ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಬೆಂಗಳೂರಿಗೆ ಅಮಿತ್ ಶಾ, ವ್ಯಂಗ್ಯವಾಡಿದ ಕಾಂಗ್ರೆಸ್

|
Google Oneindia Kannada News

ಬೆಂಗಳೂರು, ಆ.03: ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವುದನ್ನು ವ್ಯಂಗ್ಯವಾಡಿರುವ ಕರ್ನಾಟಕ ಕಾಂಗ್ರೆಸ್, ಕದ್ದುಮುಚ್ಚಿ ರಾಜ್ಯಕ್ಕೆ ಆಗಮಿಸುತ್ತಿರುವುದರ ಹಿಂದಿನ ಅಜೆಂಡಾವೇನು? ಎಂದು ಪ್ರಶ್ನಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್ 4ರ ಗುರುವಾರ ನಡೆಯಲಿರುವ ಸಿಐಐಎನ ಸಾಸ್ಕೃತಿಕ ವಿಭಾಗದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬುಧವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಲವು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದೆ.

Congress criticized home minister Amit Shah visit to Bengaluru

"ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕದ ಧಿಡೀರ್ ಭೇಟಿ ಹಿಂದಿರುವ ಉದ್ದೇಶವೇನು..? ಕಾನೂನು ಅವ್ಯವಸ್ಥೆಯನ್ನ ಕಣ್ತುಂಬಿಕೊಳ್ಳುವುದಕ್ಕೋ?. ICU ನಲ್ಲಿರುವ ಕರ್ನಾಟಕ ಬಿಜೆಪಿ ಕೊನೆಯ ದರ್ಶನ ಮಾಡುವುದಕ್ಕೋ?" ಎಂದು ಕೇಳಿದೆ.

ಮುಂದುವರೆದು, 'ಬಿಜೆಪಿಗೆ ಇನ್ನಷ್ಟು 'ಶವ ರಾಜಕೀಯ'ದ ಟಾಸ್ಕ್ ಕೊಡುವುದಕ್ಕೋ..? ಕದ್ದುಮುಚ್ಚಿ ಆಗಮಿಸುತ್ತಿರುವುದರ ಹಿಂದಿನ ಅಜೆಂಡಾವೇನು..?" ಎಂದು ರಾಜ್ಯದಲ್ಲಿ ನಡೆದ ಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ಪ್ರಶ್ನಿಸಿದೆ.

ಗುರುವಾರ ಬೆಂಗಳೂರಿನ ಖಾಸಗಿ ಹೋಟಲ್‌ನಲ್ಲಿ ನಡೆಯಲಿರುವ 'ಸಂಕಲ್ಪದಿಂದ ಸಿದ್ಧಿ' (ಸಂಕಲ್ಪ್ ಸೇ ಸಿದ್ಧಿ) ಸಮಾವೇಶದ ಮೂರನೇ ಆವೃತ್ತಿಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಅವರು ಬುಧವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದರು.

Recommended Video

ಏಳು ಕೋಟಿ ಕನ್ನಡಿಗನ ಗಾಡಿಗೆ ಕನ್ನಡಿಗರೆಲ್ಲರೂ ಫಿದಾ | OneIndia Kannada

ಕೇಂದ್ರ ಸಚಿವಾಲಯ ಮಾಹಿತಿ ಪ್ರಕಾರ, ಅಮಿತ್ ಶಾ ಬುಧವಾರ ರಾತ್ರಿ 8 ಗಂಟೆಗೆ ವಿಮಾನ ಮೂಲಕ ಹೊರಟು ರಾತ್ರಿ ಸುಮಾರು 11 ಗಂಟೆ ವೇಳೆಗೆ ಬೆಂಗಳೂರು ಎಚ್‌ಎಎಲ್ ಬಂದು ತಲುಪಲಿದ್ದಾರೆ. ನಂತರ ರೇರ್ಸ್‌ಕೋರ್ಸ್ ರಸ್ತೆಯ ತಾಜ್‌ವೆಸ್ಟೆಂಡ್‌ ನಲ್ಲಿ ತಂಗಲಿದ್ದಾರೆ. ಮರುದಿನ ಬೆಳಗ್ಗೆ 11 ಗಂಟೆಯ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನದ ನಂತರ ದೆಹಲಿಗೆ ವಾಪಸ್‌ ಆಗಲಿದ್ದಾರೆ ಎಂಬ ಮಾಹಿತಿ ಇದೆ.

English summary
Karnataka Congress criticized the Union Home Minister Amit Shah visit to Karnataka on Wednesday. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X