ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾ.31ರಂದು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಬೃಹತ್ ಸಮಾವೇಶ

|
Google Oneindia Kannada News

ಬೆಂಗಳೂರು, ಮಾರ್ಚ್ 27 : ಲೋಕಸಭಾ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್‌-ಜೆಡಿಎಸ್ ಮೈತ್ರಿಕೂಟ ಮಾ.31ರಂದು ಅಧಿಕೃತವಾಗಿ ಚಾಲನೆ ನೀಡಲಿದೆ. ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23ರಂದು ಚುನಾವಣೆ ನಡೆಯಲಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಮಾ.31ರ ಭಾನುವಾರ ತುಮಕೂರು ರಸ್ತೆಯ ಮಾದಾವರ ಬಳಿ ಇರುವ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದ ಆವರಣದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

2ನೇ ಹಂತದ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟ2ನೇ ಹಂತದ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟ

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಸಮಾವೇಶವನ್ನು ಯಶಸ್ವಿಗೊಳಿಸುವ ಕುರಿತು ಚರ್ಚೆ ನಡೆಸಲಾಗಿದೆ. ಮಾ.31ರಂದು ಸಂಜೆ 4 ಗಂಟೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಮಾವೇಶಕ್ಕೆ ಆಗಮಿಸಲಿದ್ದಾರೆ.

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿವೆ. 21 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, 7 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಈಗಾಗಲೇ 2, ರಾಹುಲ್ ಗಾಂಧಿ 1 ಸಮಾವೇಶ ಉದ್ದೇಶಿಸಿ ಮಾತನಾಡಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್ ಮೈತ್ರಿ

ಕಾಂಗ್ರೆಸ್‌-ಜೆಡಿಎಸ್ ಮೈತ್ರಿ

ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿರುವ ಕಾಂಗ್ರೆಸ್‌-ಜೆಡಿಎಸ್‌ ಲೋಕಸಭಾ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಂಡಿವೆ. ಕಾಂಗ್ರೆಸ್‌ 21 ಮತ್ತು ಜೆಡಿಎಸ್ 7 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿವೆ.

ಬೃಹತ್ ಸಮಾವೇಶ

ಬೃಹತ್ ಸಮಾವೇಶ

ಕೆಲವು ದಿನಗಳ ಹಿಂದೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದ ಸಿದ್ದರಾಮಯ್ಯ, ದೇವೇಗೌಡರು ಎರಡೂ ಪಕ್ಷಗಳು ಜಂಟಿಯಾಗಿ ಚುನಾವಣಾ ಪ್ರಚಾರ ಆರಂಭಿಸಲಿದ್ದೇವೆ ಎಂದು ಹೇಳಿದ್ದರು. ಈಗ ಬೃಹತ್ ಸಮಾವೇಶದ ದಿನಾಂಕವನ್ನು ನಿಗದಿ ಮಾಡಲಾಗಿದೆ.

ರಾಹುಲ್ ಗಾಂಧಿ 2ನೇ ಸಮಾವೇಶ

ರಾಹುಲ್ ಗಾಂಧಿ 2ನೇ ಸಮಾವೇಶ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈಗಾಗಲೇ ಕಲಬುರಗಿಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡುವ ಮೂಲಕ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಈಗ ಜೆಡಿಎಸ್-ಕಾಂಗ್ರೆಸ್ ಜಂಟಿಯಾಗಿ ಪ್ರಚಾರಕ್ಕೆ ಚಾಲನೆ ನೀಡಲಿವೆ.

ಬಿಜೆಪಿ ವಿರುದ್ಧ ರಣಕಹಳೆ

ಬಿಜೆಪಿ ವಿರುದ್ಧ ರಣಕಹಳೆ

ಜಂಟಿ ಸಮಾವೇಶ ಮಾಡುವ ಮೂಲಕ ಕಾಂಗ್ರೆಸ್‌-ಜೆಡಿಎಸ್ ಬಿಜೆಪಿಗೆ ಟಾಂಗ್ ಕೊಡಲು ಸಿದ್ಧವಾಗಿವೆ. 22 ಕ್ಷೇತ್ರಗಳಲ್ಲಿ ಜಯಗಳಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ವಿರುದ್ಧ ಎರಡೂ ಪಕ್ಷಗಳು ಒಂದಾಗಿವೆ.

English summary
Congress and JD(S) alliance 2019 Lok sabah election campaign rally in on March 31 at Bangalore International Exhibition Center (BIEC). AICC president Rahul Gandhi will addressed the rally.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X