ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಸಮೀಕ್ಷೆ ನಡೆಸಿದ ಕಾಂಗ್ರೆಸ್- ಗೆಲ್ಲುವ ಕ್ಷೇತ್ರಗಳೆಷ್ಟು ಗೊತ್ತಾ?
ಬೆಂಗಳೂರು, ಜನವರಿ 12: ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಸರ್ಕಾರದ ರಚಿಸಿರುವ ಕಾಂಗ್ರೆಸ್ ಗೆ ಮುಂದಿನ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಈಗಾಗಲೇ ಅಭ್ಯರ್ಥಿಗಳ ಆಯ್ಕೆ, ಚುನಾವಣಾ ತಯಾರಿ ಹಾಗೂ ಹೆಚ್ಚು ಸ್ಥಾನಗಳನ್ನ ಗೆಲ್ಲಲ್ಲು ಬೇಕಾದ ತಂತ್ರಗಾರಿಕೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನಡೆಸುತ್ತಿದ್ದಾರೆ.
ಇತ್ತ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್ ಮುಂದಿನ ಲೋಕಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಠಕ್ಕರ್ ಕೊಡುವ ಮೂಲಕ 28 ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ತಂತ್ರಗಾರಿಕೆಯನ್ನ ನಡೆಸಿದೆ. ಹೀಗಾಗಿ ಬಿಜೆಪಿ ಹಾಗೂ ಜೆಡಿಎಸ್ ತಂತ್ರಗಾರಿಕೆಗೆ ಪ್ರತಿತಂತ್ರವಾಗಿ ರಾಜ್ಯ ಕಾಂಗ್ರೆಸ್ ನಾಲ್ಕು ತಂಡಗಳು ಎರಡು ಹಂತದ ಸಮೀಕ್ಷೆಯನ್ನು ಈಗಾಗಲೇ ಪೂರ್ಣಗೊಳಿಸಿದೆ.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಕೇರಳ ಮೂಲದ ಸಂಸ್ಥೆಯೊಂದು ಪ್ರತ್ಯೇಕವಾಗಿ ಸಮೀಕ್ಷೆಯನ್ನು ನಡೆಸಿದೆ. ಈಗಾಗಲೇ ಪಂಚ ಗ್ಯಾರಂಟಿಗಳನ್ನ ನೀಡುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪರವಾದ ಅಲೆ ರಾಜ್ಯದಲ್ಲಿದೆ. ಹೀಗಾಗಿ ಕನಿಷ್ಠ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿರುವ ಕಾಂಗ್ರೆಸ್ ಸಮೀಕ್ಷೆ ನಡೆಸಿದ್ದು, ಆ ಸಮೀಕ್ಷಾ ವರದಿಗಳನ್ನು ನೋಡಿದ ನಂತರ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದ 16 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ಹೊಂದಿದೆ ಎಂದು ಪಕ್ಷದ ಮೂಲಕಗಳು ತಿಳಿಸಿವೆ ಎನ್ನಲಾಗಿದೆ.
ಕೇರಳ ಮೂಲದ ಸಮೀಕ್ಷೆಯಿಂದ ಕಾಂಗ್ರೆಸ್ ನಾಯಕರಿಗೆ ಇನ್ನೂ ಹೆಚ್ಚಿನ ಕ್ಷೇತ್ರಗಳನ್ನ ನಾವು ಸುಲಭವಾಗಿ ಗೆಲ್ಲಬಹುದು ಎಂಬ ವಿಶ್ವಾಸ ಬಂದಿದ್ದು, ಆಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ರಾಜ್ಯದ ಜನತೆಯ ಒಲವು ಹಾಗೂ ಕ್ಷೇತ್ರದಲ್ಲಿ ಆ ಅಭ್ಯರ್ಥಿಯ ಮೇಲೆ ಜನರ ಭಾವನೆ ಏನು ಎಂಬ ಬಗ್ಗೆಯೂ ಕಾಂಗ್ರೆಸ್ ನಾಯಕರು ಸಮೀಕ್ಷೆಯನ್ನ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇನ್ನೂ ರಾಜ್ಯದಲ್ಲಿ ಜನರ ಒಲವು ಯಾರ ಕಡೆ ಇದೆ ಎಂಬ ನಿಟ್ಟಿನಲ್ಲಿ ಈ ಪ್ರತ್ಯೇಕ ಸಮೀಕ್ಷೆಗಳನ್ನು ನಡೆಸಲಾಗಿದೆ. ಎಐಸಿಸಿಯ ತಂಡ, ಸಿಎಂ ಸಿದ್ದರಾಮಯ್ಯ ಅವರ ತಂಡ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಂಡ ಪ್ರತ್ಯೇಕವಾಗಿ ಸಮೀಕ್ಷೆಯನ್ನು ನಡೆಸಿ ವರದಿ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ ಸಚಿವರನ್ನ ಕಣಕ್ಕಿಳಿಸುವ ಕುರಿತು ಈಗಾಗಲೇ ಹಲವು ಮಂತ್ರಿಗಳು ನಿರಾಸಕ್ತಿಯನ್ನ ತೋರಿದ್ದು, ವಿವಿಧ ಹಂತದಲ್ಲಿ ಇಂತಹ ಸಮೀಕ್ಷೆಗಳನ್ನು ನಡೆಸಿ ಜನ ಮನ ಅರಿತುಕೊಳ್ಳಲು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದೆ.
ಕಾಂಗ್ರೆಸ್ ಗೆ ಹಲವು ಲೋಕಸಭಾ ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಯ ಕೊರತೆ ಉಂಟಾಗಿದ್ದು, ಗೆಲ್ಲುವ ಕುದುರೆಗೆ ಮಣೆ ಹಾಕುವ ನಿಟ್ಟಿನಲ್ಲಿ ಮಾಹಿತಿ ಸಂಗ್ರಹಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಅಲ್ಲದೇ ಸಮೀಕ್ಷೆಗಳಲ್ಲಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಗೆಲ್ಲುವ ಕ್ಷೇತ್ರಗಳ ಬಗ್ಗೆಯೂ ಸಮೀಕ್ಷೆ
2019 ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್, ಈ ಬಾರೀ ಯಾವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಸಂಗ್ರಹ ಮಾಡಲಾಗಿದೆ. ಮೊದಲ ಹಂತದ ಸಮೀಕ್ಷೆಯಲ್ಲಿ ರಾಜ್ಯದಲ್ಲಿ 6 ರಿಂದ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆಗಳಿವೆ. ಇನ್ನೂ ಎರಡನೇ ಹಂತದ ಸಮೀಕ್ಷೆಯಲ್ಲಿ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಸಾಧ್ಯತೆ ಇದೆ ಎಂಬ ವರದಿ ನೀಡಿದೆ. ಆದರೆ ಮುಂದಿನ ದಿನಗಳಲ್ಲಿ 16 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂಬ ನಿರೀಕ್ಷೆಯನ್ನು ರಾಜ್ಯದಲ್ಲಿ ಕಾಂಗ್ರೆಸ್ ಹೊಂದಿದೆ.












Click it and Unblock the Notifications