ಲೋಕಸಭಾ ಚುನಾವಣೆ : ಕಾಂಗ್ರೆಸ್ ಸಚಿವರಿಗೆ ಗೆಲುವಿನ ಹೊಣೆ!
ಬೆಂಗಳೂರು, ಏಪ್ರಿಲ್ 01 : ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಬೇಕು ಎಂದು ಕಾಂಗ್ರೆಸ್ ತೀರ್ಮಾನಿಸಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಪಕ್ಷ ಚುನಾವಣೆ ಎದುರಿಸುತ್ತಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಸಚಿವರ ಹೆಗಲಿಗೆ ವಹಿಸಿದ್ದಾರೆ. ಯಾವುದೇ ನೆಪವನ್ನು ಹೇಳದೇ ಅಭ್ಯರ್ಥಿ ಪರವಾಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದೆ. ಏಪ್ರಿಲ್ 18 ಮತ್ತು 23ರಂದು ಎರಡು ಹಂತದಲ್ಲಿ ರಾಜ್ಯದಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಬಿರುಸಿನಿಂದ ಪ್ರಚಾರ ನಡೆಯುತ್ತಿದೆ.
'ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ನಮ್ಮ ಗುರಿ. ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರಲ್ಲಿ ಯಾವುದೇ ಮನಸ್ತಾಪ ಉಂಟಾಗದಂತೆ ನೋಡಿಕೊಳ್ಳಬೇಕು' ಎಂದು ಕೆ.ಸಿ.ವೇಣುಗೋಪಾಲ್ ಅವರು ಸಚಿವರಿಗೆ ಸೂಚನೆ ನೀಡಿದ್ದಾರೆ.

ಸಚಿವರ ಜೊತೆ ಪ್ರತ್ಯೇಕ ಸಭೆ
ಕೆ.ಸಿ.ವೇಣುಗೋಪಾಲ್ ಅವರು ಸಚಿವರ ಜೊತೆ ಲೋಕಸಭಾ ಚುನಾವಣೆ ಕುರಿತು ಪ್ರತ್ಯೇಕವಾದ ಸಭೆಯನ್ನು ನಡೆಸಿದ್ದಾರೆ. ಪ್ರಚಾರ ಕಾರ್ಯ ಕೈಗೊಳ್ಳುವುದು, ಮೈತ್ರಿ ಅಭ್ಯರ್ಥಿ ಗೆಲುವಿಗೆ ಕೈಗೊಳ್ಳಬೇಕಾದ ತಂತ್ರಗಳ ಕುರಿತು ಹಲವು ಸೂಚನೆಗಳನ್ನು ನೀಡಿದ್ದಾರೆ.

ಸಚಿವರಿಗೆ ಉಸ್ತುವಾರಿ
ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಡಾ. ಜಯಮಾಲಾ, ದಕ್ಷಿಣ ಕನ್ನಡಕ್ಕೆ ಯು.ಟಿ.ಖಾದರ್, ಉತ್ತರ ಕನ್ನಡ ಕ್ಷೇತ್ರಕ್ಕೆ ಆರ್.ವಿ.ದೇಶಪಾಂಡೆ, ಚಿತ್ರದುರ್ಗ ಕ್ಷೇತ್ರಕ್ಕೆ ವೆಂಕಟರಮಣಪ್ಪ ಅವರನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಗೆಲ್ಲಲು ತಂತ್ರ ರೂಪಿಸಿ
ತುಮಕೂರು ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಬೆಂಗಳೂರು ದಕ್ಷಿಣ/ಬೆಂಗಳೂರು ಕೇಂದ್ರ/ಹಾವೇರಿ ಕ್ಷೇತ್ರಗಳಿಗೆ ಜಮೀರ್ ಅಹಮದ್ ಖಾನ್ ಉಸ್ತುವಾರಿಯಾಗಿದ್ದಾರೆ.

ಸಚಿವರು ಕ್ಷೇತ್ರದಲ್ಲಿ ಪ್ರವಾಸ ಮಾಡಬೇಕು
ಚಾಮರಾಜನಗರ ಕ್ಷೇತ್ರಕ್ಕೆ ಸಚಿವ ಪುಟ್ಟರಂಗ ಶೆಟ್ಟಿ, ವಿಜಯಪುರ ಕ್ಷೇತ್ರಕ್ಕೆ ಶಿವಾನಂದ ಪಾಟೀಲ/ಎಂ.ಬಿ.ಪಾಟೀಲ, ಬಾಗಲಕೋಟೆ ಕ್ಷೇತ್ರದ ಉಸ್ತುವಾರಿಯನ್ನು ಆರ್.ಬಿ.ತಿಮ್ಮಾಪುರ ಅವರಿಗೆ ನೀಡಲಾಗಿದೆ.












Click it and Unblock the Notifications