ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕಾಂಗ್ರೆಸ್, ಭಾರತ್ ಜೋಡೋ ಯಾತ್ರಾ ಟ್ವಿಟ್ಟರ್ ಖಾತೆಗೆ ನಿರ್ಬಂಧ

|
Google Oneindia Kannada News

ಬೆಂಗಳೂರು, ನವೆಂಬರ್ 07: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್-2 ಚಿತ್ರದ ಹಾಡನ್ನು ಬಳಸಿದ ಹಿನ್ನೆಲೆ ಕಾಂಗ್ರೆಸ್‌ನ ಟ್ವಿಟ್ಟರ್ ಹ್ಯಾಂಡಲ್ ಅನ್ನು ನಿರ್ಬಂಧಿಸಲು ಬೆಂಗಳೂರಿನ ನ್ಯಾಯಾಲಯವು ಆದೇಶಿಸಿದೆ.

ಕೆಜಿಎಫ್-2 ಚಿತ್ರದ ಹಾಡನ್ನು ಪ್ಲೇ ಮಾಡಿದ್ದಕ್ಕಾಗಿ ಸಂಗೀತ ಸಂಸ್ಥೆಯೊಂದು ಕಾಂಗ್ರೆಸ್ ಪಕ್ಷದ ವಿರುದ್ಧ ಹಕ್ಕುಸ್ವಾಮ್ಯದ ಪ್ರಕರಣವನ್ನು ದಾಖಲಿಸಿದ ನಂತರ ಬೆಂಗಳೂರಿನ ವಾಣಿಜ್ಯ ಕೋರ್ಟ್ ಈ ಆದೇಶವನ್ನು ಹೊರಡಿಸಿದೆ.

ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ 2 ಹಾಡು ಬಳಕೆ; ರಾಹುಲ್ ವಿರುದ್ಧ ಎಫ್‌ಐಆರ್ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ 2 ಹಾಡು ಬಳಕೆ; ರಾಹುಲ್ ವಿರುದ್ಧ ಎಫ್‌ಐಆರ್

ಕರ್ನಾಟಕದಾದ್ಯಂತ ಸಂಚರಿಸಿದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹಕ್ಕುಸ್ವಾಮ್ಯ ಕಾನೂನುಗಳನ್ನು ಉಲ್ಲಂಘಿಸಿ ಕನ್ನಡ ಚಲನಚಿತ್ರ ಕೆಜಿಎಫ್ -2ರ ಸಂಗೀತವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ರಾಹುಲ್ ಗಾಂಧಿ ಸೇರಿದಂತೆ ಮೂವರ ವಿರುದ್ಧ ಎಂಆರ್‌ಟಿ ಸಂಗೀತವನ್ನು ನಿರ್ವಹಿಸುವ ಎಂ ನವೀನ್ ಕುಮಾರ್ ದೂರು ದಾಖಲಿಸಿದ್ದರು.

Congress, Bharat Jodo Yatra Twitter accounts to be blocked over alleged copyright violations

ಭಾರತ್ ಜೋಡೋ ಯಾತ್ರಾ ಅಭಿಯಾನದ ಟ್ವಿಟ್ಟರ್ ನಿರ್ಬಂಧ:

ಕೆಜಿಎಫ್-2 ಚಿತ್ರದ ಹಾಡನ್ನು ಬಳಕೆ ಮಾಡಿರುವುದರ ಹಿನ್ನೆಲೆ ಭಾರತ್ ಜೋಡೋ ಯಾತ್ರಾ ಅಭಿಯಾನದ ಟ್ವಿಟರ್ ಹ್ಯಾಂಡಲ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಬೆಂಗಳೂರಿನ ವಾಣಿಜ್ಯ ಕೋರ್ಟ್ ಆದೇಶಿಸಿದೆ. ಭಾರತ್ ಜೋಡೋ ಯಾತ್ರಾ ಪ್ರಚಾರದ ವಿಡಿಯೊಗಳಲ್ಲಿ ಕೆಜಿಎಫ್-2 ಹಾಡುಗಳನ್ನು ಬಳಸಿರುವ ಬಗ್ಗೆ ಮ್ಯೂಸಿಕ್ ಕಂಪನಿಯು ಆರೋಪಿಸಿದೆ.

ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಲ್ಲಿ ರಾಹುಲ್ ಗಾಂಧಿ ಅನ್ನು ಕೆಜಿಎಫ್ 2 ಚಿತ್ರದ ಸಂಗೀತವನ್ನು ಬಳಸಿ ತೋರಿಸಲಾಗಿತ್ತು. ಇದಕ್ಕಾಗಿ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರಿನೇಟ್ ವಿರುದ್ಧ ಕೃತಿಸ್ವಾಮ್ಯ ಕಾಯ್ದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಕಳೆದ ಶುಕ್ರವಾರ, ನವೆಂಬರ್ 4 ರಂದು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ಎಂಆರ್‌ಟಿ ಮ್ಯೂಸಿಕ್‌ನ ಎಂ. ನವೀನ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ನಾಯಕರ ಮೇಲೆ ದೂರು ದಾಖಲಾಗಿದೆ.

English summary
Congress and Bharat Jodo Yatra Twitter accounts to be blocked over alleged copyright violations, says Karnataka court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X