Get Updates
Get notified of breaking news, exclusive insights, and must-see stories!

ಕರ್ನಾಟಕ, ಹಿಮಾಚಲದಲ್ಲಿ ಗೆದ್ದ ಮೇಲೂ ಕಾಂಗ್ರೆಸ್‌ಗೆ ಇವಿಎಂ ಮೇಲೆ ಇನ್ನೂ ಅನುಮಾನ ಇದೆಯಂತೆ

2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ವಿಪಕ್ಷ ಕಾಂಗ್ರೆಸ್‌ಗೆ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ (ಇವಿಎಂ) ಮೇಲೆ ಅನುಮಾನ ವ್ಯಕ್ತಪಡಿಸುತ್ತಲೇ ಇದೆ. ವಾಸ್ತವವಾಗಿ ಯುಪಿಎ ಸರ್ಕಾರದ ಅವಧಿಯಲ್ಲೇ ಇವಿಎಂ ಪರಿಚಯಿಸಲಾಗಿತ್ತು ಎಂಬುದು ಗಮನಾರ್ಹ ಸಂಗತಿ.

ಆ ಬಳಿಕ ದೇಶದ ಹಲವು ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಕಂಡಿತು. 2019ರ ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ನೆಲಕಚ್ಚಿತು. ಇದು ಕಾಂಗ್ರೆಸ್‌ಗೆ ಇವಿಎಂ ಮೇಲಿನ ಅನುಮಾನ ಮತ್ತಷ್ಟು ಹೆಚ್ಚಾಯಿತು. ಹಲವು ಬಾರಿ ಇದರ ಬಗ್ಗೆ ಕಾಂಗ್ರೆಸ್ ನಾಯಕರು ಪ್ರಸ್ತಾಪಿಸಿದ್ದರೂ, ಯಾವೊಬ್ಬ ನಾಯಕರೂ ಇವಿಎಂ ಹ್ಯಾಕ್ ಅನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ.

Congress leader Pawan Khera alleged errors in EVM Machines

ರಾಜಸ್ಥಾನ, ಛತ್ತೀಸ್‌ಗಡ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಮರಳಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ಗೆ ಇನ್ನೂ ಇವಿಎಂ ಮೇಲಿನ ತನ್ನ ಅನುಮಾನವನ್ನು ಕೈಬಿಟ್ಟಿಲ್ಲ.

ನಮ್ಮ ಪಕ್ಷ ಗೆಲುವು ಸಾಧಿಸಿದ್ದರೂ ವಿದ್ಯುನ್ಮಾನ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ (ಇವಿಎಂ) ಸಂಬಂಧಿಸಿದ ಕಾಂಗ್ರೆಸ್‌ನ ಪ್ರಶ್ನೆಗಳು ಮುಂದುವರಿಯುತ್ತವೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಮಂಗಳವಾರ ಹೇಳಿದ್ದಾರೆ.

Congress leader Pawan Khera alleged errors in EVM Machines

ಇವಿಎಂಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಆತಂಕ, ಫಲಿತಾಂಶದ ಜೊತೆ ವಿವಿ ಪ್ಯಾಟ್‌ಗಳ ತಾಳೆ ಮಾಡುವುದು, ಕಳೆದುಹೋದ ಯಂತ್ರಗಳು ಮತ್ತು ದೋಷಯುಕ್ತ ಯಂತ್ರಗಳು ಮತ್ತು ಇತ್ತೀಚೆಗೆ ಬೆಳಕಿಗೆ ಬಂದ ದೋಷಯುಕ್ತ ಯಂತ್ರಗಳಲ್ಲಿ ಎಸ್‌ಒಪಿಗಳನ್ನು ಅನುಸರಿಸದಿರುವುದು ನಮ್ಮ ಪ್ರಶ್ನೆಗಳಾಗಿವೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷ ಕರ್ನಾಟಕ ಮತ್ತು ಹಿಮಾಚಲ ಪ್ರದೇಶದಲ್ಲಿ ಗೆದ್ದಿದೆ ಎಂದ ಮಾತ್ರಕ್ಕೆ ಇವಿಎಂಗಳ ಮೇಲಿನ ನಮ್ಮ ಪ್ರಶ್ನೆಗಳು ನಿಲ್ಲುವುದಿಲ್ಲ ಎಂದು ಪವನ್ ಖೇರಾ ಅವರು ಮಂಗಳವಾರದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Congress leader Pawan Khera alleged errors in EVM Machines

ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಮಾತನಾಡಿದ ಪವನ್ ಖೇರಾ, "ಶೀಘ್ರದಲ್ಲೇ ಈ ಬಗ್ಗೆ ಅಧಿಕೃತವಾಗಿ ಘೋಷಣೆಯಾಗಲಿದೆ. ಚುನಾವನೆಯಲ್ಲಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದ್ದು, ಹೈಕಮಾಂಡ್ ನಾಯಕರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ," ಎಂದು ಪವನ್ ಖೇರಾ ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಬಿಜೆಪಿ ವಿರುದ್ಧವೂ ಕಿಡಿಕಾರಿದ ಪವನ್ ಖೇರಾ, ""ಪ್ರತಿ ರಾಜ್ಯದಲ್ಲೂ ವಿರೋಧ ಪಕ್ಷದ ನಾಯಕನ ಸ್ಥಾನವೂ ಮಹತ್ವದ್ದಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಯಾವಾಗ ವಿಪಕ್ಷ ನಾಯಕನನ್ನು ನೇಮಿಸುತ್ತದೆ,'' ಎಂದು ಪ್ರಶ್ನಿಸಿದ್ದಾರೆ.

"ಮುಖ್ಯಮಂತ್ರಿ ನೇಮಕ ಅಷ್ಟು ಸುಲಭದ ಮಾತಲ್ಲ. ಇಲ್ಲಿ ಎಲ್ಲರ ಅಭಿಪ್ರಾಯಕ್ಕೂ ಮನ್ನಣೆ ನೀಡಬೇಕಾಗುತ್ತದೆ. ಪ್ರತಿ ಶಾಸಕನ ಮತ್ತು ನಾಯಕರ ಅಭಿಪ್ರಾಯಕ್ಕೆ ಬೆಲೆ ನೀಡಿ ನಿರ್ಧರಿಸಬೇಕೆಂದು," ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದರು.

ಮುಂಬರುವ ಲೋಕಸಭೆ ಚುನಾವಣೆ ವೇಳೆಗೆ ತೆಲಂಗಾಣದಲ್ಲಿ ಬಿಆರ್‌ಎಸ್ ಪಕ್ಷದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಬಹುದೇ ಎಂಬ ಪ್ರಶ್ನೆಗೆ, "ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿ ಪಕ್ಷವನ್ನು ಎದುರಿಸುವ ಮತ್ತು ಪಂಜಾಬ್‌ನಲ್ಲಿ ಎಎಪಿ ಜೊತೆ ಹೋರಾಡುವ ಶಕ್ತಿ ಕಾಂಗ್ರೆಸ್‌ಗೆ ಇರುವ ಕಾರಣ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲವೆಂದು," ಪವನ್ ಖೇರಾ ಸ್ಪಷ್ಟಪಡಿಸಿದರು.

ರಾಜಸ್ಥಾನದಲ್ಲಿ ಬಂಡಾಯ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಪವನ್ ಖೇರಾ, ಆ ರಾಜ್ಯದ ಪಕ್ಷದ ನಾಯಕರ ಅಭಿಪ್ರಾಯಗಳನ್ನು ರಾಜಸ್ಥಾನ ಉಸ್ತುವಾರಿ ಪಡೆದಿದ್ದು, ಅವರ ವರದಿಯ ನಂತರ ಪಕ್ಷ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಉತ್ತರಿಸಿದರು.

ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಒಬ್ಬರಿಗಿಂತ ಹೆಚ್ಚು ಸಮರ್ಥ ನಾಯಕರಿದ್ದಾರೆ. ಆದರೆ, ಒಬ್ಬರೇ ಮುಖ್ಯಮಂತ್ರಿಯಾಗಬೇಕಾಗುತ್ತದೆ. ಉಳಿದ ನಾಯಕರಿಗೂ ಭರವಸೆ ಮತ್ತು ಮಹತ್ವಾಕಾಂಕ್ಷೆಗಳಿರುತ್ತವೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+