ಬಹುಮತದತ್ತ ಕಾಂಗ್ರೆಸ್: ಶುರುವಾಯ್ತು ಮುಖ್ಯಮಂತ್ರಿ ಚರ್ಚೆ- 50:50 ಫಾರ್ಮುಲಾ ಮುಂದಿಟ್ಟ ನಾಯಕರು?
ಬೆಂಗಳೂರು, ಮೇ 13: ಕಾಂಗ್ರೆಸ್‌ನಿಂದ ಪ್ರಬಲ ಸವಾಲನ್ನು ಎದುರಿಸುತ್ತಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ಹಿಡಿತವನ್ನು ಕಳೆದುಕೊಳ್ಳುವ ಮುನ್ಸೂಚನೆ ಇದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆಯು ನಡೆಯುತ್ತಿದೆ. ಈ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಭಾರೀ ಮುನ್ನಡೆ ಕಾಯ್ದುಕೊಂಡಿದೆ.
ಎಕ್ಸಿಟ್ ಪೋಲ್‌ಗಳು ಇದು ನಿಕಟ ಸ್ಪರ್ಧೆಯಾಗಲಿದೆ ಎಂದು ಸೂಚಿಸಿವೆ. ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತದೆ. ಆದರೆ 113 ಸ್ಥಾನಗಳ ಗಡಿಯನ್ನು ದಾಟಲು ಆಗುವುದಿಲ್ಲ ಎಂದು ಹೇಳಿವೆ. ಕರ್ನಾಟಕದಲ್ಲಿ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಶೇ.73.19ರಷ್ಟು ಮತದಾನವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡಾ 85.56 ರಷ್ಟು ಮತದಾನವಾಗಿದೆ ಮತ್ತು ರಾಜ್ಯ ರಾಜಧಾನಿ ಬೆಂಗಳೂರಿನ ದಕ್ಷಿಣ ವಿಭಾಗದಲ್ಲಿ ಕನಿಷ್ಠ ಶೇಕಡಾ 52.33 ರಷ್ಟು ಮತದಾನವಾಗಿದೆ.
ಮತದಾನ ಪ್ರಕ್ರಿಯೆಯಲ್ಲಿ ಕಾಂಗ್ರೆಸ್‌ಗೆ ಭಾರೀ ಮುನ್ನಡೆ ಬಂದಿದೆ. ಈ ಕಾರಣ, ಕಾಂಗ್ರೆಸ್ ಪಕ್ಷವು ಅಧಿಕಾರದ ಗದ್ದುಗೆ ಹಿಡಿಯಬಹುದು ಎಂದು ಹೇಳಲಾಗುತ್ತಿದೆ. ಆದರೆ, ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಭಾರೀ ಜನಪ್ರಿಯತೆ ಹೊಂದಿದ್ದು. ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕೆಂದು ಅವರ ಬೆಂಬಲಿಗರು ಹೇಳಿದ್ದಾರೆ. ಆದರೆ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಭಾರೀ ಯತ್ನ ನಡೆಸಿದ್ದ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕೆಂಬ ಬೇಡಿಕೆಯೂ ಇದೆ.
ಈ ಹಿನ್ನೆಲೆಯಲ್ಲಿ ಐದು ವರ್ಷದ ಅವಧಿಯ ಸರ್ಕಾರದಲ್ಲಿ ಸಿದ್ದರಾಮಯ್ಯನವರಿಗೆ ಎರಡೂವರೆ ವರ್ಷ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಎರಡುವರೆ ವರ್ಷಗಳನ್ನು ನೀಡಬೇಕೆಂಬ ಮನವಿಯನ್ನು ನಾಯಕರು ಮಾಡಿದ್ದಾರೆ ಎನ್ನಲಾಗಿದೆ. 50:50 ಫಾರ್ಮುಲಾವನ್ನು ಕಾಂಗ್ರೆಸ್ ಕಂಡುಕೊಳ್ಳುತ್ತಿದೆ ಎಂದು ಮೂಲಗಳು ಹೇಳಿವೆ.












Click it and Unblock the Notifications