ಬಿಜೆಪಿ ಅವಧಿಯ ಹಗರಣಗಳ ತನಿಖೆ; ಕಾಂಗ್ರೆಸ್ ಸರ್ಕಾರಕ್ಕೆ ಬೊಮ್ಮಾಯಿ ಹಾಕಿದ ಸವಾಲ್‌ ಏನು?

ಬೆಂಗಳೂರು, ಮೇ 22: 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಗರಣ ಹಾಗೂ 40% ಕಮೀಷನ್ ವಿಚಾರವಾಗಿ ಆರೋಪ ಹಾಗೂ ಪ್ರತ್ಯಾರೋಪ ಸಾಕಷ್ಟು ಸದ್ದು ಮಾಡಿತ್ತು. ಇದೀಗ ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ರಚನೆಯಾದ ಬೆನ್ನಲ್ಲೇ ಬಿಜೆಪಿ ಅವಧಿಯ ಹಗರಣಗಳ ತನಿಖೆ ಸರ್ಕಾರ ಮುಂದಾಗಿದೆ.

ಈ ಕುರಿತು ನಿರ್ಗಮಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, 40% ಕಮಿಷನ್ಆರೋಪವನ್ನು ನಮ್ಮ ಮೇಲೆ ಅವರು ಹೊರೆಸಿದ್ದಾರೆ. 40% ಆಗಿದೆ ಅಂತ ಅವರು ಪುರಾವೆ ಸಮೇತ ತೋರಿಸಬೇಕು, ನಾನು ಸ್ಪಷ್ಟವಾಗಿ ಹೇಳಿದ್ದೇನೆ, ದಯವಿಟ್ಟು ಅವರು ಎಲ್ಲ ತನಿಖೆ ಮಾಡಲಿ. ಈ ಸಂಬಂಧ ನಾನು ಆಗ್ರಹ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರ 40% ಆರೋಪ ಕುರಿತ ಎಲ್ಲ ದಾಖಲೆ ಕೊಡಲಿ, ನಾವು 40% ಕಮಿಷನ್ ತಗೋತಿದ್ವಿ ಅಂತ ದಾಖಲೆ ಸಹಿತ ತೋರಿಸಲಿ ಎಂದು ಸವಾಲು ಹಾಕಿದ್ದಾರೆ.

Congress cheated people

ಗುತ್ತಿಗೆದಾರರ ಸಂಘದವರೂ 40% ಕಮೀಷನ್ ಆರೋಪ ಮಾಡಿದ್ದರು. ಈಗ ಅವರ ಸರ್ಕಾರ ಬಂದಿದೆ. 40% ಇಲ್ಲ ಅಂತ ಹೇಳಬಹುದು. ಗುತ್ತಿಗೆದಾರ ಸಂಘದವರು ಇನ್ನು ಮುಂದಿನ ಎಲ್ಲ ಟೆಂಡರ್‌ಗಳಲ್ಲೂ 40% ಕಡಿಮೆ ಹಾಕಲಿ. ಅಂದರೆ ಮಾತ್ರ ನಮ್ಮ ಕಾಲದಲ್ಲಿ 40% ಇತ್ತು ಅಂತ ಆಗುತ್ತದೆ. ಇವತ್ತು ಅಷ್ಟೇ ಮೊತ್ತಕ್ಕೆ ಟೆಂಡರ್ ಹಾಕಿದರೆ, 40% ಈಗಲೂ ಇದೆ ಅಂತ ಆಗುತ್ತದೆ ಎಂದರು.

ಗುತ್ತಿಗೆದಾರರು ಸಂಘದ ಅಧ್ಯಕ್ಷ ಕೆಂಪಣ್ಣ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಇನ್ಮೇಲೆ ಕೆಂಪಣ್ಣ ತಮ್ಮೆಲ್ಲ ಸಂಘದವರಿಗೂ 40% ಕಮ್ಮಿಗೆ ಟೆಂಡರ್ ಹಾಕುವಂತೆ ಹೇಳಬೇಕು. ಕೆಂಪಣ್ಣ ಇದುವರೆಗೆ 40% ದಾಖಲೆ ಕೊಡ್ಲಿಲ್ಲ, ಕೋರ್ಟ್‌ಗೂ ಕೊಡ್ಲಿಲ್ಲ. ನಮ್ಮ ವಿರುದ್ಧ ಅಪಪ್ರಚಾರ ಮಾಡಿದರು. ಕಾಂಗ್ರೆಸ್‌ನವರು ಅದರ ಲಾಭ ತೆಗೆದುಕೊಂಡಿದ್ದಾರೆ. ನಮ್ಮ ಕಾಲದ, ಅವರ ಕಾಲದ ಎಲ್ಲವನ್ನೂ ತನಿಖೆ ಮಾಡಲಿ. ಅದರ ಜೊತೆಗೆ ಪಿಎಸ್ಐ ಪ್ರಕರಣವನ್ನೂ ತನಿಖೆ ಮಾಡಲಿ. ಎಲ್ಲ ಪ್ರಕರಣಗಳ ಸತ್ಯ ಹೊರಗೆ ಬರಲಿ. ನಾವು ಅವರ ಕಾಲದ ಹಗರಣಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದೀವಿ ಎಂದರು.

