ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಿಜೆಪಿಯ ಟೆಂಡರ್ ಪರಿಶೀಲನೆ: ಗುತ್ತಿಗೆದಾರರು, ಅಧಿಕಾರಿಗಳಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು ಜನವರಿ 08: ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಟೆಂಡರ್​​ ಪರಿಶೀಲನೆ ಮಾಡುತ್ತೇವೆ. ಅಧಿಕಾರಿಗಳು ಯಾರದ್ದೋ ಏಜೆಂಟ್‌ಗಳಾಗಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ಮತ್ತು ಮಹಾದಾಸೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಅವಸವಸರವಾಗಿ ಟೆಂಡರ್ ಕರೆಯಲು ಹೊರಟಿದೆ. ನಮ್ಮ ಸರ್ಕಾರ ಬಂದ ಕೂಡಲೇ ಟೆಂಡರ್​​ ಪರಿಶೀಲನೆ ಮಾಡುತ್ತೇವೆ ಎಂದು ವಿವಿಧ ಯೋಜನೆಗಳ ಗುತ್ತಿಗೆದಾರು ಅಧಿಕಾರಿಗಳಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಜೊತೆಗೆ ಅಧಿಕಾರಿಗಳು ಏಜೆಂಟ್​ ರೀತಿಯಲ್ಲಿ ಕೆಲಸ ಮಾಡಬೇಡಿ ಎಂದು ತಿಳಿಸಿದ್ದಾರೆ. ಕರ್ನಾಟಕ ಸ್ತಬ್ಧಚಿತ್ರಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಲಾಗಿದೆ. ಈ ಕುರಿತು ರಾಜ್ಯದ 25 ಸಂಸದರನ್ನು ಕರೆದು ಒಂದು ದಿನವೂ ಚರ್ಚೆ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಗೌರವವಿಲ್ಲ ಎಂದರು.

Congress come to power we will check all tenders DK Shivakumar Warning to Contractors, officers.

ಕರ್ನಾಟಕದಿಂದ ಕೇಂದ್ರಕ್ಕೆ ಹೆಚ್ಚಿನ ಸಂಖ್ಯೆಯ ಪ್ರತಿನಿಧಿಗಳನ್ನು ಜನರು ಪ್ರತಿನಿಧಿಸಿ ಕಳುಹಿಸಿದ್ದಾರೆ. ನಮ್ಮ ರಾಜ್ಯದ ಸಮಸ್ಯೆ ಬಗ್ಗೆ ಇಲ್ಲಿಂದ ನಿಯೋಗ ಕರೆದೊಯ್ದು ಮಾತಾಡಬಹುದಿತ್ತು. ಆದರೆ ಮಾತನಾಡಿಲ್ಲ. ಉತ್ತರ ಕರ್ನಾಟಕದ ಜೀವನಾಡಿ ಮಹದಾಯಿ ವಿಚಾರವಾಗಿಯೂ ಕರೆದುಕೊಂಡು ಹೋಗಬಹುದಿತ್ತು.

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಬಗ್ಗೆ ಒಂಬತ್ತನೆ ಶೆಡ್ಯೂಲ್​ನಲ್ಲಿ ಸೇರಿಸಲು ಅವರಿಗೆ ಆಗಿಲ್ಲ. ದಲಿತರಿಗೆ ಯಾವ ರೀತಿ ಮೋಸ ಮಾಡುತ್ತಿದ್ದಾರೆ ಎಂದು ಇವುಗಳನ್ನು ಗಮನಿಸದರೆ ಸಾಕು ಎಲ್ಲವು ಅರ್ಥವಾಗುತ್ತಿದೆ. ಈ ಡಬಲ್ ಇಂಜಿನ್ ಸರ್ಕಾರ ಕಿತ್ತೊಗೆಯಬೇಕು ಎಂದು ಡಿಕೆ ಶಿವಕುಮಾರ್ ಕರೆ ನೀಡಿದರು.

ಸಿಎಂ ರೇಸ್‌ನಲ್ಲಿ ಪಟ್ಟಿಯಲ್ಲಿ ಹಲವರು

ಭಾನುವಾರ ದೊಡ್ಡ ಬಳ್ಳಾಪುರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಆರ್. ಅಶೋಕ್ ಅವರು ಕಾಂಗ್ರೆಸ್​​ ಅಧಿಕಾರಕ್ಕೆ ಬರುತ್ತೇವೆ ಎಂದು ತಿರುಕನ ಕನಸು ಕಾಣುತ್ತಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್​​ ನಾಯಕರು ವಿರೋಧ ಪಕ್ಷದಲ್ಲಿ ಇರುವುದಕ್ಕೂ ಲಾಯಕ್ಕಿಲ್ಲ. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನ ಸಂಬಂಧ ನಾಯಕರಲ್ಲಿ ಒಳ ಜಗಳಗಳು ಇವೆ.

Congress come to power we will check all tenders DK Shivakumar Warning to Contractors, officers.

ಕಾಂಗ್ರೆಸ್ ಮುಖಂಡರಾದ ಡಾ.ಜಿ.ಪರಮೇಶ್ವರ್ ಸಹ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎನ್ನುತ್ತಾರೆ. ಜ್ಯೋತಿಷಿಗಳು ಹೇಳಿದ್ದಾರೆ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಿದ್ದಾರೆ. ಈಗ ಮಲ್ಲಿಕಾರ್ಜುನ ಖರ್ಗೆಯವರು ಕೂಡ ಮುಖ್ಯಮಂತ್ರಿ ಪಟ್ಟಿಯಲ್ಲಿದ್ದಾರೆ. ಕಾಂಗ್ರೆಸ್​​ನಾಯಕರಿಗೆ ಪಕ್ಷವೇ ಮೊದಲು. ಆದರೆ ಬಿಜೆಪಿಗೆ ದೇಶ ಮೊದಲು ಎಂದು ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+