ಕುಮಾರಸ್ವಾಮಿ ಕರ್ನಾಟಕ ಬಿಜೆಪಿ ಅಧ್ಯಕ್ಷರು? ಕಾಂಗ್ರೆಸ್ ಹೇಳಿದ್ದೇನು?
ಕರ್ನಾಟಕದಲ್ಲಿ ರಾಜಕೀಯ ಸಂಚಲನ ಸೃಷ್ಟಿಯಾಗಿದ್ದು, ಬಿಜೆಪಿ & ಜೆಡಿಎಸ್ ಮೈತ್ರಿ ಈಗ ಕಿಚ್ಚು ಹೊತ್ತಿಸಿದೆ. ಅದರಲ್ಲೂ ಬಂಟ್ವಾಳದ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರ ಭಾಷಣ, ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಹೊಸ ಅಸ್ತ್ರ ನೀಡಿದಂತಾಗಿದೆ. ಇದೇ ವಿಚಾರವನ್ನ ಮುಂದಿಟ್ಟುಕೊಂಡು ಈಗ ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಹೇಳಿದ್ದೇನು ಗೊತ್ತಾ?
ಅಂದಹಾಗೆ ಬಂಟ್ವಾಳದ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ನಡೆದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಇದೇ ಕ್ರೀಡೋತ್ಸವದಲ್ಲಿ ಭಾಷಣ ಮಾಡಿದ ಕುಮಾರಸ್ವಾಮಿ ಕೊನೆಗೆ ಜೈ ಶ್ರೀರಾಮ್ ಅಂತಾ ಘೋಷಣೆ ಮೊಳಗಿಸಿದ್ದಾರೆ. ಕಾರ್ಯಕ್ರಮ ನನ್ನ ಜೀವನದ ಅವಿಸ್ಮರಣೀಯ ಕ್ಷಣ. ಇಲ್ಲಿ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಕೊಡಲಾಗುತ್ತಿದೆ. ಕಾರ್ಯಕ್ರಮ ಅಷ್ಟು ಸುಲಭವಾಗಿ ಮಾಡಲು ಸಾಧ್ಯವಿಲ್ಲ. ಗುರುಕುಲ ಪರಂಪರೆ & ಸಂಸ್ಕೃತಿಗಳನ್ನು ನೀಡಲಾಗುತ್ತಿದೆ. ಉತ್ತಮ ಶಿಸ್ತಿನ ಬದಕು ಕಲಿಸಲಾಗುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದರು. ಇದೇ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಈಗ ಹೇಳಿದ್ದೇನು ಗೊತ್ತಾ?

ಕುಮಾರಸ್ವಾಮಿ ಕರ್ನಾಟಕ ಬಿಜೆಪಿ ಅಧ್ಯಕ್ಷರು?
ಹೌದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಮಾಡಿರುವ ಆರೋಪ ಏನು ಅಂದ್ರೆ, 'ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು RSS ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ, ಅವರು ಕೋಮುವಾದದ ಕಡೆಗೆ ಹೋಗುತ್ತಿರುವ ಸ್ಪೀಡ್ ನೋಡಿದರೆ ಕೆಲವೇ ದಿನಗಳಲ್ಲಿ ಬಿಜೆಪಿಗರನ್ನೇ ಓವರ್ ಟೇಕ್ ಮಾಡಿ ಬಿಜೆಪಿಯ ಅಧ್ಯಕ್ಷರಾದರೂ ಅಚ್ಚರಿ ಇಲ್ಲ! ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ, ಬಿಜೆಪಿ ಹೈಕಮಾಂಡ್ ಕುಮಾರಸ್ವಾಮಿಯವರನ್ನು ರಾಜ್ಯ ಬಿಜೆಪಿಗೆ ಪ್ರತಿಷ್ಠಾಪಿಸಿದರೂ ಅತಿಶಯೋಕ್ತಿ ಇಲ್ಲ. ಎಚ್ಚರಾಗಿ @RAshokaBJP @BYVijayendra!!' ಎಂದಿದೆ ಕಾಂಗ್ರೆಸ್.
ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು RSS ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ, ಅವರು ಕೋಮುವಾದದ ಕಡೆಗೆ ಹೋಗುತ್ತಿರುವ ಸ್ಪೀಡ್ ನೋಡಿದರೆ ಕೆಲವೇ ದಿನಗಳಲ್ಲಿ ಬಿಜೆಪಿಗರನ್ನೇ ಓವರ್ ಟೇಕ್ ಮಾಡಿ ಬಿಜೆಪಿಯ ಅಧ್ಯಕ್ಷರಾದರೂ ಅಚ್ಚರಿ ಇಲ್ಲ!
— Karnataka Congress (@INCKarnataka) December 11, 2023
ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ, ಬಿಜೆಪಿ ಹೈಕಮಾಂಡ್ ಕುಮಾರಸ್ವಾಮಿಯವರನ್ನು…
ಒಟ್ನಲ್ಲಿ ಕುಮಾರಸ್ವಾಮಿ ಅವರು ಹಾಗೂ ಕರ್ನಾಟಕ ಕಾಂಗ್ರೆಸ್ ನಡುವೆ ಮತ್ತೆ ಅಖಾಡವು ಕೆಂಪಾಗಿದೆ. ಅದರಲ್ಲೂ ಲೋಕಸಭೆ ಚುನಾವಣೆಗೆ ಮೊದಲು ಬಿಜೆಪಿ & ಜೆಡಿಎಸ್ ನಡುವೆ ಮೈತ್ರಿ ಮೂಡಿರುವ ಸಮಯದಲ್ಲೇ, ಕಾಂಗ್ರೆಸ್ ಹೊಸ ಅಸ್ತ್ರ ಪ್ರಯೋಗ ಮಾಡಿದೆ. ಮಾಜಿ ಸಿಎಂ ಎಚ್‌ಡಿಕೆ ನೀಡಿರುವ ಹೇಳಿಕೆಯನ್ನೇ ಕಾಂಗ್ರೆಸ್ ಟಾರ್ಗೆಟ್ ಮಾಡಿ ಇದೀಗ ಎಚ್‌ಡಿಕೆ ವಿರುದ್ಧ ವಾಗ್ದಾಳಿ ನಡೆಸಿದೆ.

ಆದರೆ ಇದಕ್ಕೆಲ್ಲಾ ಮಾಜಿ ಸಿಎಂ & ಹಾಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಯಾವ ರೀತಿ ಪ್ರತಿಕ್ರಿಯೆ ನೀಡ್ತಾರೆ? ಅದಕ್ಕೆ ಕಾಂಗ್ರೆಸ್ ನಾಯಕರು ಏನ್ ಹೇಳಬಹುದು? ಅನ್ನೋದನ್ನ ಕಾದು ನೋಡಬೇಕಿದೆ. ಇದೆಲ್ಲಾ ಏನೇ ಇರಲಿ ಇನ್ನೂ ಕೆಲವು ತಿಂಗಳ ಕಾಲ ಈ ಕಿತ್ತಾಟ ನಿರಂತರ ಅನ್ನೋದು ಮಾತ್ರ ಪಕ್ಕಾ.












Click it and Unblock the Notifications