Maharashtra Election: ಕರ್ನಾಟಕದಿಂದ 03 ವೀಕ್ಷಕರ ನೇಮಕ, ಗೆದ್ದೇ ಗೆಲ್ತೇವೆ ಎಂದ ಸಚಿವ
ಬೆಂಗಳೂರು, ಅಕ್ಟೋಬರ್ 16: ಮಹಾರಾಷ್ಟ್ರ ರಾಜ್ಯದಲ್ಲಿ ವಿಧಾನಸಭೆಗೆ ಚುನಾವಣೆ ಘೋಷಣೆ ಆಗಿದೆ. ಇದರ ಬೆನ್ನಲ್ಲೆ ಕರ್ನಾಟಕ ಕಾಂಗ್ರೆಸ್ ಪಕ್ಷ ಇಬ್ಬರು ಸಚಿವರು ಮೂವರು ಸೇರಿದಂತೆ ಮೂವರನ್ನು 'ಮಹಾ' ವೀಕ್ಷಕರನ್ನಾಗಿ ನೇಮಕ ಮಾಡಿದೆ. ಇವರಿಗೆ ಪಕ್ಷ ಗೆಲ್ಲಿಸುವ ಜವಾಬ್ದಾರಿ ನೀಡಲಾಗಿದೆ. ಜರುಗಲಿರುವ ಮಹಾರಾಷ್ಟ್ರ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯ ಸಾಧಿಸಲಿದೆ ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೌದು, ಕರ್ನಾಟಕ ಕಾಂಗ್ರೆಸ್ ಪಕ್ಷವು ರಾಜ್ಯ ಸಚಿವರಾದ ಡಾ.ಜಿ.ಪರಮೇಶ್ವರ ಮತ್ತು ಎಂಬಿ ಪಾಟೀಲ್ ಹಾಗೂ ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಅವರನ್ನು ಮಹಾರಾಷ್ಟ್ರ ವೀಕ್ಷಕರನ್ನಾಗಿ ನಿಯೋಜಿಸಿ ಮಂಗಳವಾರ ಆದೇಶಿಸಿದೆ.

ಚುನಾವಣೆ ಜವಾಬ್ದಾರಿ ಹೊತ್ತ ಬೆನ್ನಲ್ಲೆ ಬುಧವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಎಂಬಿ ಪಾಟೀಲ್ ಅವರು, ಪಕ್ಷದ ಹೈಕಮಾಂಡ್ ಮಹಾರಾಷ್ಟ್ರದ ಪಶ್ಚಿಮ ಭಾಗದ ಹಿರಿಯ ಚುನಾವಣಾ ವೀಕ್ಷಕರನ್ನಾಗಿ ತಮ್ಮನ್ನು ನೇಮಿಸಿದೆ. ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲಾಗುವುದು. ಈ ಬಾರಿಯ ಚುನಾವಣೆಯಲ್ಲಿ ಅಲ್ಲಿ ಕಾಂಗ್ರೆಸ್ ಇರುವ ಮೈತ್ರಿಕೂಟ (ಮಹಾವಿಕಾಸ ಅಘಾಡಿ) ಜಯಭೇರಿ ಬಾರಿಸಲಿದೆ ಎಂದು ಅವರು ಹೇಳಿದರು.
ನೆರೆಯ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವು ಶಿವಸೇನೆಯ ಉದ್ಧವ್ ಠಾಕ್ರೆ ಬಣ ಮತ್ತು ಶರದ್ ಪವಾರ್ ಅವರ ಎನ್‌ಸಿಪಿ ಜತೆ ಮೈತ್ರಿ ಹೊಂದಿದೆ. ಅಲ್ಲಿ ಆಡಳಿತಾರೂಢ ಬಿಜೆಪಿ, ಸೇನೆ ಮತ್ತು ಏಕನಾಥ್ ಶಿಂಧೆ ಅವರ ಸೇನಾ ಬಣಗಳ ವಿರುದ್ಧ ದೊಡ್ಡ ಆಡಳಿತಾರೂಢ ಅಲೆ ಎದ್ದಿದೆ. ಹೀಗಾಗಿ ಇಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಅವರು ವಿವರಿಸಿದರು.
ಮಹಾರಾಷ್ಟ್ರದ ಚುನಾವಣೆಯಲ್ಲಿ ಅಲ್ಲಿನ ಸ್ಥಳೀಯ ವಿಚಾರಗಳು ನಿರ್ಣಾಯಕವಾಗಿವೆ. ಕರ್ನಾಟಕದಲ್ಲಿ ಸಿಎಂ ವಿರುದ್ಧ ಕೇಳಿ ಬಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೂ ಮಹಾರಾಷ್ಟ್ರ ಚುನಾವಣೆಗೂ ಸಂಬಂಧವಿಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದರು.
