ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ರಾಜೀನಾಮೆ ಯಾವಾಗ ಎಂದು ಪ್ರಶ್ನಿಸಿದ ಕಾಂಗ್ರೆಸ್‌

|
Google Oneindia Kannada News

Recommended Video

ಯಡಿಯೂರಪ್ಪ ರಾಜೀನಾಮೆ ಯಾವಾಗ ಎಂದು ಪ್ರಶ್ನಿಸಿದ ಕಾಂಗ್ರೆಸ್‌ | Oneindia Kannada

ಬೆಂಗಳೂರು, ಫೆಬ್ರವರಿ 10 : 'ಆಪರೇಷನ್ ಕಮಲದ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋದಲ್ಲಿನ ಧ್ವನಿ ನನ್ನದೇ' ಎಂದು ಹೇಳಿದ ಯಡಿಯೂರಪ್ಪ ವಿರುದ್ದ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.

ಹುಬ್ಬಳ್ಳಿಯಲ್ಲಿ ಭಾನುವಾರ ಮಾತನಾಡಿದ ಯಡಿಯೂರಪ್ಪ ಅವರು, 'ನನ್ನ ಬಳಿ ಗುರುಮಿಠಕಲ್ ಜೆಡಿಎಸ್ ಶಾಸಕ ನಾಗನಗೌಡ ಪುತ್ರ ಶರಣ್ ಗೌಡ ಮಾತನಾಡಿದ್ದು ನಿಜ. ಮುಖ್ಯಮಂತ್ರಿ ಕುಮಾರಸ್ವಾಮಿಯೇ ನನ್ನ ಬಳಿ ಅವರನ್ನು ಕಳುಹಿಸಿಕೊಟ್ಟಿದ್ದಾರೆ. ಆಡಿಯೋ ಹಿಂದೆ ಅವರು ಕುತಂತ್ರ ರಾಜಕೀಯ ನಡೆಸಿದ್ದಾರೆ' ಎಂದು ದೂರಿದ್ದರು.

ಆಡಿಯೋದಲ್ಲಿರುವ ಧ್ವನಿ ನನ್ನದೇ : ಯಡಿಯೂರಪ್ಪಆಡಿಯೋದಲ್ಲಿರುವ ಧ್ವನಿ ನನ್ನದೇ : ಯಡಿಯೂರಪ್ಪ

ಈ ಹೇಳಿಕೆ ಬಳಿಕ ಕರ್ನಾಟಕ ಕಾಂಗ್ರೆಸ್ ನಾಯಕರು ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಆಡಿಯೋ ನನ್ನದು ಎಂದಾದರೆ ರಾಜೀನಾಮೆ ನೀಡುವೆ' ಎಂಬ ಯಡಿಯೂರಪ್ಪ ಹೇಳಿಕೆ ಉಲ್ಲೇಖಿಸಿ ವಾಗ್ದಾಳಿ ನಡೆಸಲಾಗುತ್ತಿದೆ.

ಶಾಸಕರನ್ನು ಖರೀದಿ ಮಾಡುವಷ್ಟು ಹಣ ಇಲ್ಲ : ಎಚ್.ಡಿ.ಕುಮಾರಸ್ವಾಮಿಶಾಸಕರನ್ನು ಖರೀದಿ ಮಾಡುವಷ್ಟು ಹಣ ಇಲ್ಲ : ಎಚ್.ಡಿ.ಕುಮಾರಸ್ವಾಮಿ

ಸಾಮಾಜಿಕ ಜಾಲತಾಣದಲ್ಲಿ ಯಡಿಯೂರಪ್ಪ ವಿರುದ್ದ ಸರಣಿ ಟ್ವೀಟ್‌ಗಳನ್ನು ಮಾಡಲಾಗುತ್ತಿದೆ. ಸೋಮವಾರ ವಿಧಾನಸಭೆಯಲ್ಲಿ ಈ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್‌ ಗದ್ದಲವೆಬ್ಬಿಸುವ ಸಾಧ್ಯತೆ ಇದೆ.

