ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ನಿಂದ ಉತ್ತರ, ದಕ್ಷಿಣ ಕರ್ನಾಟಕದಲ್ಲಿ 'ಐಕ್ಯತಾ ಸಮಾವೇಶ'

|
Google Oneindia Kannada News

ಬೆಂಗಳೂರು, ನವೆಂಬರ್ 22; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ರಾಜ್ಯದ ಪ್ರಮುಖ ಮೂರು ಪಕ್ಷಗಳು ಯಾತ್ರೆಗಳ ಮೂಲಕ ಚುನಾವಣಾ ಪ್ರಚಾರ ಕೈಗೊಂಡಿವೆ. ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಉತ್ಸಾಹದಲ್ಲಿರುವ ಕಾಂಗ್ರೆಸ್ ಪಕ್ಷ ಸಮಾವೇಶಗಳನ್ನು ನಡೆಸುವ ತೀರ್ಮಾನ ಕೈಗೊಂಡಿದೆ.

ಕಾಂಗ್ರೆಸ್ ನಾಯಕರು ಭಾನುವಾರ ನಡೆಸಿದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತಗಳನ್ನು ಸೆಳೆಯಲು ಬೃಹತ್ ಸಮಾವೇಶ ನಡೆಸಬೇಕು ಎಂದು ಮಾಜಿ ಸಚಿವ ಡಾ. ಜಿ. ಪರಮೇಶ್ವರ ಪ್ರಸ್ತಾಪಿಸಿದ್ದರು.

ಯಮಕನಮರಡಿ: ಜಾರಕಿಹೊಳಿ ಹೇಳಿಕೆ ವಿರೋಧಿಸಿ ಹಿಂದೂ ಸಂಘಟನೆಗಳ ಸಮಾವೇಶ ಯಮಕನಮರಡಿ: ಜಾರಕಿಹೊಳಿ ಹೇಳಿಕೆ ವಿರೋಧಿಸಿ ಹಿಂದೂ ಸಂಘಟನೆಗಳ ಸಮಾವೇಶ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಈ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರು. ಎಸ್‌ಸಿ ಮತ್ತು ಎಸ್‌ಟಿ ಎರಡೂ ಸಮುದಾಯಗಳನ್ನು ಸೇರಿಸಿ, 'ಐಕ್ಯತಾ ಸಮಾವೇಶ' ಎಂಬ ಹೆಸರಿನಲ್ಲಿ ಸಮಾವೇಶಗಳನ್ನು ನಡೆಸಲು ತೀರ್ಮಾನಿಸಲಾಯಿತು.

ಮೀಸಲಾತಿ ವಿಚಾರವಾಗಿ ಮೊದಲ ಹೆಜ್ಜೆ ಇಟ್ಟಿದ್ದೇ ಮೈತ್ರಿ ಸರ್ಕಾರ: ಸತೀಶ್ ಜಾರಕಿಹೊಳಿ ಮೀಸಲಾತಿ ವಿಚಾರವಾಗಿ ಮೊದಲ ಹೆಜ್ಜೆ ಇಟ್ಟಿದ್ದೇ ಮೈತ್ರಿ ಸರ್ಕಾರ: ಸತೀಶ್ ಜಾರಕಿಹೊಳಿ

ಈಗಾಗಲೇ ಬಿಜೆಪಿ ಶನಿವಾರ ಬಳ್ಳಾರಿಯಲ್ಲಿ ಎಸ್‌ಸಿ ಸಮಾವೇಶ ನಡೆಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಮೈಸೂರು ಮತ್ತು ಮಂಗಳೂರಿನಲ್ಲಿಯೂ ಸಮಾವೇಶ ನಡೆಸಲು ಪಕ್ಷ ತೀರ್ಮಾನಿಸಿದೆ. ಈಗ ಕಾಂಗ್ರೆಸ್ ಪಕ್ಷವೂ ರಾಜ್ಯದ ಎರಡು ಕಡೆಗಳಲ್ಲಿ ಸಮಾವೇಶ ನಡೆಸಲು ಯೋಜನೆ ರೂಪಿಸುತ್ತಿದೆ.

ಮೀಸಲಾತಿ ಬಗ್ಗೆ ಹೇಳಿಕೆ ನೀಡುವಾಗ ಜಾಗ್ರತೆ: ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ಎಚ್ಚರಿಕೆಮೀಸಲಾತಿ ಬಗ್ಗೆ ಹೇಳಿಕೆ ನೀಡುವಾಗ ಜಾಗ್ರತೆ: ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ಎಚ್ಚರಿಕೆ

ದಕ್ಷಿಣ ಮತ್ತು ಉತ್ತರ ಕರ್ನಾಟಕದಲ್ಲಿ

ದಕ್ಷಿಣ ಮತ್ತು ಉತ್ತರ ಕರ್ನಾಟಕದಲ್ಲಿ

ಕರ್ನಾಟಕ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತಗಳನ್ನು ಸೆಳೆಯಲು ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ಒದೊಂದು ಸಮಾವೇಶಗಳನ್ನು ನಡೆಸಲು ತೀರ್ಮಾನಿಸಿದೆ. ಡಿಸೆಂಬರ್ 12ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮೊದಲೇ ಸಮಾವೇಶಗಳನ್ನು ನಡೆಸಲಾಗುತ್ತದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರನ್ನು ಸಮಾವೇಶಗಳಿಗೆ ಆಹ್ವಾನಿಸಲು ಸಹ ನಾಯಕರು ಒಪ್ಪಿಗೆ ನೀಡಿದ್ದಾರೆ. ಸಮಾವೇಶಗಳ ದಿನಾಂಕ ಇನ್ನೂ ನಿಗದಿಯಾಗಬೇಕಿದೆ.