ಮಹಾರಾಷ್ಟ್ರದಲ್ಲಿ ಅಲ್ಲಿಯ ಆಡಳಿತ ನೋಡಿ ಮತದಾರರು ರೋಸಿ ಹೋಗಿದ್ದಾರೆ. ಅಲ್ಲಿ ಬಿಜೆಪಿ ನೇತೃತ್ವದಲ್ಲಿ ಅನೈತಿಕ ರಾಜಕಾರಣ ನಡೆಯುತ್ತಿದೆ. ಜನ ಈ ಬಾರಿ ಅದಕ್ಕೆ ತಕ್ಕ ಉತ್ತರ ಕೊಡಲಿದ್ದಾರೆ ಎಂದು ಪಾಟೀಲರು ಪ್ರತಿಪಾದಿಸಿದರು.
ಸೊಲ್ಲಾಪುರ, ಸಾಂಗ್ಲಿ, ಕೊಲ್ಲಾಪುರ, ಮೀರಜ್ ಇತ್ಯಾದಿ ಕಡೆ ಮೊದಲಿನಿಂದ ತಮಗೆ ಒಡನಾಟವಿದೆ. ಹೀಗಾಗಿ ಪಕ್ಷ ಹಿರಿಯ ವೀಕ್ಷಕರನ್ನಾಗಿ ನೇಮಿಸಿದೆ ಎಂದು ಅವರು ಪಕ್ಷದ ತೀರ್ಮಾನವನ್ನು ಸ್ವಾಗತಿಸಿದರು.
ಮಹಾರಾಷ್ಟ್ರ: ಕಾಂಗ್ರೆಸ್ ಅಧಿಕಾರಕ್ಕೆ
— M B Patil (@MBPatil) October 16, 2024
ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಉತ್ತಮ ಅಭ್ಯರ್ಥಿಗಳನ್ನೇ ಕಣಕ್ಕೆ ಇಳಿಸುತ್ತೇವೆ. ನಿಶ್ಚಿತವಾಗಿ ಮೂರು ಕ್ಷೇತ್ರಗಳಲ್ಲೂ ಜಯ ಸಾಧಿಸಲಿದ್ದೇವೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಶ್ರೀ ಶರದ್ ಪವಾರ್ ಅವರ NCP, ಶ್ರೀ ಉದ್ಧವ್ ಠಾಕ್ರೆ ಅವರ ಶಿವಸೇನೆ… pic.twitter.com/brmlIS265p
ಮಹಾರಾಷ್ಟ್ರ ಸೇರಿ ಎರಡು ರಾಜ್ಯಗಳಿಗೆ ಚುನಾವಣೆ ಘೋಷಣೆ
ಇತ್ತೀಚೆಗಷ್ಟೇ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆ ನಡೆದು, ಫಲಿತಾಂಶವು ಹೊರ ಬಿದ್ದಿದೆ. ಈ ವೇಳೆ ಕಾಂಗ್ರೆಸ್ ಬಿಜೆಪಿಗೆ ತಲಾ ಒಂದೊಂದು ರಾಜ್ಯದ ಅಧಿಕಾರ ಸಿಕ್ಕಿದೆ. ಪ್ರಧಾನಿ ಮೋದಿಯವರು ಹರಿಯಾಣದ ಚುನಾವಣೆ ಪ್ರಚಾರದ ವೇಳೆ ಕರ್ನಾಟಕದ ಮುಡಾ ಹಗರಣ ಬಗ್ಗೆ ಮಾತನಾಡಿದ್ದರು. ಕಾಕತಾಲಿಯವೇನೋ ಎಂಬಂತೆ ಹಿನ್ನಡೆ ಎದುರಿಸಿದ್ದ ಬಿಜೆಪಿ ರಾಜ್ಯದಲ್ಲಿ ಗೆದ್ದು ಬೀಗಿದೆ. ಇದರ ಬೆನ್ನಲ್ಲೆ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಕ್ಕೆ ಚುನಾವಣೆ ಘೋಷಣೆ ಆಗಿದೆ.
ಮಹಾರಾಷ್ಟ್ರದಲ್ಲಿ ಕರ್ನಾಟಕ ಸಿಎಂ ವಿರುದ್ಧದ ಮುಡಾ ಪ್ರಕರಣ ಬಗ್ಗೆ ಮಾತನಾಡದಂತೆ ಸಚಿವ ಎಂಬಿ ಪಾಟೀಲ್ ಅವರು ತಡೆಯಲು ಮುಂದಾಗಿದ್ದಾರೆ. ಮುಡಾ ಪ್ರಕರಣ, ಮಹಾರಾಷ್ಟ್ರ ಚುನವಣೆಗೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.












Click it and Unblock the Notifications