• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬೆಳಗಾವಿ, ಬಸವಕಲ್ಯಾಣ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಅಂತಿಮ!

|

ಬೆಂಗಳೂರು, ಜ. 09: ಬೆಂಗಳೂರಿನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಉಪ ಚುನಾವಣೆಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಶಿರಾ ಹಾಗೂ ಆರ್‌ಆರ್‌ ನಗರ ಉಪ ಚುನಾವಣೆ ಸೋಲಿನ ಸೇಡು ತಿರಿಸಿಕೊಳ್ಳಲು ತುದಿಗಾಲಲ್ಲಿ ನಿಂತಿರುವ 'ಕೈ'ಪಡೆ, ಅಭಿಪ್ರಾಯ ಬೇಧ ಬಿಟ್ಟು ಅಭ್ಯರ್ಥಿಗಳ ಆಯ್ಕೆ ಮಾಡಿದೆ. ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು.

ಅಭ್ಯರ್ಥಿಗಳ ಆಯ್ಕೆಗೆ ನಡೆದ ಪ್ರತ್ಯೇಕ ಸಭೆಗಳಲ್ಲಿ ಆಯಾ ಭಾಗದ ಮುಖಂಡರು ಭಾಗವಹಿಸಿದ್ದರು. ಮಾಜಿ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಮಾಜಿ ಸಚಿವ ಎಂ.ಬಿ. ಪಾಟೀಲ್, ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಮತ್ತಿತರ ಮುಖಂಡರು ಸಭೆಯಲ್ಲಿದ್ದರು. ಹೀಗಾಗಿ ಇಂದಿನ ಸಭೆಯಲ್ಲಿ ಆಯ್ಕೆ ಮಾಡಿರುವ ಅಭ್ಯರ್ಥಿಗಳ ಹೆಸರುಗಳನ್ನು ಹೈಕಮಾಂಡ್ ಅಧಿಕೃತವಾಗಿ ಪ್ರಕಟಿಸಲಿದೆ.

ಮಸ್ಕಿ ಕ್ಷೇತ್ರಕ್ಕೆ ಕಾಯ್ದು ನೋಡುವ ತಂತ್ರ

ಮಸ್ಕಿ ಕ್ಷೇತ್ರಕ್ಕೆ ಕಾಯ್ದು ನೋಡುವ ತಂತ್ರ

ಬೆಳಗಾವಿ ಲೋಕಸಭಾ ಉಪ ಚುನಾವಣೆ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಉಪಚುನಾವಣೆಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್ ಹಿರಿಯ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು. ಆದರೆ ಮಸ್ಕಿ ವಿಧಾನಸಭಾ ಟಿಕೆಟ್ ಹಂಚಿಕೆ ಕುರಿತು ಕಾಂಗ್ರೆಸ್ ನಾಯಕರು ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಮಸ್ಕಿಯಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪಗೌಡ ಪಾಟೀಲ್ ಅವರು ಬಿಜೆಪಿ ಸೇರಿ ಅನರ್ಹ ಶಾಸಕರಾಗಿದ್ದಾರೆ.

ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ತುರವಿಹಾಳ್ ಅವರನ್ನು ಕಾಂಗ್ರೆಸ್‌ಗೆ ಸೆಳೆಯಲು ಪ್ರಯತ್ನಗಳು ನಡೆದಿವೆ. ಹೀಗಾಗಿ ಆ ಒಂದು ಕ್ಷೇತ್ರ ಬಿಟ್ಟು ಉಳಿದೆರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಬೆಳಗಾವಿ ಹಾಗೂ ಬಸವಕಲ್ಯಾಣ ಕ್ಷತ್ರಗಳ ಅಭ್ಯರ್ಥಿಗಳ Exclusive ಪಟ್ಟಿ ಒನ್‌ಇಂಡಿಯಾಕ್ಕೆ ಲಭ್ಯವಾಗಿದೆ.

ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ

ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಾಯಕರು ಒಲವು ತೋರಿದ್ದಾರೆ. ಜೊತೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಕೂಡ ರೇಸ್‌ನಲ್ಲಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮೂಲಕ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಚನ್ನರಾಜ್ ಲಾಬಿ ನಡೆಸಿದ್ದಾರೆ.

ಜೊತೆಗೆ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಕೂಡ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದಾರೆ. ಮೂವರ ಹೆಸರುಗಳನ್ನು ಹೈಕಮಾಂಡ್‌ಗೆ ಕಳುಹಿಸಲು ತೀರ್ಮಾನ ಮಾಡಿದ್ದರೂ , ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಖಚಿತಪಡಿಸಿವೆ.

ಬಸವಕಲ್ಯಾಣ ಕ್ಷೇತ್ರಕ್ಕೆ 'ಕೈ' ಅಭ್ಯರ್ಥಿ

ಬಸವಕಲ್ಯಾಣ ಕ್ಷೇತ್ರಕ್ಕೆ 'ಕೈ' ಅಭ್ಯರ್ಥಿ

ಬೆಳಗಾವಿಯೊಂದಿಗೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದೆ. ಪ್ರಮುಖವಾಗಿ ದಿ. ಮಾಜಿ ಶಾಸಕ ನಾರಾಯಣ ರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ನಾಯಕರು ಚರ್ಚೆ ಮಾಡಿದ್ದಾರೆ. ದಿ. ನಾರಾಯಣರಾವ್ ಅವರ ಸ್ವಚ್ಛ ಆಡಳಿತ ಹಾಗೂ ಅನುಕಂಪದಿಂದ ಗೆಲವು ಸಾಧಿಸಬಹುದು ಎಂಬುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ.

ದಿ. ಮಾಜಿ ಸಿಎಂ ಧರಮ್ ಸಿಂಗ್ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ವಿಜಯ್ ಸಿಂಗ್ ಅವರು ಕೂಡ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಇಬ್ಬರ ಹೆಸರುಗಳನ್ನು ಹೈಕಮಾಂಡ್‌ಗೆ ಕಳುಹಿಸಲು ತೀರ್ಮಾನ ಮಾಡಿದ್ದಾರೆ. ಆದರೂ ಬಸವಕಲ್ಯಾಣ ಕ್ಷೇತ್ರದಲ್ಲಿ ಈ ಬಾರಿ ದಿ. ನಾರಾಯಣ ರಾವ್ ಪತ್ನಿ ಮಲ್ಲಮ್ಮ ಅವರೇ ಕಾಂಗ್ರೆಸ್ ಅಭ್ಯರ್ಥಿ ಆಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಅಭ್ಯರ್ಥಿಗಳ ಆಯ್ಕೆ ಕುರಿತು ಡಿಕೆಶಿ ಹೇಳಿಕೆ

ಅಭ್ಯರ್ಥಿಗಳ ಆಯ್ಕೆ ಕುರಿತು ಡಿಕೆಶಿ ಹೇಳಿಕೆ

ಅಭ್ಯರ್ಥಿಗಳ ಆಯ್ಕೆ ಬಳಿಕ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಬೆಳಗಾವಿ ಮತ್ತು ಬಸವಕಲ್ಯಾಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆದಿದೆ. ಎಲ್ಲರೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆಯುವ ಸಮಾವೇಶದಲ್ಲಿ ಮತ್ತೊಮ್ಮೆ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಸಮಾವೇಶದಲ್ಲಿ ಚರ್ಚಿಸಿದ ನಂತರ ಅಭ್ಯರ್ಥಿಗಳ ಹೆಸರುಗಳನ್ನು ದೆಹಲಿಗೆ ಕಳಿಸುತ್ತೇವೆ. ಟಿಕೆಟ್ ಯಾರಿಗೆ ನೀಡಬೇಕು ಎಂದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಡಿಕೆಶಿ ಹೇಳಿಕೆ ನೀಡಿದ್ದಾರೆ.

English summary
Congress candidates have been finalized for by-elections in an importaint meeting in Bengaluru. Satish Jarakiholi for the Belgaum Lok Sabha constituency, Mallamma, wife of late former MLA Narayanarao, has been elected as Congress candidates. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X