ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ನ 3 ಅಭ್ಯರ್ಥಿಗಳ ಹೆಸರು ಅಂತಿಮ
ರಾಜ್ಯಸಭೆ ಚುನಾವಣೆಗೆ ಮೂವರು ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಅಧಿಕೃತ ಭಾನುವಾರ ರಾತ್ರಿ ಬಿಡುಗಡೆ ಮಾಡಿದೆ. ವಿಧಾನಪರಿಷತ್ ಮಾಜಿ ಸದಸ್ಯ ಎಲ್ ಹನುಮಂತಯ್ಯ, ಎಐಸಿಸಿ ವಕ್ತಾರ ನಾಸೀರ್ ಹುಸೇನ್ ಮತ್ತು ಜಿ.ಸಿ.ಚಂದ್ರಶೇಖರ್ ಅವರಿಗೆ ಟಿಕೇಟ್ ನೀಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಆಪ್ತರಿಗೆ ಟಿಕೇಟ್ ನೀಡಲು ಪ್ರಯತ್ನಿಸಿದ್ದರಾದರೂ ಹೈಕಮಾಂಡ್ ಅವರ ಅಭಿಪ್ರಾಯಕ್ಕೆ ಮಣೆಹಾಕಿಲ್ಲ.

ಮಾರ್ಚ್ 23, ಶುಕ್ರವಾರದಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ, ಉದ್ಯಮಿ ರಾಜೀವ್ ಚಂದ್ರಶೇಖರ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ನಿನ್ನೆ ಘೋಷಿಸಿತ್ತು. ಎರಡು ಬಾರಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ರಾಜೀವ್ ಅವರು ಇಂದು(ಮಾ.12)ಬಿಜೆಪಿ ಸದಸ್ಯತ್ವ ಸ್ವೀಕರಿಸಲಿದ್ದಾರೆ.













Click it and Unblock the Notifications