Manmohan Singh memorial: ಮನಮೋಹನ್ ಸಿಂಗ್‌ಗೆ ಅಗೌರವ ಆರೋಪಕ್ಕೆ ಬಿಜೆಪಿ ಕೊಟ್ಟ ಖಡಕ್ ಉತ್ತರವೇನು?
ದೆಹಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅವಕಾಶ ಕೊಡುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಇತ್ತ ಕಾಂಗ್ರೆಸ್ ಪಕ್ಷವು ಗಾಂಧಿಯೇತರ ನಾಯಕರನ್ನು ಹೀನಾಯವಾಗಿ ನಡೆಸಿಕೊಳ್ಳುತ್ತದೆ ಎಂಬುದನ್ನು ಪ್ರಣಬ್ ಮುಖರ್ಜಿ ಅವರ ಪುತ್ರಿ ಹೇಳಿಕೆ ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಬಿಜೆಪಿ ತಿರುಗೇಟು ನೀಡಿದೆ.
ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನರಾದಾಗ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ಕರೆದು, ಸಂತಾಪ ಸೂಚಕ ಸಭೆಯನ್ನು ನಡೆಸುವ ಔದಾರ್ಯವನ್ನೂ ತೋರಲಿಲ್ಲ ಎಂದು ಪ್ರಣಬ್ ಮುಖರ್ಜಿ ಅವರ ಪುತ್ರಿಯೇ ಹೇಳಿದ್ದಾರೆ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಂದ ಹಿಡಿದು, ಪ್ರಣಬ್ ಮುಖರ್ಜಿ ತನಕ ಗಾಂಧಿಯೇತರ ನಾಯಕರನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಬಿಜೆಪಿ ಆರೋಪಿಸಿದೆ.

ದೇಶವನ್ನು ಒಗ್ಗೂಡಿಸಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಪ್ರಧಾನಿ ಹುದ್ದೆಗೆ ಸಮರ್ಥರಾಗಿದ್ದರೂ ಅವರನ್ನು ಪ್ರಧಾನಿಯನ್ನಾಗಿ ಮಾಡಲೇ ಇಲ್ಲ. ಅವರನ್ನು ಇತಿಹಾಸದ ಪುಟಗಳಲ್ಲಿ ಸ್ಮರಿಸುವ ಕೆಲಸವನ್ನೂ ಮಾಡಲಿಲ್ಲ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಹೀನಾಯವಾಗಿ ಸೋಲಿಸಿತು. ಮರಣದ ನಂತರ ದೆಹಲಿಯಲ್ಲಿ ಅಂತ್ಯಸಂಸ್ಕಾರಕ್ಕೂ ಭೂಮಿ ನೀಡಲಿಲ್ಲ ಎಂದು ತಿವಿದಿದೆ.
ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಪಾರ್ಥಿವ ಶರೀರವನ್ನು ದೆಹಲಿಯ ಕಾಂಗ್ರೆಸ್ ಕಚೇರಿಯ ಒಳಗೂ ಬಿಡಲಿಲ್ಲ. ಗೇಟಿನ ಹೊರಭಾಗದಲ್ಲಿ ಪಾರ್ಥಿವ ಶರೀರವನ್ನು ಇಟ್ಟು ಅಂತಿಮ ನಮನ ಸಲ್ಲಿಸುವ ಹಾಗೆ ಮಾಡಲಾಯಿತು. ಆದರೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಿದ್ಧಾಂತವನ್ನು ಅನುಷ್ಠಾನಕ್ಕೆ ತಂದಿದ್ದು ಬಿಜೆಪಿ. ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಪಂಚ ತೀರ್ಥಕ್ಷೇತ್ರವನ್ನು ಮೋದಿ ಸರ್ಕಾರ ಅಭಿವೃದ್ಧಿ ಪಡಿಸಿತು ಎಂದು ಹೇಳಿದೆ.
ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ಅವರ ಅತ್ಯಂತ ಎತ್ತರದ ಏಕತಾ ಪ್ರತಿಮೆ ಸ್ಥಾಪಿಸಿ ಗೌರವಿಸಿತು. ದೆಹಲಿಯಲ್ಲಿ ಪಿ.ವಿ. ನರಸಿಂಹ ರಾವ್ ಅವರ ಸ್ಮಾರಕ ನಿರ್ಮಾಣ ಮಾಡಲು ಮೋದಿಯವರ ಸರ್ಕಾರವೇ ಬರಬೇಕಾಯಿತು. ಪ್ರಧಾನಿ ಮೋದಿ ಅವರ ಸರ್ಕಾರವು ಅತ್ಯಂತ ಗೌರವದ ವಿದಾಯವನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನೀಡಿದೆ. ಪ್ರಧಾನಿ ಸಹಿತ ಸಂಪುಟದ ಸಚಿವರು ಖುದ್ದಾಗಿ ಉಪಸ್ಥಿತರಿದ್ದು ಗೌರವವನ್ನು ಕೇಂದ್ರ ಸರ್ಕಾರ ನೀಡಿದೆ. ಪಕ್ಷ ಯಾವುದೇ ಇರಲಿ, ಮರಣಾಂತಾನಿ ವೈರಾಣಿ.. ಮರಣದ ನಂತರ ದ್ವೇಷ ಸಲ್ಲ ಎಂಬುದನ್ನು ಮೋದಿ ಸರ್ಕಾರ ಮತ್ತೊಮ್ಮೆ ನಿರೂಪಿಸಿದೆ ಎಂದು ಸಮರ್ಥಿಸಿಕೊಂಡಿದೆ.

ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗ ಮಂಜೂರು ಮಾಡುವಂತೆ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾಯರು ಅಗಲಿದಾಗ ಅವರಿಗೆ ಕಾಂಗ್ರೆಸ್ ಪಕ್ಷ ಸ್ಮಾರಕ ನೀಡಲೇ ಇಲ್ಲ. 2004-14ರಿಂದ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿತ್ತು. ಆದರೆ ಭಾರತವನ್ನು ದಕ್ಷವಾಗಿ ಮುನ್ನಡೆಸಿದ್ದ ನರಸಿಂಹರಾವ್ ಅವರಿಗೆ ಸ್ಮಾರಕವನ್ನು ಕಾಂಗ್ರೆಸ್ ಮಾಡಲಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ದೂರಿದ್ದಾರೆ.
2015ರಲ್ಲಿ ನರೇಂದ್ರ ಮೋದಿ ಜಿ ನೇತೃತ್ವದ ಬಿಜೆಪಿ ಸರ್ಕಾರ ಬಂದಾಗಲೇ ಪಿ.ವಿ.ನರಸಿಂಹ ರಾಯರಿಗೆ ಸ್ಮಾರಕ ನಿರ್ಮಾಣ ಮಾಡಲು ಮೋದಿ ಸರ್ಕಾರ ಜಾಗ ನೀಡುವ ಜೊತೆಗೆ ನರಸಿಂಹ ರಾಯರಿಗೆ ಮರಣೋತ್ತರ ಭಾರತ ರತ್ನ ಘೋಷಿಸಿತು. ನರಸಿಂಹ ರಾಯರ ಪಾರ್ಥಿವ ಶರೀರವನ್ನು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಇಡಲೂ ಒಪ್ಪಿಗೆ ನೀಡಿರಲಿಲ್ಲ. ರಾಯರಿಗೆ ಕಾಂಗ್ರೆಸ್ ಪಕ್ಷ ಎಷ್ಟರ ಮಟ್ಟಿಗೆ ಅಗೌರವ ತೋರಿತೆಂದರೆ, ಅವರ ಅಂತಿಮ ಸಂಸ್ಕಾರವನ್ನು ನವದೆಹಲಿಯಲ್ಲಿ ಮಾಡದೆ ಹೈದರಾಬಾದ್‌ನಲ್ಲಿ ಏರ್ಪಾಡು ಮಾಡಿಕೊಳ್ಳುವಂತೆ ಅವರ ಕುಟುಂಬಕ್ಕೆ ಸೂಚಿಸಿತು ಎಂದು ತಿರುಗೇಟು ನೀಡಿದ್ದಾರೆ.
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications