Get Updates
Get notified of breaking news, exclusive insights, and must-see stories!

Congress Candidate List: ಕಮಲ ಬಿಟ್ಟಿದಕ್ಕೆ ಜಯಪ್ರಕಾಶ್‌ ಹೆಗ್ಡೆ ಕೈ ಹಿಡಿದ ಕಾಂಗ್ರೆಸ್‌ ಹೈಕಮಾಂಡ್

ಬೆಂಗಳೂರು, ಮಾರ್ಚ್ 21: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ​ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಕರ್ನಾಟಕದ 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​​ ಘೋಷಿಸಿದೆ. ಈ ಬಾರಿ ಹೊಸ ಮುಖಗಳು ಸೇರಿದಂತೆ ಹಿರಿಯ ರಾಜಕೀಯ ಹುರಿಯಾಳುಗಳಿಗೆ ಪಕ್ಷ ಮಣೆ ಹಾಕಿದ್ದು, ಈ ಪೈಕಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಟಿಕೆಟ್‌ ಜಯಪ್ರಕಾಶ್‌ ಹೆಗ್ಡೆ ಪಾಲಾಗಿದೆ.

ಇತ್ತೀಚಿಗಷ್ಟೇ ಬಿಜೆಪಿಗೆ ಗುಡ್‌ ಬೈ ಹೇಳಿ ಕಾಂಗ್ರೆಸ್‌ ಗೂಡಿಗೆ ಮರಳಿದ್ದ ಜಯಪ್ರಕಾಶ್‌ ಹೆಗ್ಡೆಗೆ ಕಾಂಗ್ರೆಸ್‌ ಹೈಕಮಾಂಡ್‌ ಮಣೆ ಹಾಕಿದ್ದು, ಪಕ್ಷಕ್ಕೆ ಮರಳಿ ಆಗಮಿಸುತ್ತಿದ್ದಂತೆ ಲೋಕಸಭಾ ಅಖಾಡದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದೆ. ಈ ಮೂಲಕ ಹಲವು ವರ್ಷಗಳ ಬಳಿಕ ಕರಾವಳಿಯ ಜನನಾಯಕ ಎನಿಸಿಕೊಂಡಿರುವ ಜಯಪ್ರಕಾಶ್‌ ಹೆಗ್ಡೆ ಚುನಾವಣಾ ಕಣಕ್ಕಿಳಿದಿದ್ದಾರೆ.

Congress Candidate second list Jayaprakash Hegde Contest In Lok Sabha Election 2024

ಈ ಬಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ರಾಜಕೀಯ ರಂಗದ ಇಬ್ಬರು ಸರಳ ನಾಯಕರು ಮುಖಾಮುಖಿಯಾಗಿದ್ದಾರೆ. ಬಿಜೆಪಿಯಿಂದ ಶ್ರೀನಿವಾಸ್‌ ಪೂಜಾರಿ ಅವರಿಗೆ ಟಿಕೆಟ್‌ ನೀಡಲಾಗಿದ್ದು, ಇದೀಗ ಕಾಂಗ್ರೆಸ್‌ನಿಂದ ಜಯಪ್ರಕಾಶ್‌ ಹೆಗ್ಡೆಗೆ ಟಿಕೆಟ್‌ ನೀಡಲಾಗಿದೆ. ಇಬ್ಬರೂ ಅಭ್ಯರ್ಥಿಗಳು ಕೂಡ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾಗಿರುವುದು ಇನ್ನೂ ವಿಶೇಷ. ಸದ್ಯ ಇಬ್ಬರೂ ಕೂಡ ಜನರ ಜೊತೆ ಬೆರೆತಿರುವ ರಾಜಕೀಯ ನಾಯಕರಾಗಿದ್ದು, ಈ ಬಾರಿ ಕ್ಷೇತ್ರದಲ್ಲಿ ಜಿದ್ದಾಜಿದ್ದಿಯ ಪೈಪೋಟಿ ನಡೆಯುವ ಸಾಧ್ಯತೆ ಹೆಚ್ಚಿದೆ.

ಜಯಪ್ರಕಾಶ್‌ ಹೆಗ್ಡೆ ರಾಜಕೀಯ ಹೆಜ್ಜೆಗಳು

ಜನತಾದಳದ ಮೂಲಕ ರಾಜ್ಯ ರಾಜಕೀಯಕ್ಕೆ ಪ್ರವೇಶಿಸಿದ ಜಯಪ್ರಕಾಶ್‌ ಹೆಗ್ಡೆ 1994ರಲ್ಲಿ ಬ್ರಹ್ಮಾವರ ಕ್ಷೇತ್ರದಲ್ಲೇ ಮೊದಲ ಬಾರಿ ಜಯಗಳಿಸುವ ಮೂಲಕ ರಾಜ್ಯ ವಿಧಾನಸಭೆಯನ್ನು ಪ್ರವೇಶಿಸಿದ್ದರು. ಬಳಿಕ 2004ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಸತತ 11 ವರ್ಷ ಈ ಕ್ಷೇತ್ರವನ್ನು ಪ್ರತಿನಿಧಿಸಿ ಮೀನುಗಾರಿಕಾ ಸಚಿವರಾಗಿ ಕೂಡ ಸೇವೆ ಸಲ್ಲಿಸಿದ್ದರು.

ಗೆಲುವಿನ ನಾಗಾಲೋಟದಲ್ಲಿದ್ದ ಜಯಪ್ರಕಾಶ್ ಹೆಗ್ಡೆ 2008 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಂದಾಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಸೋಲನುಭವಿಸಿದರು. 2009ರ ಲೋಕಸಭಾ ಚುನಾವಣೆಯಲ್ಲೂ ಸೋಲುಕಂಡರು. ಆದರೆ ಮತ್ತೆ 2012ರಲ್ಲಿ ನಡೆದ ಲೋಕಸಭಾ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾದರು. 2014ರ ಲೋಕಸಭಾ ಚುನಾವಣೆಯಲ್ಲಿ ಸೋಲಿನ ನಂತರ ಬಿಜೆಪಿ ಸೇರ್ಪಡೆಯಾದರು. ಕೆಲವು ವರ್ಷಗಳಿಂದ ಬಿಜೆಪಿಯಲ್ಲಿದ್ದರೂ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+