ಮಹದೇವಪುರದಲ್ಲಿ ಲಿಂಬಾವಳಿ ಹ್ಯಾಟ್ರಿಕ್ ಬಾರಿಸುವರೇ?

Recommended Video

      ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಟಿಕೆಟ್ ಯಾರಿಗೆ? | Oneindia Kannada

      ಬೆಂಗಳೂರು, ಫೆಬ್ರವರಿ 20 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹೆಚ್ಚು ತೆರಿಗೆ ಪಾವತಿ ಮಾಡುವ ಕ್ಷೇತ್ರ ಮಹದೇವಪುರ. ಬಿಜೆಪಿಯ ಅರವಿಂದ ಲಿಂಬಾವಳಿ ಅವರು ಕ್ಷೇತ್ರದ ಹಾಲಿ ಶಾಸಕರು. ಈ ಬಾರಿಯೂ ಗೆದ್ದು ಹ್ಯಾಟ್ರಿಕ್ ಬಾರಿಸುವ ಉತ್ಸಾಹದಲ್ಲಿದ್ದಾರೆ.

      ಬೆಂಗಳೂರು ನಗರದ ಹೆಸರನ್ನು ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಮಾಡಿರುವ ಬಹುತೇಕ ಐಟಿ-ಬಿಟಿ ಕಂಪನಿಗಳು ಮಹದೇವಪುರ ಕ್ಷೇತ್ರದ ವ್ಯಾಪ್ತಿಯಲ್ಲಿವೆ. ಎರಡು ಬಾರಿ ಅರವಿಂದ ಲಿಂಬಾವಳಿ ಅವರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

      2013 ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ಸಿ.ಶ್ರೀನಿವಾಸ್ ಸುಮಾರು 4 ಸಾವಿರ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಈ ಬಾರಿ ಗೆಲುವು ಸಾಧಿಸಲೇಬೇಕು ಎಂಬ ಗುರಿಯೊಂದಿಗೆ ಅವರು ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.

      ಕಳೆದ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎನ್.ಗೋವರ್ಧನ್ 5,604 ಮತಗಳನ್ನು ಮಾತ್ರ ಪಡೆದಿದ್ದರು. ಈ ಬಾರಿ ನಲ್ಲೂರಹಳ್ಳಿ ನಾಗೇಶ್, ಬೆಳತೂರು ನಾಗೇಶ್, ದೊಡ್ಡ ಯಲ್ಲಪ್ಪ ಅವರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಯಾರಿಗೆ ಟಿಕೆಟ್ ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ...

      ಹ್ಯಾಟ್ರಿಕ್ ಬಾರಿಸಲಿದ್ದಾರೆ ಅರವಿಂದ ಲಿಂಬಾವಳಿ?

      ಹ್ಯಾಟ್ರಿಕ್ ಬಾರಿಸಲಿದ್ದಾರೆ ಅರವಿಂದ ಲಿಂಬಾವಳಿ?

      ಎರಡು ಬಾರಿ ಕ್ಷೇತ್ರದಲ್ಲಿ ಗೆದ್ದಿರುವ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಅಭಿವೃದ್ಧಿ ಕೆಲಸಗಳು, ನರೇಂದ್ರ ಮೋದಿ ಅವರ ವರ್ಚಸ್ಸನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲಿದ್ದಾರೆ. ಈ ಬಾರಿ ಗೆದ್ದು ಹ್ಯಾಟ್ರಿಕ್ ಬಾರಿಸುವ ಉತ್ಸಾಹದಲ್ಲಿದ್ದಾರೆ.

      ಪಕ್ಷ ಸಂಘಟನೆಯಲ್ಲಿ ಎ.ಸಿ.ಶ್ರೀನಿವಾಸ್ ಮುಂದೆ

      ಪಕ್ಷ ಸಂಘಟನೆಯಲ್ಲಿ ಎ.ಸಿ.ಶ್ರೀನಿವಾಸ್ ಮುಂದೆ

      ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತಿದ್ದ ಕಾಂಗ್ರೆಸ್‌ನ ಎ.ಸಿ.ಶ್ರೀನಿವಾಸ್ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಆಪ್ತರಾಗಿರುವ ಅವರು ರಾಜ್ಯ ಸರ್ಕಾರದ ಯೋಜನೆಗಳನ್ನು ಮುಂದಿಟ್ಟುಕೊಂಡು ಅವರು ಚುನಾವಣೆ ಎದುರಿಸಲಿದ್ದಾರೆ.

      ಜೆಡಿಎಸ್‌ ಟಿಕೆಟ್‌ಗೆ ಹಲವು ಆಕಾಂಕ್ಷಿಗಳು

      ಜೆಡಿಎಸ್‌ ಟಿಕೆಟ್‌ಗೆ ಹಲವು ಆಕಾಂಕ್ಷಿಗಳು

      ಕಳೆದ ಬಾರಿ ಜೆಡಿಎಸ್‌ನಿಂದ ಎನ್.ಗೋವರ್ಧನ್ ಸ್ಪರ್ಧಿಸಿದ್ದರು. ಈ ಬಾರಿ ನಲ್ಲೂರಹಳ್ಳಿ ನಾಗೇಶ್, ಬೆಳತೂರು ನಾಗೇಶ್, ದೊಡ್ಡ ಯಲ್ಲಪ್ಪ ಅವರು ಟಿಕೆಟ್ ಆಕಾಂಕ್ಷಿಗಳು. ಯಾರಿಗೆ ಟಿಕೆಟ್ ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

      ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ?

      ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ?

      ಕ್ಷೇತ್ರದ ಕಾಂಗ್ರೆಸ್‌ನಲ್ಲಿ ಭಿನ್ನಮತವಿದೆ. ಇದು ಬಿಜೆಪಿಯ ಗೆಲುವಿಗೆ ಸಹಕಾರಿಯಾಗಬಹುದು. ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಲ್ಲರೂ ಒಂದಾದರೆ ಬಿಜೆಪಿಯನ್ನು ಸೋಲಿಸಬಹುದು.

      2013ರ ಚುನಾವಣೆ ಫಲಿತಾಂಶ

      2013ರ ಚುನಾವಣೆ ಫಲಿತಾಂಶ

      2013ರ ಚುನಾವಣೆಯಲ್ಲಿ ಅರವಿಂದ ಲಿಂಬಾವಳಿ 110,244 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌ನ ಎ.ಸಿ.ಶ್ರೀನಿವಾಸ್ 104,095 ಮತ, ಜೆಡಿಎಸ್‌ನ ಎನ್.ಗೋವರ್ಧನ್ 5,604 ಮತ ಪಡೆದಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+