ಯಡಿಯೂರಪ್ಪ ಆತ್ಮಸಾಕ್ಷಿಗೆ ಅಭಿನಂದನೆ ಸಲ್ಲಿಸಿದ ಡಿ.ಕೆ.ಶಿವಕುಮಾರ್ಯಡಿಯೂರಪ್ಪ ಆತ್ಮಸಾಕ್ಷಿಗೆ ಅಭಿನಂದನೆ ಸಲ್ಲಿಸಿದ ಡಿ.ಕೆ.ಶಿವಕುಮಾರ್

ಮೊದಲು ನಿವೃತ್ತಿ ಘೋಷಿಸಿ ನುಡಿದಂತೆ ನಡೆಯಲಿ

ಮೊದಲು ಬಿ.ಎಸ್.ಯಡಿಯೂರಪ್ಪ ಅವರು ಘೋಷಿಸಿದಂತೆ ನಡೆಯಲಿ. ಅವರು ಮೊದಲು ರಾಜಕೀಯ ನಿವೃತ್ತಿ ಪಡೆಯಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇವತ್ತು ಒಪ್ಪಿಕೊಂಡಿದ್ದಾರೆ

ಇವತ್ತು ಒಪ್ಪಿಕೊಂಡಿದ್ದಾರೆ

'ಬಿ.ಎಸ್.ಯಡಿಯೂರಪ್ಪ ಅವರು ಅವತ್ತು ನಾನು ಮಾತನಾಡಿಲ್ಲ ಎಂದಿದ್ದರು. ಇವತ್ತು ಒಪ್ಪಿಕೊಂಡಿದ್ದಾರೆ. ಬಹುಶಃ ಮಂಜುನಾಥೇಶ್ವರ ಸ್ವಾಮೀ ಬುದ್ಧಿ ನೀಡಿರಬೇಕು' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಿವೃತ್ತಿ ಪಡೆಯಿರಿ, ತನಿಖೆ ಎದುರಿಸಿ

ಯಡಿಯೂರಪ್ಪ ಅವರು ತಪ್ಪನ್ನು ಒಪ್ಪಿಕೊಂಡಿದ್ದಾರೆ. ಎಲ್ಲಾ ಸ್ಥಾನಮಾನಗಳಿಂದ ಅವರು ಕೆಳಗಿಳಿಯಲಿ ತಕ್ಷಣ ತನಿಖೆ ಎದುರಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ನಿವೃತ್ತಿ ದಿನಾಂಕ ಘೋಷಿಸಿ

ಬಿಡುಗಡೆ ಮಾಡಿದ ಆಡಿಯೋದಲ್ಲಿ ಧ್ವನಿ ನನ್ನದೇ ಎಂದು ಬಿಎಸ್‌ವೈ ಒಪ್ಪಿಕೊಂಡಿದ್ದಾರೆ. ಯಡಿಯೂರಪ್ಪ ಅವರು ನುಡಿದಂತೆ ನಡೆಯಿಲಿ, ನಿವೃತ್ತಿ ದಿನಾಂಕ ಘೋಷಿಸಿ ಎಂದು ಕರ್ನಾಟಕ ಕಾಂಗ್ರೆಸ್‌ ಟ್ವೀಟ್ ಮಾಡಿದೆ.

ಆತ್ಮಸಾಕ್ಷಿಗೆ ಅಭಿನಂದನೆ ಸಲ್ಲಿಸುತ್ತೇನೆ

ಆತ್ಮಸಾಕ್ಷಿಗೆ ಅಭಿನಂದನೆ ಸಲ್ಲಿಸುತ್ತೇನೆ

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, 'ಅವರು ಹೇಳಿದ ಮೇಲೆ ಮಿಮಿಕ್ರಿ ಪ್ರಶ್ನೆ ಬರುವುದಿಲ್ಲ. ಯಡಿಯೂರಪ್ಪನವರ ಅತ್ಮಸಾಕ್ಷಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮಿಕ್ಕಿದ ವಿಚಾರವನ್ನು ಸೋಮವಾರ ಸ್ಪೀಕರ್ ನೋಡಿಕೊಳ್ಳುತ್ತಾರೆ. ಕೆಲವರ ವಾಯ್ಸ್ ಅನ್ನು ಯಾರು ಮಿಮಿಕ್ರಿ ಮಾಡಲು ಸಾಧ್ಯವಿಲ್ಲ' ಎಂದರು.

English summary
Karnataka Congress demand for BJP president B.S.Yeddyurappa resignation after his clarification operation kamala. Chief Minister H.D.Kumaraswamy on February 8 released audio of operation kamala Yeddyurappa talking with JD(S) MLA son.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X