ಸಿಲಿಂಡರ್‌ಗೆ ಹಾರ ಹಾಕಿ ಫೋಟೋ ತೆಗೆಯಿರಿ- ಮೋದಿಗೆ ಟ್ಯಾಗ್ ಮಾಡಿ: ಕಾಂಗ್ರೆಸ್

ಬೆಂಗಳೂರು, ಮಾ.29: ಪೆಟ್ರೋಲ್‌, ಡೀಸೆಲ್, ಗ್ಯಾಸ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಎರಿಕೆಯನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಮಾ.31ರಂದು ವಿನೂತನ ರೀತಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.

ದಿನನಿತ್ಯ ಜನಸಾಮಾನ್ಯರ ಜೇಬು ಪಿಕ್‌ಪಾಕೆಟ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಇದೇ 31 ರಂದು ರಾಜ್ಯದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

'ಅಂದು ತಮ್ಮ ಮನೆಯ ಮುಂದೆ ತಮ್ಮ ವಾಹನ, ಗ್ಯಾಸ್ ಸಿಲಿಂಡರ್ ಇಟ್ಟು ಹೂವಿನ ಹಾರ ಹಾಕಿ ಜಾಗಟೆ ಬಾರಿಸಬೇಕು. ನಂತರ ಅದರ ವಿಡಿಯೋ, ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಹಾಕಬೇಕು. ನಮ್ಮ ಎಲ್ಲ ನಾಯಕರು ಹಾಗೂ ಕಾರ್ಯಕರ್ತರು ಇದನ್ನು ಮಾಡಬೇಕಾಗಿ ಮನವಿ ಮಾಡುತ್ತೇನೆ' ಎಂದು ಶಿವಕುಮಾರ್ ಹೇಳಿದರು.

Congress campaign against price rise from March 31; garland LPG cylinders tag photo with modi

ಇದು ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕ್ರಮ. ನಂತರ ಏ.7 ರಂದು ಜಿಲ್ಲಾ ಮಟ್ಟದಲ್ಲಿ ಈ ವಿಚಾರವಾಗಿ ರ್ಯಾಲಿ ಹಮ್ಮಿಕೊಳ್ಳಲು ಸೂಚನೆ ನೀಡುತ್ತೇವೆ. ಯುಗಾದಿ, ಏ. 5 ರಂದು ಬಾಬು ಜಗಜೀವನ್ ರಾಮ್ ಅವರ ಜನ್ಮದಿನ ಹಿನ್ನೆಲೆಯಲ್ಲಿ ಏ.7 ರಂದು ಈ ಪ್ರತಿಭಟನೆ ಮಾಡಲು ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಸೂಚಿಸಿದ್ದು, ರಾಜ್ಯಮಟ್ಟದ ಪ್ರತಿಭಟನೆ ದಿನಾಂಕವನ್ನು ಚರ್ಚಿಸಿ ಪ್ರಕಟಿಸುತ್ತೇವೆ. 31 ರಂದು ರಾಹುಲ್ ಗಾಂಧಿ ಅವರು ಆಗಮಿಸಿದರೂ ಕೂಡ ನೀವು ಈ ಕಾರ್ಯಕ್ರಮ ಮಾಡಲೇಬೇಕು. ಜನರಿಗೆ ಬೆಲೆ ಏರಿಕೆ ವಿಚಾರ ತಿಳಿಯಬೇಕು. ಬೆಳಗ್ಗೆ 8 ರಿಂದ 11 ಗಂಟೆ ಸಮಯದಲ್ಲಿ ಈ ಪ್ರತಿಭಟನೆ ನಡೆಯಲಿದೆ ಎಂದರು.

ರಾಹುಲ್ ಗಾಂಧಿ ರಾಜ್ಯಕ್ಕೆ:

ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮ ನಿಮಿತ್ತ ಇದೇ 31 ರಂದು ಮಧ್ಯಾಹ್ನ 3.30 ಕ್ಕೆ ತುಮಕೂರು ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಅವರ ಗದ್ದುಗೆಗೆ ಪೂಜೆ, ಗೌರವ ಸಲ್ಲಿಸುವರು. ಅಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರು ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ನೇರವಾಗಿ ಸಿದ್ದಗಂಗಾ ಮಠಕ್ಕೆ ತೆರಳಿ, ಅಲ್ಲಿಯೇ ಪ್ರಸಾದ ಸ್ವೀಕರಿಸುತ್ತಾರೆ.

ನಂತರ ಬೆಂಗಳೂರಿಗೆ ಬಂದು ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ ಬಿಬಿಎಂಪಿ ವ್ಯಾಪ್ತಿ ನಾಯಕರನ್ನು ಭೇಟಿ ಮಾಡಲಿದ್ದಾರೆ. ನಂತರ ಏ.1 ರಂದು ಎಲ್ಲ ಶಾಸಕರು, ಮಾಜಿ ಶಾಸಕರು, 2018 ರ ಚುನಾವಣೆ ಪರಾಜಿತ ಅಭ್ಯರ್ಥಿಗಳು, ಸಂಸತ್ ಚುನಾವಣೆ ಪರಾಜಿತ ಅಭ್ಯರ್ಥಿಗಳು, ಮಾಜಿ ಸಂಸದರು, ವಿವಿಧ ಘಟಕಗಳ ಅಧ್ಯಕ್ಷರ ಜತೆ ಸಭೆ ಮಾಡಲಿದ್ದಾರೆ. ಜೂಮ್ ಮೂಲಕ ಪಕ್ಷದ ಸದಸ್ಯತ್ವ ನೋಂದಣಿಯಲ್ಲಿ ಸಕ್ರಿಯವಾಗಿರುವವರ ಜತೆ ಸಂಪರ್ಕ ಮಾಡಲಾಗುವುದು ಎಂದರು.

47 ಲಕ್ಷ ಸದಸ್ಯರ ನೋಂದಣಿ

ರಾಜ್ಯದಲ್ಲಿ ಈಗಾಗಲೇ 47 ಲಕ್ಷ ಕಾಂಗ್ರೆಸ್ ಸದಸ್ಯರನ್ನು ನೋಂದಣಿ ಮಾಡಲಾಗಿದ್ದು, ಇಡೀ ದೇಶದಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ. ಇನ್ನು ತಾಂತ್ರಿಕ ಕಾರಣದಿಂದ ಪ್ರಾವಿಷನ್ ಆಗಿರುವ ಸದಸ್ಯತ್ವ ಬೇರೆ ಇದೆ. 31 ರಂದು ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಸದಸ್ಯತ್ವ ನೋಂದಣಿ ಅವಧಿ ವಿಸ್ತರಣೆ ಮಾಡಬೇಕು ಎಂದು ಕೆಲವರು ಮನವಿ ಮಾಡಿದ್ದು, ಈ ಬಗ್ಗೆ ದೆಹಲಿ ನಾಯಕರು ತೀರ್ಮಾನ ಮಾಡುತ್ತಾರೆ. ಬ್ಲಾಕ್ ಮಟ್ಟದಿಂದ ರಾಷ್ಟ್ರ ಮಟ್ಟದವರೆಗೂ ಪಕ್ಷದ ವಿವಿಧ ಚುನಾವಣೆಗಳು ತೀರ್ಮಾನ ಆಗಿದ್ದರಿಂದ ನಾವು ತರಾತುರಿಯಲ್ಲಿ ಸದಸ್ಯತ್ವ ಮಾಡಿದ್ದೇವೆ. ಎಲ್ಲವೂ ನೈಜ ಸದಸ್ಯತ್ವವಾಗಿವೆ. ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡವರ ಜತೆ ಮಾತನಾಡಬೇಕು ಎಂದು ರಾಹುಲ್ ಗಾಂಧಿ ಅವರು ಬಯಸಿದ್ದಾರೆ. ಇನ್ನು ಯೂತ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಎನ್ಎಸ್ಯೂಐ, ಸೇವಾದಳ ಹಾಗೂ ಮುಂಚೂಣಿ ಘಟಕಗಳ ಮುಖ್ಯಸ್ಥರ ಜತೆ ಪ್ರತ್ಯೇಕ ಸಭೆ ಮಾಡಲಿದ್ದಾರೆ ಎಂದು ಶಿವಕುಮಾರ್ ವಿವರಿಸಿದರು.

Recommended Video

      ನಾವು ಯಾವತ್ತೇ ಕಪ್ ಗೆದ್ದರು ಅದು ABD ಗೆ ಸಮರ್ಪಣೆ! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+