Lok Sabha Election 2024: ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ; ಅಭ್ಯರ್ಥಿಗಳ ಪಟ್ಟಿ
ಲೋಕಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ರಾಜ್ಯದ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಒಟ್ಟು 39 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ಇದರಲ್ಲಿ ಕರ್ನಾಟಕದ 7 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಕೂಡ ಇದೆ.
ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಕಾಂಗ್ರೆಸ್ ರಾಜ್ಯದಲ್ಲಿ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಕಂಡಿತ್ತು. ಈ ಬಾರಿ 20-25 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಿದ್ದು, ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.

ಕರ್ನಾಟಕ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
1) ಬಿಜಾಪುರ - ಎಚ್ ಆರ್ ಅಲಗೂರು
2) ಹಾವೇರಿ - ಆನಂದಸ್ವಾಮಿ ಗಡ್ಡದೇವರ ಮಠ
3) ಶಿವಮೊಗ್ಗ - ಗೀತಾ ಶಿವರಾಜ್‌ಕುಮಾರ್
4) ಹಾಸನ - ಶ್ರೇಯಸ್ ಪಟೇಲ್
5) ತುಮಕೂರು - ಎಸ್‌ಪಿ ಮುದ್ದಹನುಮೇಗೌಡ
6) ಮಂಡ್ಯ - ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
7) ಬೆಂಗಳೂರು ಗ್ರಾಮಾಂತರ - ಡಿ.ಕೆ.ಸುರೇಶ್
2019ರ ಲೋಕಸಭಾ ಚುನಾವಣೆಯಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ 25 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಮೋದಿ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಿತ್ತು. ಜೆಡಿಎಸ್ 1 ಸ್ಥಾನದಲ್ಲಿ ಗೆದ್ದರೆ, ಕಾಂಗ್ರೆಸ್ ಒಂದು ಸ್ಥಾನದಲ್ಲಿ ಗೆದ್ದಿತ್ತು, ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನದಲ್ಲಿ ಗೆದ್ದಿದ್ದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ಮಾತ್ರ ರಾಜ್ಯದಲ್ಲಿ ಏಕೈಕ ಕಾಂಗ್ರೆಸ್ ಸಂಸದರಾಗಿದ್ದಾರೆ. ಈ ಬಾರಿ ಬಿಜೆಪಿ ಇನ್ನೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ಆಗಲೇ ಕಾಂಗ್ರೆಸ್ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ತುಮಕೂರು ಕ್ಷೇತ್ರದಲ್ಲಿ ಕಳೆದ ಬಾರಿ ಎಸ್‌ಪಿ ಮುದ್ದಹನುಮೇಗೌಡರನ್ನು ನಿರ್ಲಕ್ಷಿಸಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಹೆಚ್‌ಡಿ ದೇವೇಗೌಡರಿಗೆ ಕಾಂಗ್ರೆಸ್ ಬೆಂಬಲ ನೀಡಿತ್ತು. ಎಸ್‌ಪಿ ಮುದ್ದಹನುಮೇಗೌಡ ಬಳಿಕ ಬಿಜೆಪಿ ಸೇರಿದ್ದರು, ಈ ಬಾರಿ ಮತ್ತೆ ಅವರನ್ನು ಕಾಂಗ್ರೆಸ್‌ಗೆ ಕರೆತಂದಿರುವ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.
ಶಿವಮೊಗ್ಗ ಕ್ಷೇತ್ರದಿಂದ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಸ್ಪರ್ಧೆ ಮಾಡಲಿದ್ದಾರೆ. ಶಿವಮೊಗ್ಗದಲ್ಲಿ ಬಿಎಸ್‌ವೈ ಪುತ್ರ ಬಿ.ವೈ. ರಾಘವೇಂದ್ರ ಸ್ಪರ್ಧಿಸಲಿದ್ದು, ಅವರಿಗೆ ಎದುರಾಗಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.












Click it and Unblock the Notifications