ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯ, ಶಾಸಕರು ರೆಸಾರ್ಟ್‌ಗೆ

ಬೆಂಗಳೂರು, ಜನವರಿ 18 : ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡಿದೆ. ನಾಲ್ವರು ಶಾಸಕರು ಸಭೆಗೆ ಗೈರಾಗಿದ್ದು, 76 ಶಾಸಕರು ಹಾಜರಾಗಿದ್ದರು.

ಶುಕ್ರವಾರ ಸಂಜೆ 4.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಆರಂಭವಾಯಿತು. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸಭೆಯಲ್ಲಿ ಪಾಲ್ಗೊಂಡಿದ್ದರು.

ಮಧ್ಯಾಹ್ನ 3.30ಕ್ಕೆ ಶಾಸಕಾಂಗ ಪಕ್ಷದ ಸಭೆಯನ್ನು ನಿಗದಿ ಮಾಡಲಾಗಿತ್ತು. ಆದರೆ, ಬಿ.ಸಿ.ಪಾಟೀಲ್ ಪುತ್ರಿಯ ವಿವಾಹ ಸಮಾರಂಭ, ಎಚ್.ಕೆ.ಪಾಟೀಲ ಪದಗ್ರಹಣ ಸಮಾರಂಭದ ಕಾರಣದಿಂದಾಗಿ ಒಂದುಗಂಟೆ ತಡವಾಗಿ ಸಭೆ ಆರಂಭವಾಯಿತು.

ಇಬ್ಬರು ಶಾಸಕರು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿ ಗೈರಾಗಿದ್ದರು. ಆದರೆ, ರಮೇಶ್ ಜಾರಕಿಹೊಳಿ ಮತ್ತು ಅಥಣಿ ಶಾಸಕ ಮಹೇಶ್ ಕಮಟಳ್ಳಿ ಅವರು ಯಾವುದೇ ಮಾಹಿತಿ ನೀಡದೆ ಸಭೆಗೆ ಗೈರು ಹಾಜರಾಗಿದ್ದರು.

Congress CLP meet

Jan 18, 2019, 7:31 pm IST

ಎಲ್ಲಾ ಶಾಸಕರು, ಸಚಿವರು ರೆಸಾರ್ಟ್‌ಗೆ ಬರಬೇಕು. ಪಕ್ಷದ ಸಂಕಷ್ಟದಲ್ಲಿದ್ದಾಗ ಯಾವುದೇ ನೆಪ ಹೇಳುವಂತಿಲ್ಲ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಸೂಚನೆ ನೀಡಿದರು.
Jan 18, 2019, 6:57 pm IST

ವಿಧಾನಸೌಧಕ್ಕೆ ಈಗಾಗಲೇ 2 ಬಸ್‌ಗಳು ಆಗಮಿಸಿದ್ದು, ವಿಧಾನಸೌಧದಿಂದ ನೇರವಾಗಿ ರೆಸಾರ್ಟ್‌ ಗೆ ಹೋಗಲಿದ್ದಾರೆ
Jan 18, 2019, 6:56 pm IST

ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡಿದೆ. ಕಾಂಗ್ರೆಸ್‌ನ ಎಲ್ಲಾ ಶಾಸಕರು ಈಗಲ್ ಟನ್ ರೆಸಾರ್ಟ್‌ಗೆ ಹೋಗಲಿದ್ದಾರೆ.
Jan 18, 2019, 6:30 pm IST

ವಿಧಾನಸೌಧದಲ್ಲಿ ನಡೆಯುತ್ತಿದ್ದ ಸಿಎಲ್‌ಪಿ ಸಭೆ ಮುಕ್ತಾಯಗೊಂಡಿದೆ. ಕಾಂಗ್ರೆಸ್‌ನ 76 ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು. 4 ಶಾಸಕರು ಗೈರು ಹಾಜರಾಗಿದ್ದು, ಅದರಲ್ಲಿ ಉಮೇಶ್ ಜಾಧವ್ ಅವರು ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ಪತ್ರ ಬರೆದಿದ್ದರು.
Jan 18, 2019, 5:59 pm IST

ಸಭೆಗೆ ಗೈರಾದ ಶಾಸಕರು * ಚಿಂಚೋಳಿ ಶಾಸಕ ಉಮೇಶ್ ಜಾಧವ್ * ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ * ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ * ಅಥಣಿ ಶಾಸಕ ಮಹೇಶ್ ಕಮಟಳ್ಳಿ
Jan 18, 2019, 5:55 pm IST

ಕೆಜಿಎಫ್ ಕ್ಷೇತ್ರದ ಶಾಸಕಿ ರೂಪಾ ಶಶಿಧರ್ ಅವರು ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿದರು.
Jan 18, 2019, 5:35 pm IST

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ನಾರಾಯಣರಾವ್ ಅವರು ಈಗ ಆಗಮಿಸಿದ್ದು, ಕೆಲವೇ ಹೊತ್ತಿನಲ್ಲಿ ವಿಧಾನಸೌಧಕ್ಕೆ ತೆರಳಲಿದ್ದಾರೆ.
Jan 18, 2019, 5:33 pm IST