Congress cheated people

ಗ್ಯಾರಂಟಿ ಸ್ಕೀಂ ಬಗ್ಗೆಯೂ ಬಹಳ ಜನ ಹೇಳಿದ್ದಾರೆ. ಗ್ಯಾರಂಟಿ ಬಗ್ಗೆ ಜನರಿಗೆ ಕಾಂಗ್ರೆಸ್ ಮೋಸ ಮಾಡಿದೆ. ಕಾರ್ಯಕರ್ತರು ಜನರ ಬಳಿ ಹೋಗಿ ಹೇಳಿಲ್ಲ. ಅದರ ಬಗ್ಗೆ ಯಾವುದೋ ಬ್ಯಾಂಕ್ ನಿಂದ, ಕಂಪೆನಿಯಿಂದ ಬಂದವರ ರೀತಿ ಹೋಗಿ ಗ್ಯಾರಂಟಿ ಸ್ಕೀಂ ಬಗ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಡಿಸಿ ಆಫೀಸ್ ನಿಂದ ಅಂತ ಕರೆ ಮಾಡಿ ಸುಳ್ಳು ಹೇಳಿದ್ದಾರೆ. ಯಾವ ಡಿಸಿ ಆಫೀಸ್ ಅಂದರೆ, ಡಿಸ್ಟ್ರಿಕ್ಟ್ ಕಾಂಗ್ರೆಸ್ ಆಫೀಸ್ ಅಂತ ಹೇಳಿದ್ದಾರೆ. ಈ ತರಹ ಮೋಸ ಮಾಡಿ ಗ್ಯಾರಂಟಿ ಸ್ಕೀಂ ಬಗ್ಗೆ ಹೇಳಿದ್ದಾರೆ. ಎಲ್ಲವೂ ಮುಂದೆ ಬೆಳಕಿಗೆ ಬರಲಿದೆ ಎಂದರು.

ಭಾನುವಾರ ಬಿಜೆಪಿ ಆತ್ಮಾವಲೋಕ ಸಭೆ ನಡೆಸಿದ್ದೇವೆ. ಎಲ್ಲ ಜಿಲ್ಲೆಗಳಿಂದ ವರದಿ ತರಿಸಿದ್ದೇವೆ. ಒಂದೊಂದು ಜಿಲ್ಲೆಗಳಲ್ಲಿ ಒಂದೊಂದು ರೀತಿ ಚುನಾವಣೆ ನಡೆದಿದೆ. ಕೆಲವು ಕಡೆ ಲೋಪದೋಷಗಳಾಗಿದ್ದು, ಸರಿಪಡಿಸಲು ತೀರ್ಮಾನ ಮಾಡಿದ್ದೇವೆ. ಮುಂದೆ ಪಕ್ಷ ಪುನರ್ ಸಂಘಟನೆ, ಲೋಕಸಭೆ ಚುನಾವಣೆ ತಯಾರಿ ಬಗ್ಗೆ ತೀರ್ಮಾನ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ನಾಯಕರು, ಪದಾಧಿಕಾರಿಗಳು ರಾಜ್ಯ ಪ್ರವಾಸ ಮಾಡಲು ತೀರ್ಮಾನಿಸಲಾಗಿದೆ. ಚುನಾವಣೆ ಸೋಲಿಗೆ ಹಲವು ಕಾರಣಗಳನ್ನು ಕಂಡುಕೊಂಡಿದ್ದೇವೆ. ಕೆಲವು ಕಡೆ ಅಭ್ಯರ್ಥಿಗಳು ಕಾರಣ, ಕೆಲವು ಕಡೆ ಸಂಘಟನೆ ಕಾರಣ ಎನ್ನುವುದು ತಿಳಿದು ಬಂದಿದೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+