ಮಾಜಿ ಸಿಎಂ ದಿ. ದೇವರಾಜ ಅರಸು ಜನ್ಮದಿನಕ್ಕೆ ಅನುಮತಿ ನಿರಾಕರಿಸಿದ ಬೊಮ್ಮಾಯಿ ಸರ್ಕಾರ!
ಬೆಂಗಳೂರು, ಆ. 24: ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿಯೂ ಕೊರೊನಾ ಮೂರನೇ ಅಲೆ ಆತಂಕ ಕಾಡುತ್ತಿದೆ. ಕಟ್ಟುನಿಟ್ಟಿನ ಮಾರ್ಗಸೂಚಿಯೊಂದಿಗೆ ಶಾಲಾ ಕಾಲೇಜುಗಳನ್ನು ಆರಂಭಿಸಲಾಗಿದೆ. ಜೊತೆಗೆ ಕೊರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಆದರೆ ಕೇಂದ್ರ ಸರ್ಕಾರದ ಮಂತ್ರಿಗಳು ಮಾತ್ರ ಜನಾಶೀರ್ವಾದ ಯಾತ್ರೆಯಲ್ಲಿ ತೊಡಗಿದ್ದಾರೆ. ಕೇಂದ್ರದ ನಾಲ್ಕೂ ಸಚಿವರು ಪ್ರತಿದನವೂ ಜನರನ್ನು ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ. ಆ ಮೂಲಕ 2024ರ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಮಾರ್ಗಸೂಚಿ ಜಾರಿಯಲ್ಲಿದೆ, ಆದರೂ ಕೇಂದ್ರದ ಮಂತ್ರಿಗಳು ಜನಾಶೀರ್ವಾದ ಯಾತ್ರೆ ಮೂಲಕ ಜನರನ್ನು ಸೇರಿತ್ತಿರುವುದು ವಿಪಕ್ಷಗಳ ನಾಯಕರು ಗರಂ ಆಗಲು ಕಾರಣವಾಗಿದೆ.
ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಜನ್ಮದಿನ ಆಚರಣೆಗೆ ರಾಜ್ಯ ಬಿಜೆಪಿ ಸರ್ಕಾರ ಅನುಮತಿ ನಿರಾಕರಿಸಿರುವ ಗಂಭೀರ ಆರೋಪ ಎದುರಾಗಿದೆ!

ಸಾವಿನ ದವಡೆಗೆ ತಳ್ಳಿ ಸ್ವರ್ಗ ಎನ್ನುತ್ತಿರುವ ಬಿಜೆಪಿ
'ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡುತ್ತಿದ್ದು, ಅವರು ಜನಾಶೀರ್ವಾದ ಯಾತ್ರೆ ಬದಲು ಜನರ ಕ್ಷಮೆ ಕೋರುವ ಯಾತ್ರೆ ನಡೆಸಬೇಕು' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕಿಡಿಕಾರಿದ್ದಾರೆ.
'ಕೋವಿಡ್ 2ನೇ ಅಲೆಯಲ್ಲಿ ಲಕ್ಷಾಂತರ ಜನರ ಸಾವಿಗೆ ಕಾರಣರಾಗಿದ್ದಕ್ಕೆ, ಸ್ವರ್ಗ ತೋರಿಸುತ್ತೇವೆ ಎಂದು ಅಧಿಕಾರಕ್ಕೆ ಬಂದು ಜನರಿಗೆ ನರಕ ತೋರಿಸುತ್ತಿರುವುದಕ್ಕೆ, ಕೇಂದ್ರದ ಮಲತಾಯಿ ಧೋರಣೆ, ರಾಜ್ಯಕ್ಕೆ ಬರಬೇಕಾದ ಅನುದಾನ ತರಲು ವಿಫಲರಾಗಿರುವುದಕ್ಕೆ, 2019ರಿಂದ ಆಗುತ್ತಿರುವ ನೆರೆಗೆ ಪರಿಹಾರ ನೀಡದಿರುವುದಕ್ಕೆ, ಜಿಎಸ್ಟಿ ಪಾಲು 13 ಸಾವಿರ ಕೋಟಿ ನೀಡದಿರುವುದಕ್ಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಬಿಜೆಪಿ ನಾಯಕರು ರಾಜ್ಯದ ಜನರ ಮುಂದೆ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಜನ ಬಿಜೆಪಿ ವಿರುದ್ಧ ಆಕ್ರೋಶದ ಯಾತ್ರೆ ನಡೆಸುತ್ತಾರೆ' ಎಂದು ಬೆಂಗಳೂರಿನಲ್ಲಿ ಎಚ್ಚರಿಸಿದ್ದಾರೆ.

