ, ಆಗಿದ್ದೇನು?
ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಸೇರಿದ್ದ ನಾಗರಿಕರ ಸೌಲಭ್ಯಗಳಿಗೆ ಬಳಕೆ ಆಗಬೇಕಿದ್ದ ಎರಡು ಡಜನ್ ಸಿಎ ನಿವೇಶನಗಳನ್ನು ಕಾಂಗ್ರೆಸ್‌ನ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕಚೇರಿಗಳ ಸ್ಥಾಪನೆಗೆ ಬಳಕೆ ಆಗುತ್ತಿದೆ. ಈ ಸಂಬಂಧ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸಾರ್ವಜನಿಕ ಆಸ್ತಿಗಳನ್ನು ನೀಡಲಾಗಿದೆ ಎಂದು ಪುರಸಭೆ ಆಡಳಿತ ಮತ್ತು ನಗರಾಭಿವೃದ್ಧಿ ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯಾದ್ಯಂತ 100 ಕಾಂಗ್ರೆಸ್ ಭವನಗಳನ್ನು ನಿರ್ಮಿಸುವ ಗುರಿ ಇಟ್ಟುಕೊಂಡಿದ್ದಾರೆ. ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆ ನಿವೇಶನಗಳಲ್ಲಿ ಪಕ್ಷ ಕಚೇರಿ ಸ್ಥಾಪನೆಗೆ ಶಂಕುಸ್ಥಾಪನೆ ಮಾಡಲು ಪ್ಲಾನ್ ಮಾಡಿಕೊಂಡಿದ್ದರು ಎನ್ನಲಾಗಿದೆ.
ಕಾಂಗ್ರೆಸ್ ನಡೆ ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
24 ನಿವೇಶನಗಳಲ್ಲಿ ಪುರಸಭೆ ಆಡಳಿತ ಇಲಾಖೆಯು 5 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ 12 ನಿವೇಶನಗಳನ್ನು ಹಂಚಿಕೆ ಮಾಡಿತ್ತು. ಅದಾದ ಬಳಿಕ ಡಿಸಿಎಂ ಅವರ ಅಧೀನದಲ್ಲಿರುವ ನಗರಾಭಿವೃದ್ಧಿ ಇಲಾಖೆ ವತಿಯಿಂದ 12 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಇನ್ನೂ 12 ನಿವೇಶನಗಳನ್ನು ಹಂಚಿಕೆ ಮಾಡಿದೆ. ಈ ಮೂಲಕ ಒಟ್ಟು 24 ಸೈಟುಗಳು ಕಾಂಗ್ರೆಸ್ ತನ್ನ ಸ್ವಂತಕ್ಕೆ ಬಳಸಲು ಮುಂದಾಗಿದ್ದು ಸಾರ್ವಜನಿಕವಾಗಿ ಪ್ರಶ್ನೆ ಹುಟ್ಟುಹಾಕಿದೆ. ರಾಜ್ಯಾದ್ಯಂತ ಒಟ್ಟು 40 ಕೋಟಿ ರೂ. ಅಧಿಕ ಮೌಲ್ಯದ ಅಧಿಕ ಆಸ್ತಿಗಳನ್ನು ಸ್ವಾಧೀನಪಡಿಸಿಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಬಿಜೆಪಿಯಿಂದ ಬಂದ ಟೀಕೆಗಳಿಗೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications