ತುಂಬುತ್ತಿದೆ ಬಿಜೆಪಿ ಮನೆ; ಕಾಂಗ್ರೆಸ್- ಜೆಡಿಎಸ್ ಪಕ್ಷಗಳ ಮನೆ ಖಾಲಿ: ನಳಿನ್‍ಕುಮಾರ್ ಕಟೀಲ್

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಈಗಾಗಲೇ ಬಿಜೆಪಿ ಮನೆ ತುಂಬುದಿದೆ.

ಬೆಂಗಳೂರು,ಮಾರ್ಚ್ 7: ಬಿಜೆಪಿ ಮನೆ ತುಂಬುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮನೆ ಖಾಲಿ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಮಂಗಳವಾರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಬಲ್ ಎಂಜಿನ್ ಸರಕಾರಗಳ ಸಾಧನೆಯನ್ನು ಜನರು ಒಪ್ಪಿಕೊಂಡಿದ್ದಾರೆ. ರಾಜ್ಯದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ದೇಶದ ಅಭಿವೃದ್ಧಿ, ರಾಜ್ಯದ ಕಲ್ಯಾಣ ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬ ಭಾವನೆ ಜನರಲ್ಲಿದೆ ಎಂದು ತಿಳಿಸಿದರು.

Congress And Jds Party House Will Be Empty Says Nalin Kumar Kateel

ಬಿಜೆಪಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರಕ್ಕೆ ಬರಲಿದೆ. 3 ರಾಜ್ಯಗಳ ಫಲಿತಾಂಶ ಗಮನಿಸಿದರೆ ಕಾಂಗ್ರೆಸ್ ಪಕ್ಷವು ಶೂನ್ಯದತ್ತ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ವಿರೋಧ ಪಕ್ಷವಾಗಲು ನಾಲಾಯಕ್ ಎಂಬ ಸ್ಥಿತಿಯಲ್ಲಿ ಕಾಂಗ್ರೆಸ್ ಇದೆ ಎಂದು ವಿಶ್ಲೇಷಿಸಿದರು.

ಅಧಿಕಾರ ಗಳಿಸುವ ರಾಜ್ಯದ ಕಾಂಗ್ರೆಸ್ಸಿಗರ ಕನಸು ಕೇವಲ ಹಗಲುಗನಸಾಗಲಿದೆ ಎಂದ ಅವರು, ಚೆನ್ನಾಗಿ ಕೆಲಸ ಮಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮಾಜಿ ಐ.ಎ.ಎಸ್. ಅಧಿಕಾರಿ ಎಂ.ಡಿ.ಲಕ್ಷ್ಮೀನಾರಾಯಣ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

Congress And Jds Party House Will Be Empty Says Nalin Kumar Kateel

ಕಾಂಗ್ರೆಸ್ ಮತ್ತು ಜೆಡಿಎಸ್‍ನಿಂದ ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಸೀಕಲ್ ರಾಮಚಂದ್ರಗೌಡ, ಉದ್ಯಮಿ ಎಸ್.ವಿ. ಆನಂದ ಗೌಡ, ಗ್ರಾ.ಪಂ. ಸದಸ್ಯ ಟಿ.ಪಿ. ಶ್ರೀಧರ್, ಸಿನಿಮಾ ನಿರ್ಮಾಪಕ ವಿಜಯ್‍ಕುಮಾರ್, ಸ್ಥಳೀಯ ಮುಖಂಡರುಗಳಾದ ಮಂಜುನಾಥ್ ಭಕ್ತರಹಳ್ಳಿ, ಮೂರ್ತಿ ಸೊನ್ನೆನಹಳ್ಳಿ, ರಾಜು ಬಳುವನಹಳ್ಳಿ, ಸುರೇಶ್ ಮಿಟ್ಟಿಮರಿ, ವೆಂಕಟರಾಮ್ ರೆಡ್ಡಿ, ವಿರೇಂದ್ರ, ನಾಗರಾಜ್ ಅವರು ಪಕ್ಷಕ್ಕೆ ಸೇರ್ಪಡೆಯಾದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+