Modi In Karnataka: ಮೋದಿ ಸಮಾವೇಶಕ್ಕೆ ಬಂದ ಜನರಿಗೆ ಹಣ ಹಂಚಿಕೆ : ಕುಡಚಿ ಶಾಸಕನ ವಿರುದ್ಧ ಕಾಂಗ್ರೆಸ್ ಆರೋಪ
ಪ್ರಧಾನಿ ನರೇಂದ್ರ ಮೋದಿ ಸಮಾವೇಶಕ್ಕೆ ಜನರನ್ನು ಕರೆತರಲು ಬಿಜೆಪಿ ಶಾಸಕ ಹಣ ಹಂಚಿಕೆ ಮಾಡಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ. ಪ್ರಧಾನಿ ಮೋದಿ ಶನಿವಾರ ಬೆಳಗಾವಿ ಜಿಲ್ಲೆಯ ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.
ಪ್ರಧಾನಿ ಮೋದಿ ರ್‍ಯಾಲಿಗೆ ಅಪಾರ ಸಂಖ್ಯೆಯ ಜನ ಸೇರಿದ್ದರು. ಈಗ ಈ ರ್‍ಯಾಲಿಗೆ ಜನರನ್ನು ಕರೆತರಲು ಕುಡಚಿ ಶಾಸಕ ಪಿ. ರಾಜೀವ್ ಹಣ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕರ್ನಾಟಕ ಕಾಂಗ್ರೆಸ್ ಈ ಟ್ವೀಟ್ ಮಾಡಿದ್ದು, ಬಿಜೆಪಿ ಕಾರ್ಯಕರ್ತರಿಗೆ ಹಣ ಹಂಚುತ್ತಿರುವ ವಿಡಿಯೋವನ್ನು ಹಂಚಿಕೊಂಡಿದೆ.

ಈ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, "ನಿರಂತರವಾಗಿ ಖಾಲಿ ಕುರ್ಚಿಗಳಿಂದ ಮುಜುಗರ ಅನುಭವಿಸಿದ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಹಣ ಹಂಚಿಕೆ ಮಾಡಿದ್ದಾರೆ, ಕುಡಚಿ ಶಾಸಕ ಪಿ. ರಾಜೀವ್ ಬೆಂಬಲಿಗರು ಬಂದ ಜನರಿಗೆ ಹಣ ಹಂಚಿಕೆ ಮಾಡುತ್ತಿರುವುದೇಕೆ?" ಎಂದು ಬಿಜೆಪಿಯನ್ನು ಪ್ರಶ್ನೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿಯನ್ನು ನೋಡಲೂ ಈಗ ಜನ ಬರುತ್ತಿಲ್ಲವೇ? ಮೋದಿ ಮುಖವೂ ಈಗ ಸವಕಲು ನಾಣ್ಯವಾಗಿದೆ ಎನ್ನುವುದು ಮನವರಿಕೆಯಾಯ್ತೆ? ಎಂದು ಪ್ರಶ್ನೆ ಮಾಡಿರುವ ಕಾಂಗ್ರೆಸ್, ಚುನಾವಣಾಧಿಕಾರಿಗಳು ಏಕೆ ಕಣ್ಮುಚ್ಚಿ ಕುಳಿತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಬೆಂಗಳೂರು ರೋಡ್ ಶೋ ಬಗ್ಗೆಯೂ ಟೀಕೆ
ಬೀದರ್ ಮತ್ತು ಬೆಳಗಾವಿಯಲ್ಲಿ ರ್‍ಯಾಲಿಯ ನಂತರ ಶನಿವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಿದ್ದರು. ಮಾಗಡಿ ರಸ್ತೆಯ ನೈಸ್ ರೋಡ್ ಜಂಕ್ಷನ್‌ನಿಂದ ಸುಮನಹಳ್ಳಿ ಜಂಕ್ಷನ್‌ವರೆಗೆ 5.3 ಕಿಲೋ ಮೀಟರ್ ರೋಡ್ ಶೋ ನಡೆಸಿದರು.
ಮೋದಿ ರೋಡ್ ಶೋನಿಂದ ಸುಮನಹಳ್ಳಿ, ಮಾಗಡಿ ರಸ್ತೆ ಭಾಗದಲ್ಲಿ ಸಾಕಷ್ಟು ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಸುಂಕದಕಟ್ಟೆ ಭಾಗದಲ್ಲಿನ ಕಲ್ಯಾಣ ಮಂಟಗಳಲ್ಲಿ ಮದುವೆಗಳ ಮೇಲೆ ಕೂಡ ಪರಿಣಾಮ ಉಂಟುಮಾಡಿತ್ತು. ಬೆಳಿಗ್ಗೆಯಿಂದಲೇ ಹಲವು ರಸ್ತೆಗಳಲ್ಲಿ ಓಡಾಟಕ್ಕೆ ನಿರ್ಬಂಧ ವಿಧಿಸಿದ್ದರಿಂದ ಮದುವೆಯ ಹೆಣ್ಣು ಮತ್ತು ಮಧುಮಗನಿಗೂ ಕಲ್ಯಾಣ ಮಂಟಪಕ್ಕೆ ಹೋಗಲು ಪರದಾಡಿದರು. ಬೆಳಿಗ್ಗೆಯಿಂದ ರಾತ್ರಿವರೆಗೂ ಟ್ರಾಫಿಕ್ ಸಮಸ್ಯೆಯಿಂದ ಜನ ಹೈರಾಣಾಗಿದ್ದರು. ಇನ್ನೂ ಕೆಲವರು ರಾಜಕಾರಣಿಗಳ ರೋಡ್ ಶೋ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತಪಡಿಸಿದರು.
ಮಾಗಡಿ ರಸ್ತೆಯ ನೈಸ್ ರೋಡ್ ಜಂಕ್ಷನ್‌ನಿಂದ ಸುಮನಹಳ್ಳಿ ಜಂಕ್ಷನ್‌ವರೆಗೆ 5.3 ಕಿಲೀ ಮೀಟರ್ ರೋಡ್ ಶೋ ನಡೆಸಲಿದ್ದಾರೆ. ಮೋದಿ ರೋಡ್ ಶೋ ಹಿನ್ನಲೆಯಲ್ಲಿ ಪೊಲೀಸರು ಭಾರಿ ಬಂದೋಬಸ್ತ್ ಮಾಡಿದ್ದಾರೆ. ಹಲವು ರಸ್ತೆಗಳನ್ನು ಬಂದ್ ಮಾಡಿರುವುದರಿಂದ ವಾಹನ ಸವಾರರು ಪರದಾಡುವಂತಾಯಿತು.












Click it and Unblock the Notifications