ಮೂರನೇ ಅಲೆ ತಡೆಯಲು ಯಾವ ಕ್ರಮ?
'2ನೇ ಅಲೆ ಎಚ್ಚರಿಕೆ ನೀಡಿದ ನಂತರವೂ ಬಿಜೆಪಿ ಸರ್ಕಾರ ಉಪಚುನಾವಣೆ, ನಾಯಕತ್ವ ಬದಲಾವಣೆ ವಿಚಾರವಾಗಿ ಮೈಮರೆಯಿತು. ಪರಿಣಾಮ ಲಕ್ಷಾಂತರ ಜನ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಸರ್ಕಾರವೇ ಉತ್ತರಿಸಬೇಕು. ಮೂರನೇ ಅಲೆ ತಡೆಯಲು ಯಾವ ಕ್ರಮ ಕೈಗೊಂಡಿದ್ದಾರೆ ಯಾರಿಗೂ ಗೊತ್ತಿಲ್ಲ' ಎಂದು ಸಲೀಂ ಅಹ್ಮದ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ, ಆದರೆ ಇಲ್ಲಿ ಹುಲಿಗಳಂತೆ ಮಾತನಾಡುವ ಸಂಸದರು ಮೋದಿ ಮುಂದೆ ಇಲಿಗಳಾಗುತ್ತಾರೆ. ರಾಜ್ಯಕ್ಕೆ ಬರಬೇಕಾದ ಪಾಲು ತರಲು ಹೋರಾಟ ಮಾಡುತ್ತಿಲ್ಲ. ಹೀಗಿರುವಾಗ ಜನ ಇವರಿಗೆ ಯಾಕೆ ಆಶೀರ್ವಾದ ಮಾಡುತ್ತಾರಾ?' ಎಂದು ಸಲೀಂ ಅಹ್ಮದ್ ಪ್ರಶ್ನಿಸಿದ್ದಾರೆ.

ದಿ. ಅರಸು ಹುಟ್ಟುಹಬ್ಬಕ್ಕೆ ಅನುಮತಿ ನಿರಾಕರಣೆ
'ಈ ದೇಶದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲು ಅನುಮತಿ ನಿರಾಕರಿಸಿ ಮುಖ್ಯ ಕಾರ್ಯದರ್ಶಿ ಪತ್ರ ಬರೆಯುತ್ತಾರೆ. ಆದರೆ ಸಾವಿರಾರು ಜನ ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡಲು ಅನುಮತಿ ನೀಡುತ್ತಾರೆ. ಕೋವಿಡ್ ಮೂರನೇ ಅಲೆ ಬಂದರೆ, ಅದರಿಂದ ಅನಾಹುತ ಆದರೆ ಅದಕ್ಕೆಲ್ಲ ಈ ನಾಲ್ಕು ಜನ ಕೇಂದ್ರ ಸಚಿವರೇ ಹೊಣೆಯಾಗುತ್ತಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ.
Recommended Video

ಬಿಜೆಪಿ ನಾಯಕರಿಂದ ಉತ್ತರದ ಸಂಸ್ಕೃತಿ ರಾಜ್ಯಕ್ಕೆ!
'ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಗೃಹ ಸಚಿವರ ಹೆಗಲ ಮೇಲಿದೆ. ಬಿಜೆಪಿ ಮಾಜಿ ಸಚಿವರು ನಾಡ ಬಂದೂಕಿನಿಂದ ಗುಂಡು ಹಾರಿಸಲು ಅವಕಾಶ ಕೊಟ್ಟಿದ್ದು ಯಾರು? ಅದು ಎಲ್ಲಿಂದ ಬಂತು? ಇದನ್ನು ಗೃಹ ಸಚಿವರು ಸಮರ್ಥನೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ಸಮರ್ಥನೆಗೆ ಮುಂದಾಗಿ, ಬಿಹಾರ ಹಾಗೂ ಉತ್ತರ ಪ್ರದೇಶದ ಸಂಸ್ಕೃತಿಯನ್ನು ತರಲು ಮುಂದಾಗಬಾರದು. ನಮ್ಮದು ಶಾಂತಿ ಪ್ರಿಯ ರಾಜ್ಯ. ಇದನ್ನು ನೋಡಿ ಬೇರೆಯವರು ಕಲಿಯ ಬಾರದು. ಮೊದಲ ಬಾರಿಗೆ ಸಚಿವರಾಗಿರುವ ಗೃಹಮಂತ್ರಿಗಳು ಕಾನೂನು ಪುಸ್ತಕ ಓದಬೇಕು' ಎಂದು ಸಲೀಂ ಅಹ್ಮದ್ ಟೀಕಿಸಿದ್ದಾರೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್










Click it and Unblock the Notifications