ಬಸವಕಲ್ಯಾಣ ಕ್ಷೇತ್ರದ ಶಾಸಕ ಬಿ.ನಾರಾಯಣರಾವ್ ಸಭೆಗೆ ಇನ್ನೂ ಆಗಮಿಸಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ನಾರಾಯಣರಾವ್ ಅವರಿಗೆ ಕರೆ ಮಾಡಿ, ಸಿದ್ದರಾಮಯ್ಯಗೆ ಪೋನ್ ಕೊಟ್ಟರು. 'ನಾರಾಯಣರಾವ್ ಎಲ್ಲಿದ್ದೀಯಾ, ಬೇಗ ಬಾ' ಎಂದು ಸಿದ್ದರಾಮಯ್ಯ ಹೇಳಿದರು.
Jan 18, 2019, 5:29 pm IST

ಸಿದ್ದರಾಮಯ್ಯಗೆ ಪತ್ರ ಬರೆದ ಉಮೇಶ್ ಜಾಧವ್
Jan 18, 2019, 5:26 pm IST

ಶಾಸಕಾಂಗ ಪಕ್ಷದ ಸಭೆಗೆ ಗೈರಾದ ಶಾಸಕರ ವಿರುದ್ಧ ಯಾವ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
Jan 18, 2019, 5:22 pm IST

ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕರಿಗೆ ಎಚ್ಚರಿಕೆ ನೀಡಲಾಗಿತ್ತು.
Jan 18, 2019, 5:20 pm IST

ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರು ಇಂದು ಬೆಳಗ್ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನಲ್ಲಿಯೇ ಅವರು ಇದ್ದಾರೆ. ಆದರೆ, ಶಾಸಕಾಂಗ ಪಕ್ಷದ ಸಭೆಗೆ ಇನ್ನೂ ಆಗಮಿಸಿಲ್ಲ.
Jan 18, 2019, 5:18 pm IST

ಕೆಜಿಎಫ್ ಕ್ಷೇತ್ರದ ಕಾಂಗ್ರೆಸ್ ಶಾಸಕಿ ರೂಪಾ ಶಶಿಧರ್ ಶಾಸಕಾಂಗ ಪಕ್ಷದ ಸಭೆಗೆ ಇನ್ನೂ ಆಗಮಿಸಿಲ್ಲ. ರೂಪಾ ಶಶಿಧರ್ ಹಿರಿಯ ನಾಯಕ ಕೆ.ಎಚ್.ಮುನಿಯಪ್ಪ ಪುತ್ರಿ
Jan 18, 2019, 5:14 pm IST

ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್, ವಿಧಾನ ಪರಿಷತ್ ಸದಸ್ಯೆ ಡಾ.ಜಯಮಾಲಾ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿದರು.
Jan 18, 2019, 5:12 pm IST

ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಶೃಂಗೇರಿ ಶಾಸಕ ರಾಜೇಗೌಡ, ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಸಭೆಗೆ ಆಗಮಿಸಿದರು.
Jan 18, 2019, 5:09 pm IST

ಚಿಂಚೋಳಿ ಶಾಸಕ ಉಮೇಶ್ ಜಾಧವ್ ತುರ್ತು ಕಾರ್ಯದ ಹಿನ್ನಲೆಯಲ್ಲಿ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಫ್ಯಾಕ್ಸ್ ಮೂಲಕ ಪತ್ರವನ್ನು ರವಾನಿಸಿದ್ದಾರೆ.
Jan 18, 2019, 5:08 pm IST

ವಿಧಾನಸೌಧದಲ್ಲಿ ಹಣ ಪತ್ತೆ ಪ್ರಕರಣದ ಬಳಿಕ ನಾಪತ್ತೆಯಾಗಿರುವ ಚಾಮರಾಜನಗರ ಕ್ಷೇತ್ರದ ಶಾಸಕ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗ ಶೆಟ್ಟಿ ಅವರು ಶಾಸಕಾಂಗ ಸಭೆಗೆ ಇನ್ನೂ ಆಗಮಿಸಿಲ್ಲ.
Jan 18, 2019, 5:06 pm IST

ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಬಿ.ಟಿ.ಎಂ.ಕ್ಷೇತ್ರದ ಶಾಸಕ ರಾಮಲಿಂಗಾ ರೆಡ್ಡಿ ಸಭೆಗೆ ಆಗಮಿಸಿದರು.
Jan 18, 2019, 5:04 pm IST

ಪುತ್ರಿ ಸೃಷ್ಠಿ ಪಾಟೀಲ್ ವಿವಾಹದಲ್ಲಿ ಬ್ಯುಸಿಯಾಗಿದ್ದ ಹಿರೆಕೇರೂರು ಶಾಸಕ ಬಿ.ಸಿ.ಪಾಟೀಲ್ ಸಭೆಗೆ ಆಗಮಿಸಿದರು.
Jan 18, 2019, 4:56 pm IST

ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರು ಗೈರಾಗಿರುವ ಶಾಸಕರಿಗೆ ಖುದ್ದಾಗಿ ದೂರವಾಣಿ ಕರೆ ಮಾಡುತ್ತಿದ್ದಾರೆ.
Jan 18, 2019, 4:55 pm IST

ಸಭೆಗೆ ಇನ್ನೂ ಆಗಮಿಸದವರು ಚಿಂಚೋಳಿ ಶಾಸಕ ಉಮೇಶ್ ಜಾಧವ್, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕಮಟಳ್ಳಿ
Jan 18, 2019, 4:54 pm IST

ಸಂಸದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ ಅವರು ಸಭೆಗೆ ಆಗಮಿಸಿದರು.
Jan 18, 2019, 4:51 pm IST

ಒಂದೂವರೆ ಗಂಟೆ ತಡವಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+