Congress Candidates 4th List : 7 ಅಭ್ಯರ್ಥಿಗಳ ಕಾಂಗ್ರೆಸ್ ನಾಲ್ಕನೇ ಪಟ್ಟಿಯಲ್ಲಿ ಯಾರಿಗೆಲ್ಲಾ ಟಿಕೆಟ್ ತಿಳಿಯಿರಿ

ಬೆಂಗಳೂರು, ಏಪ್ರಿಲ್. 18: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಪಕ್ಷವನ್ನ ಈ ಬಾರಿ ಅಧಿಕಾರಕ್ಕೆ ತರಲು ಕಾಂಗ್ರೆಸ್‌ ಕಲಿಗಳು ಭರ್ಜರಿ ಸಿದ್ಧತೆ ನಡೆಸಿವೆ, ಇದೇ ನಿಟ್ಟಿನಲ್ಲಿ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದೆ. ಈಗಾಗಲೇ ಕಾಂಗ್ರೆಸ್ 224 ಅಭ್ಯರ್ಥಿಗಳ ಪೈಕಿ 209 ಅಭ್ಯರ್ಥಿಗಳನ್ನ ಚುನಾವಣಾ ಕಣಕ್ಕಿಳಿಸಿದೆ.

ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿದ್ದ ಕಾಂಗ್ರೆಸ್‌ ಹೈಕಮಾಂಡ್‌ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ರಿಲೀಸ್‌ ಮಾಡಿತ್ತು. ಕಳೆದ ಶನಿವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಅಭ್ಯರ್ಥಿಗಳಿಗೆ ಎಐಸಿಸಿ ಟಿಕೆಟ್‌ ನೀಡಿದೆ. ಮಂಗಳವಾರ ಮತ್ತೆ ಏಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಅಲ್ಲದೇ ಇನ್ನೂ 8 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆಯನ್ನು ಕಾಂಗ್ರೆಸ್‌ ಬಾಕಿ ಉಳಿಸಿಕೊಂಡಿದೆ.

Congress Candidates 4th List: Know the List 7 Candidates For Karnataka Election 2023

ಏಳು ಅಭ್ಯರ್ಥಿಗಳು ಮತ್ತು ಕ್ಷೇತ್ರಗಳು

ಅಭ್ಯರ್ಥಿ ಕ್ಷೇತ್ರ
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಜಗದೀಶ್ ಶೆಟ್ಟರ್
ಹರಿಹರ ನಂದಿಗಾವಿ ಶ್ರೀನಿವಾಸ್ ಅಭ್ಯರ್ಥಿ
ಶ್ರವಣಬೆಳಗೊಳ ಎಂ. ಎಸ್. ಗೋಪಾಲಸ್ವಾಮಿ
ಹುಬ್ಬಳ್ಳಿ-ಧಾರವಾಡ ಪಶ್ಚಿಮ ದೀಪಕ್ ಚಿಂಚೋರೆ
ಚಿಕ್ಕಮಗಳೂರು ಹೆಚ್‌. ಡಿ. ತಮ್ಮಯ್ಯ
ಲಿಂಗಸಗೂರು ದುರ್ಗಪ್ಪ ಎಸ್. ಹೂಲಗೇರಿ
ಶಿಗ್ಗಾಂವಿ ಮೊಹಮ್ಮದ್ ಯೂಸೂಫ್

ಒಟ್ಟು ಕಾಂಗ್ರೆಸ್ ಈವರೆಗೆ ಅಭ್ಯರ್ಥಿಗಳ ನಾಲ್ಕು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಟಿಕೆಟ್ ನಿರಾಕರಣೆ ಹಿನ್ನೆಲೆ ಕಾಂಗ್ರೆಸ್ ಸೇರ್ಪಡೆಯಾದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಈ ಕ್ಷೇತ್ರದಿಂದ 6 ಬಾರಿ ಗೆಲುವು ದಾಖಲು ಮಾಡಿದ ಕೀರ್ತಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರದ್ದು.

ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಜಗದೀಶ್ ಶೆಟ್ಟರ್ 75,794 ಮತಗಳನ್ನು ಪಡೆಯುವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಡಾ. ಮಹೇಶ್ ನಲ್ವಾಡ್ ಅವರು 54,488 ಮತಗಳನ್ನು ಪಡೆದು 2ನೇ ಸ್ಥಾನ ಪಡೆದಿದ್ದರು. ಚುನಾವಣೆ ಬಳಿಕ ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಈ ಮೂಲಕ ಈ ಸಲದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಹುಡುಕಬೇಕಾದ ಅನಿವಾರ್ಯತೆ ಹುಟ್ಟುಹಾಕಿದ್ದರು. ಈಗ ಕಾಂಗ್ರೆಸ್ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕಿಳಿಸಿದೆ.

Congress Candidates 4th List: Know the List 7 Candidates For Karnataka Election 2023

ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳನ್ನು ನೀಡಿದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಗೆದ್ದ ಜಗದೀಶ್‌ ಶೆಟ್ಟರ್ 21ನೇ ಮುಖ್ಯಮಂತ್ರಿಯಾಗಿದ್ದರು. ಎಸ್. ಆರ್. ಬೊಮ್ಮಾಯಿ ಇದೇ ಕ್ಷೇತ್ರದಿಂದ ಗೆದ್ದು 11ನೇ ಮುಖ್ಯಮಂತ್ರಿಯಾಗಿದ್ದರು.ಜಗದೀಶ್ ಶೆಟ್ಟರ್ 1994ರಲ್ಲಿ ಎಸ್. ಆರ್. ಬೊಮ್ಮಾಯಿ ಅವರನ್ನು ಸೋಲಿಸಿದ ಬಳಿಕ ಸತತ ಆರು ಬಾರಿ ಇಲ್ಲಿಂದ ಗೆಲುವು ಸಾಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+