ಅಂಚೆ ಮತಗಳ ಎಣಿಕೆ; ಕಾಂಗ್ರೆಸ್‌ಗಿಂತ ಬಿಜೆಪಿಗೆ ಮುನ್ನಡೆ

ಬೆಂಗಳೂರು, ಮೇ 13; ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತ ಎಣಿಕೆ ಆರಂಭವಾಗಿದೆ. ಅಂಚೆ ಮತಗಳನ್ನು ಎಣಿಕೆ ಮಾಡಲಾಗುತ್ತಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ರಾಜ್ಯದಲ್ಲಿ ಯಾರು ಸರ್ಕಾರ ರಚನೆ ಮಾಡಲಿದ್ದಾರೆ? ಎಂಬ ಸುಳಿವು ಸಿಗುವ ನಿರೀಕ್ಷೆ ಇದೆ.

ರಾಜ್ಯದ 34 ಮತ ಎಣಿಕೆ ಕೇಂದ್ರಗಳಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲು ಸೇವಾ ಮತದಾರರು, ಚುನಾವಣಾ ಕಾರ್ಯದಲ್ಲಿ ತೊಡಗಿದ ಸಿಬ್ಬಂದಿ ಚಲಾವಣೆ ಮಾಡಿದ ಅಂಚೆ ಮತಗಳನ್ನು ಎಣಿಕೆ ಮಾಡಲಾಗುತ್ತಿದೆ.

Congress And BJP Leading In Postal Vote Counting

8.23ರ ಮಾಹಿತಿಯಂತೆ ಕಾಂಗ್ರೆಸ್ 28 ಮತ್ತು ಬಿಜೆಪಿ 39 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿವೆ. ಜೆಡಿಎಸ್ 9 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತರರು 1 ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ. ಅಂಚೆ ಮತಗಳ ಎಣಿಕೆ ಬಳಿಕ ಮತಯಂತ್ರದಲ್ಲಿ ದಾಖಲಾದ ಮತಗಳ ಎಣಿಕೆ ಕಾರ್ಯ ನಡೆಯಲಿದೆ.

ಕೇಂದ್ರ ಚುನಾವಣಾ ಆಯೋಗ ಈ ಬಾರಿ ಮೊದಲ ಬಾರಿಗೆ ರಾಜ್ಯದಲ್ಲಿ 80 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದವರು ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀಡಿತ್ತು.

ಚುನಾವಣಾಧಿಕಾರಿಗಳು ಮನೆಯಲ್ಲಿಯೇ ಹೋಗಿ ಮತದಾನ ಪ್ರಕ್ರಿಯೆ ನಡೆಸಿದ್ದರು. ಮನೆಯಲ್ಲೇ ಬ್ಯಾಲೆಟ್ ಪೇಪರ್‌ನಲ್ಲಿ ಮತದಾನ ಮಾಡಲಾಗಿದ್ದು, ಈ ಮತಗಳ ಎಣಿಕೆ ಸಹ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+