ಎಲ್ಲಿ ನಡೆಯಲಿದೆ ಕಾಂಗ್ರೆಸ್‌ನ ಸಮಾವೇಶ

ಎಲ್ಲಿ ನಡೆಯಲಿದೆ ಕಾಂಗ್ರೆಸ್‌ನ ಸಮಾವೇಶ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಎರಡೂ ಸಮುದಾಯಗಳನ್ನು ಸೇರಿಸಿ 'ಐಕ್ಯತಾ ಸಮಾವೇಶ'ದ ಹೆಸರಿನಲ್ಲಿ ಎರಡು ಸಮಾವೇಶಗಳನ್ನು ನಡೆಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ.

ದಕ್ಷಿಣ ಕರ್ನಾಟಕ ಭಾಗದ ಸಮಾವೇಶ ಬೆಂಗಳೂರು, ತುಮಕೂರು ಅಥವ ಚಿತ್ರುರ್ಗದಲ್ಲಿ ನಡೆಯಲಿದೆ. ಉತ್ತರ ಕರ್ನಾಟಕ ಭಾಗದ ಸಮಾವೇಶ ಕಲಬುರಗಿ ಅಥವ ರಾಯಚೂರಿನಲ್ಲಿ ನಡೆಸಲು ಚರ್ಚೆ ನಡೆದಿದೆ. ಸಮಾವೇಶಗಳು ನಡೆಯುವ ಸ್ಥಳ ಇನ್ನೂ ಅಂತಿಮಗೊಳಿಸಿಲ್ಲ.

51 ಮೀಸಲು ವಿಧಾನಸಭಾ ಕ್ಷೇತ್ರಗಳು

51 ಮೀಸಲು ವಿಧಾನಸಭಾ ಕ್ಷೇತ್ರಗಳು

ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 51 ಮೀಸಲು ಕ್ಷೇತ್ರಗಳಾಗಿವೆ. ಇವುಗಳಲ್ಲಿ ಪರಿಶಿಷ್ಟ ಜಾತಿಗೆ 36 ಕ್ಷೇತ್ರಗಳು ಮತ್ತು 15 ಕ್ಷೇತ್ರಗಳು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿವೆ. ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕಾದರೆ ಈ ಕ್ಷೇತ್ರಗಳಲ್ಲಿ ಪ್ರಾಬಲ್ಯ ಸಾಧಿಸುವುದು ಅನಿವಾರ್ಯವಾಗಿದೆ. ಆದ್ದರಿಂದ ವಿವಿಧ ಪಕ್ಷಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಮತಗಳನ್ನು ಸೆಳೆಯಲು ತಂತ್ರ ರೂಪಿಸುತ್ತಿವೆ. ಅದರಲ್ಲೂ ಬಿಜೆಪಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಿದ ಬಳಿಕ ಮತಗಳಿಕೆ ಮಾಡುವುದು ಹೇಗೆ? ಎಂದು ಪಕ್ಷಗಳು ಯೋಜನೆ ರೂಪಿಸುತ್ತಿವೆ.

ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳು

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈಗಾಗಲೇ #ದಲಿತವಿರೋಧಿಬಿಜೆಪಿ ಎಂಬ ಹ್ಯಾಷ್ ಟ್ಯಾಗ್ ಬಳಕೆ ಮಾಡಿಕೊಂಡು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಎಸ್ ಸಿಎಸ್ ಪಿ/ಟಿಎಸ್ ಪಿ ಯೋಜನೆಗೆ ಮೀಸಲಿರಿಸಿದ್ದ ಹಣದಲ್ಲಿ ರೂ.7885.32 ಕೋಟಿಯನ್ನು ನೀರಾವರಿ, ನಗರಾಭಿವೃದ್ದಿ ಮತ್ತು ಮೂಲಸೌಕರ್ಯ ಅಭಿವೃದ್ದಿಗೆ ವ್ಯಯ ಮಾಡಿರುವ ಬಿಜೆಪಿ ಸರ್ಕಾರ ದಲಿತ ಸಮುದಾಯದ ಬೆನ್ನಿಗೆ ಇರಿದಿದೆ ಎಂದು ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.

2008-09 ರಿಂದ 2012-13ರ ಅವಧಿಯ 5 ವರ್ಷಗಳಲ್ಲಿ ಬಿಜೆಪಿ ಸರ್ಕಾರ ಪರಿಶಿಷ್ಟಜಾತಿ/ ಪಂಗಡದ ಕಲ್ಯಾಣಕ್ಕೆ ನೀಡಿದ್ದ ಹಣ ಕೇವಲ ರೂ. 22,261 ಕೋಟಿ. ನಮ್ಮ ಸರ್ಕಾರ ಐದು ವರ್ಷಗಳ ಅವಧಿಯಲ್ಲಿ ನೀಡಿದ್ದು ರೂ.88,395 ಕೋಟಿ. ಇದು ನಮ್ಮ ಕಾಳಜಿ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಹೇಳಿದ್ದಾರೆ.

English summary
Karnataka Congress unit decided to hold two SC/ ST communities rally in state ahead of the 2023 assembly elections. Date and place of rally yet to final.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X